ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಮುತ್ತಿಟ್ಟವನಿಗಾಗಿ ಶೋಧ ನಡೆಸುತ್ತಿರುವ ಪೊಲೀಸರು!
ಬೆಂಗಳೂರು: ಬಸ್ಸಿನಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿಗೆ ಸಿನಿಮಾ ಶೈಲಿಯಲ್ಲಿ ಮುತ್ತು ನೀಡಲು ಹೋದ ಯುವಕನಿಗೆ ಇದೀಗ ಸಂಕಷ್ಟ ಆರಂಭವಾಗಿದ್ದು, ಇದೀಗ ಮುತ್ತು ನೀಡಿ ಪರಾರಿಯಾದ ಯುವಕನಿಗಾಗಿ ಪೊಲೀಸರು ಶೋಧ ಆರಂಭಿಸಿದ್ದಾರೆ.
ಇಂಜಿನಿಯರಿಂಗ್ ವಿದ್ಯಾರ್ಥಿನಿಯೋರ್ವರು ಬಸ್ಸಿನಲ್ಲಿ ಗಣಪತಿ ಹಬ್ಬದ ನಿಮಿತ್ತ ತಮ್ಮ ಊರಿಗೆ ಹೊರಟಿದ್ದರು. ಸೆ.12ರಂದು ಕೆಎಸ್ಸಾರ್ಟಿಸಿ ಬಸ್ ನಲ್ಲಿ ಬೆಂಗಳೂರಿಗೆ ಬರುತ್ತಿದ್ದರು. ಅದೇ ಬಸ್ ನಲ್ಲಿದ್ದ ಅಪರಿಚಿತ ಯುವಕನೋರ್ವ ವಿದ್ಯಾರ್ಥಿನಿಯನ್ನು ಅಂದು ಗುರಾಯಿಸಿ ನೋಡುತ್ತಿದ್ದ ಎನ್ನಲಾಗಿದೆ. ಆದರೆ ಇದಕ್ಕೆ ಯುವತಿ ತಲೆಕೆಡಿಸಿಕೊಂಡಿರಲಿಲ್ಲ.
ಮರುದಿನ ಬೆಳಗ್ಗೆ 5 ಗಂಟೆಯ ಸುಮಾರಿಗೆ ಈ ಬಸ್ ಬೆಂಗಳೂರಿಗೆ ಬರುತ್ತಿದ್ದಂತೆ ಆತ ವಿದ್ಯಾರ್ಥಿನಿಯ ಸೀಟಿನ ಬಳಿಗೆ ಹೋಗಿದ್ದಾನೆ. ವಿದ್ಯಾರ್ಥಿನಿ ನಿದ್ದೆಯಲ್ಲಿರುವುದನ್ನು ಕಂಡು ದಾಸರಗಳ್ಳಿ, ಪೀಣ್ಯ ಮಾರ್ಗ ಮಧ್ಯೆ ಮುತ್ತು ಕೊಟ್ಟು ಲೈಂಗಿಕ ಕಿರುಕುಳ ನೀಡಿದ್ದಾನೆ.
ಈ ವೇಳೆ ತಕ್ಷಣವೇ ವಿದ್ಯಾರ್ಥಿನಿ ಎಚ್ಚೆತ್ತುಕೊಂಡು ಆತನನ್ನು ಹಿಡಿಯುವಷ್ಟರಲ್ಲಿ ಆತ ಪೀಣ್ಯ ಬಸ್ ನಿಲ್ದಾನದಲ್ಲಿ ಇಳಿದು ಪರಾರಿಯಾಗಿದ್ದಾನೆ. ಇದೀಗ ಆರೋಪಿಯ ಬಂಧನಕ್ಕಾಗಿ ಪೊಲೀಸರು ಸಿಸಿ ಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿದ್ದು, ಶೋಧ ನಡೆಸುತ್ತಿದ್ದಾರೆ.
ಬಸ್ಸಿನಲ್ಲಿ ಯಾವುದೇ ಭಯವಿಲ್ಲದೇ ಲೈಂಗಿಕ ಕಿರುಕುಳ ನೀಡುವಂತಹ ಘಟನೆಗಳು ಇದೀಗ ಮಹಿಳೆಯರಲ್ಲಿ ಆತಂಕವನ್ನುಂಟು ಮಾಡಿದೆ. ಸಾರ್ವಜನಿಕ ಬಸ್ ಗಳಲ್ಲಿಯೇ ಹೆಣ್ಣು ಮಕ್ಕಳಿಗೆ ರಕ್ಷಣೆ ಇಲ್ಲವಾದರೆ, ಹೆಣ್ಣು ಮಕ್ಕಳು ಹೇಗೆ ಇಲ್ಲಿ ಬದುಕುವುದು ಎನ್ನುವ ಪ್ರಶ್ನೆಗಳನ್ನು ಕೇಳುತ್ತಿದ್ದಾರೆ. ಇನ್ನೊಂದೆಡೆಯಲ್ಲಿ ಪೊಲೀಸರು ಕಾಮುಕನ ಹೆಡೆಮುರಿಕಟ್ಟಲು, ಎಲ್ಲ ಸಿದ್ಧತೆಗಳನ್ನು ನಡೆಸುತ್ತಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ಇನ್ನಷ್ಟು ಸುದ್ದಿಗಳು…
ಭಯಾನಕ ಘಟನೆ: ಜೋಡಿಯನ್ನು ದೆಹಲಿಯಿಂದ ಅಪಹರಿಸಿ, ಮಧ್ಯಪ್ರದೇಶದಲ್ಲಿ ಹತ್ಯೆ ಮಾಡಿ ವಿಭಿನ್ನ ರಾಜ್ಯಗಳಲ್ಲಿ ಎಸೆದ ಪಾಪಿಗಳು
ಪತ್ನಿಗೆ ಅಸ್ವಾಭಾವಿಕ ಲೈಂಗಿಕ ಕಿರುಕುಳ, ಹಲ್ಲೆ | ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅರೆಸ್ಟ್!
ಚಲಿಸುತ್ತಿರುವ ರೈಲಿನಲ್ಲಿ ಹುಚ್ಚಾಟ ಮೆರೆದ ಯುವಕರು!
ಅತ್ಯಾಚಾರ ಯತ್ನ ವಿಫಲವಾದಾಗ ವೃದ್ಧೆಯನ್ನು ಕೊಂದು ಮೃತದೇಹದ ಮೇಲೆಯೇ ಹೇಯ ಕೃತ್ಯ
ತಲೆಗೆ ಗುಂಡು ಹಾರಿಸಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆ: ಆತ್ಮಹತ್ಯೆಯೋ?, ಕೊಲೆಯೋ? ಎಂಬ ಶಂಕೆ!
ಕ್ಲಬ್ ಹೌಸ್ ಹೌಸ್ ನಲ್ಲಿ ಇಂದು ಪ್ರಧಾನಿ ಮೋದಿ ಜನ್ಮ ದಿನಾಚರಣೆ: ಸಂಸದ ಪ್ರತಾಪ್ ಸಿಂಹ ಭಾಷಣ
ಶಾಕಿಂಗ್ ನ್ಯೂಸ್: ಭಾರತದಲ್ಲಿ ಪ್ರತಿದಿನ 80 ಕೊಲೆ, 77 ಅತ್ಯಾಚಾರ ಪ್ರಕರಣಗಳು ದಾಖಲಾಗ್ತಿವೆ!