ಮತ್ತೆ ಮೈತ್ರಿಯಾಗುತ್ತಾ ಶಿವಸೇನೆ, ಬಿಜೆಪಿ | ಕುತೂಹಲಕ್ಕೆ ಕಾರಣವಾದ ಠಾಕ್ರೆ ಹೇಳಿಕೆ
ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನಸಭಾ ಚುನಾವಣೆ ನಡೆದ ಬಳಿಕ ಬಿಜೆಪಿ ಶಿವಸೇನೆ ಮೈತ್ರಿ ಮುರಿದು ಬಿದ್ದಿತ್ತು. ಆದರೆ, ಇದೀಗ ಬಿಜೆಪಿ ಮತ್ತು ಶಿವಸೇನೆ ಮತ್ತೊಮ್ಮೆ ಮೈತ್ರಿಯಾಗುತ್ತದೆಯೇ? ಎನ್ನುವ ಪ್ರಶ್ನೆಗಳು ಕೇಳಿ ಬಂದಿದೆ.
ಔರಾಂಗಾಬಾದ್ ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೇಂದ್ರ ಸಚಿವ ರೌಸಾಹೇಬ್ ದಾನ್ವೆ ಸೇರಿದಂತೆ ಹಲವು ನಾಯಕರನ್ನು ಭವಿಷ್ಯದ ಸಹೋದ್ಯೋಗಿಗಳು ಎಂದು ಉದ್ಧವ್ ಠಾಕ್ರೆ ಸಂಬೋಧಿಸಿರುವುದೇ ಈ ಊಹಾಪೋಹ ಉಂಟಾಗಲು ಕಾರಣ ಎನ್ನಲಾಗಿದೆ. ನಾವು ಒಂದಾದರೆ ಭವಿಷ್ಯ ಸಹೋದ್ಯೋಗಿಗಳೇ ಎಂಬ ಪದಕ್ಕೆ ಅವರು ಹೆಚ್ಚಿನ ಒತ್ತು ನೀಡಿದರು.
ಇನ್ನೂ ಈ ಹೇಳಿಕೆ ಸಂಬಂಧ ಬಳಿಕ ಮಾಧ್ಯಮದ ಎದುರು ಮಾತನಾಡಿದ ಅವರು, ಹಿಂದಿನ ಹಾಗೂ ಪ್ರಸ್ತುತ ಸಹೋದ್ಯೋಗಿಗಳು ಅಲ್ಲಿ ಇದ್ದುದರಿಂದ ತಾವು ಈ ರೀತಿ ಹೇಳಿದ್ದಾಗಿ ವಿವರಣೆ ನೀಡಿದ್ದಾರೆ. ಆದರೆ, ಠಾಕ್ರೆ ಹೇಳಿಕೆಯು, ಭವಿಷ್ಯದ ಚುನಾವಣೆಯಲ್ಲಿ ಬಿಜೆಪಿ, ಶಿವಸೇನೆ ಮೈತ್ರಿಯಾಗುತ್ತದೆ ಎನ್ನುವ ಅನುಮಾನಗಳಿಗೆ ಕಾರಣವಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ಇನ್ನಷ್ಟು ಸುದ್ದಿಗಳು…
ನಟ ದರ್ಶನ್ ಫಾರಂ ಹೌಸ್ ನಲ್ಲಿ ಅಪ್ರಾಪ್ತೆಯ ಮೇಲೆ ಅತ್ಯಾಚಾರ!
ಮಕ್ಕಳಲ್ಲಿ ಹೆಚ್ಚುತ್ತಿದೆ ವೈರಲ್ ಜ್ವರ: ಪೋಷಕರಲ್ಲಿ ಆತಂಕ
ಒಂದೇ ಕುಟುಂಬದ ಐವರು ಆತ್ಮಹತ್ಯೆ: ಮನೆಯೊಳಗೆ ಒಬ್ಬಂಟಿಯಾಗಿತ್ತು 3 ವರ್ಷದ ಮಗು!
ಸಿಲಿಕಾನ್ ಸಿಟಿ ಫ್ಲೈಓವರ್ ನಲ್ಲಿ ಆಕ್ಸಿಡೆಂಡ್ ಆದ ಜಾಗದಲ್ಲಿಯೇ ಕಾರು ನಿಲ್ಲಿಸಿ ಯುವಕ, ಯುವತಿಯರ ಡಾನ್ಸ್!
ಮೋದಿಜಿಗೆ ಹುಟ್ಟು ಹಬ್ಬದ ಶುಭಾಶಯ ಹೇಳಿದವರಿಗಿಂತ ಉದ್ಯೋಗ ಕೇಳಿದವರ ಸಂಖ್ಯೆಯೇ ಹೆಚ್ಚು!
ಪತ್ನಿಗೆ ಅಸ್ವಾಭಾವಿಕ ಲೈಂಗಿಕ ಕಿರುಕುಳ, ಹಲ್ಲೆ | ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಅರೆಸ್ಟ್!