ಸಿಲಿಕಾನ್ ಸಿಟಿ ಫ್ಲೈಓವರ್ ನಲ್ಲಿ ಆಕ್ಸಿಡೆಂಡ್ ಆದ ಜಾಗದಲ್ಲಿಯೇ ಕಾರು ನಿಲ್ಲಿಸಿ ಯುವಕ, ಯುವತಿಯರ ಡಾನ್ಸ್!
ಬೆಂಗಳೂರು: ಸಾಲು ಸಾಲು ಭೀಕರ ಅಪಘಾತವಾಗುತ್ತಿದ್ದರೂ, ಯುವ ಜನತೆ ಮಾತ್ರ ಇನ್ನೂ ಬುದ್ಧಿ ಕಲಿತಂತಿಲ್ಲ. ಮೊನ್ನೆಯಷ್ಟೇ ಪ್ಲೈಓವರ್ ನಲ್ಲಿ ಭೀಕರ ಅಪಘಾತ ನಡೆದು ಇಬ್ಬರು ಯುವಕ ಯುವತಿ 40 ಅಡಿ ಎತ್ತರದಿಂದ ಕೆಳಕ್ಕೆ ಬಿದ್ದು ಮೃತಪಟ್ಟ ಬೆನ್ನಲ್ಲೇ ಅದೇ ಸ್ಥಳದಲ್ಲಿ ಕಾರು ನಿಲ್ಲಿಸಿಕೊಂಡು ಯುವಕ, ಯುವತಿಯರು ಡಾನ್ಸ್ ಮಾಡುತ್ತಿರುವ ದೃಶ್ಯವೊಂದು ಇದೀಗ ಮಾಧ್ಯಮಗಳಲ್ಲಿ ಪ್ರಸಾರವಾಗಿದೆ.
ಐಷಾರಾಮಿ ಕಾರಿನಲ್ಲಿ ಬಂದು ಎಲೆಕ್ಟ್ರಾನಿಕ್ ಸಿಟಿ ಮೇಲ್ಸೇತುವೆಯಲ್ಲಿ ಮೊನ್ನೆಯಷ್ಟೇ ಆಕ್ಸಿಡೆಂಟ್ ಆಗಿ ಇಬ್ಬರು ಸಾವಿಗೀಡಾಗಿರುವ ಸ್ಥಳದಲ್ಲಿಯೇ ಕಾರು ನಿಲ್ಲಿಸಿ, ಡಾನ್ಸ್ ಮಾಡುತ್ತಿರುವ ದೃಶ್ಯ ಕಂಡು ಬಂದಿದೆ.
ಕೆಎ 01 ಎಂಜಿ 1929 ನಂಬರ್ ನ ಕಾರಿನಲ್ಲಿ ಬಂದ ತಂಡ ಈ ಪ್ರದೇಶದಲ್ಲಿ ಡಾನ್ಸ್ ಮಾಡಿದೆ ಎಂದು ಸುದ್ದಿವಾಹಿನಿಯೊಂದು ವರದಿ ಮಾಡಿದೆ. ಕಣ್ಣೆದುರೇ ದುರಂತ ಘಟನೆಗಳಿರೋವಾಗ ಈ ರೀತಿಯ ವರ್ತನೆ ಮಾಡುತ್ತಿದ್ದಾರೆ. ಇವರಿಗೆಲ್ಲ ಪ್ರಾಣದ ಮೇಲಿನ ಆಸೆಯೇ ಇಲ್ಲವೇ? ಎನ್ನುವ ಪ್ರಶ್ನೆಗಳು ಇದೀಗ ಕೇಳಿ ಬಂದಿವೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ.
ಇನ್ನಷ್ಟು ಸುದ್ದಿಗಳು…
ಮೋದಿಜಿಗೆ ಹುಟ್ಟು ಹಬ್ಬದ ಶುಭಾಶಯ ಹೇಳಿದವರಿಗಿಂತ ಉದ್ಯೋಗ ಕೇಳಿದವರ ಸಂಖ್ಯೆಯೇ ಹೆಚ್ಚು!
ಬಸ್ಸಿನಲ್ಲಿ ವಿದ್ಯಾರ್ಥಿನಿಗೆ ಮುತ್ತಿಟ್ಟವನಿಗಾಗಿ ಶೋಧ ನಡೆಸುತ್ತಿರುವ ಪೊಲೀಸರು!
ಭಯಾನಕ ಘಟನೆ: ಜೋಡಿಯನ್ನು ದೆಹಲಿಯಿಂದ ಅಪಹರಿಸಿ, ಮಧ್ಯಪ್ರದೇಶದಲ್ಲಿ ಹತ್ಯೆ ಮಾಡಿ ವಿಭಿನ್ನ ರಾಜ್ಯಗಳಲ್ಲಿ ಎಸೆದ ಪಾಪಿಗಳು
ಪತ್ನಿಗೆ ಅಸ್ವಾಭಾವಿಕ ಲೈಂಗಿಕ ಕಿರುಕುಳ, ಹಲ್ಲೆ | ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅರೆಸ್ಟ್!
ಅತ್ಯಾಚಾರ ಯತ್ನ ವಿಫಲವಾದಾಗ ವೃದ್ಧೆಯನ್ನು ಕೊಂದು ಮೃತದೇಹದ ಮೇಲೆಯೇ ಹೇಯ ಕೃತ್ಯ
ತಲೆಗೆ ಗುಂಡು ಹಾರಿಸಿದ ಸ್ಥಿತಿಯಲ್ಲಿ ವಿದ್ಯಾರ್ಥಿಯ ಶವ ಪತ್ತೆ: ಆತ್ಮಹತ್ಯೆಯೋ?, ಕೊಲೆಯೋ? ಎಂಬ ಶಂಕೆ!
ಕ್ಲಬ್ ಹೌಸ್ ಹೌಸ್ ನಲ್ಲಿ ಇಂದು ಪ್ರಧಾನಿ ಮೋದಿ ಜನ್ಮ ದಿನಾಚರಣೆ: ಸಂಸದ ಪ್ರತಾಪ್ ಸಿಂಹ ಭಾಷಣ
ಭೀಕರ ಅಪಘಾತ: ಬಸ್, ಟಾಟಾ ಏಸ್ ವಾಹನದ ನಡುವೆ ಸಿಲುಕಿದ ತಂದೆ, ಮಗಳು ಸಾವು