ಮಠದಲ್ಲಿಯೇ ಸ್ವಾಮೀಜಿಯ ಮರ್ಡರ್!? | ನೇಣು ಬಿಗಿದ ಸ್ಥಿತಿಯಲ್ಲಿ ಸ್ವಾಮೀಜಿಯ ಮೃತದೇಹ ಪತ್ತೆ
ಪ್ರಯಾಗ್ ರಾಜ್: ಅಖಾರ ಪರಿಷತ್ ಅಧ್ಯಕ್ಷ ಮಹಾಂತ ನರೇಂದ್ರ ಗಿರಿ ನೇಣು ಬಿಗಿದು ಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಸ್ವಾಮೀಜಿಯ ಸಾವಿನ ಬಗ್ಗೆ ವಿವಿಧ ಶ್ರೀಗಳು ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿದ್ದಾರೆ.
ಅಖಿಲ ಭಾರತೀಯ ಅಖಾರ ಪರಿಷತ್ತಿನ ಅಧ್ಯಕ್ಷ ಮಹಂತ್ ನರೇಂದ್ರ ಗಿರಿ ಮೃತದೇಹ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಪ್ರಯಾಗ್ ರಾಜ್ ಬಘಂಬ್ರಿ ಗಡ್ಡಿ ಮಠದಲ್ಲಿ ನರೇಂದ್ರ ಗಿರಿ ಅನುಮಾನಾಸ್ಪವಾಗಿ ಸಾವನ್ನಪ್ಪಿದ್ದಾರೆ. ಮಾಹಿತಿ ಪಡೆದ ತಕ್ಷಣ ಸ್ಥಳೀಯ ಪೊಲೀಸರು ಹಾಗೂ ಉನ್ನತ ಅಧಿಕಾರಿಗಳೊಂದಿಗೆ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.
ಮೇಲ್ನೋಟಕ್ಕೆ ಇದೊಂದು ಆತ್ಮಹತ್ಯೆ ಎಂದು ಕಂಡು ಬಂದರೂ, ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸ್ವಾಮೀಜಿಗೆ ಶಿಷ್ಯ ಆನಂದಗಿರಿ ಜೊತೆಗೆ ವಿವಾದವಿತ್ತು ಎನ್ನಲಾಗಿದೆ. ಮಠ ಮತ್ತು ದೇವಾಲಯದ ಕುಟುಂಬ ಮತ್ತು ಹಣದ ದುರುಪಯೋಗಕ್ಕೆ ಸಂಬಂಧಿಸಿದಂತೆ ಸ್ವಾಮಿ ಆನಂದ ಗಿರಿ ವಿರುದ್ಧ ಕ್ರಮಕೈಗೊಳ್ಳಲಾಗಿತ್ತು.
ಅಖಾರ, ಮಠ ಮತ್ತು ದೇವಸ್ಥಾನದಿಂದ ಹೊರಹಾಕಲ್ಪಟ್ಟ ನಂತರ ಆನಂದ್ ಗಿರಿ ತನ್ನ ಗುರು ಮಹಾಂತ ನರೇಂದ್ರ ಗಿರಿ ವಿರುದ್ಧ ಅನೇಕ ಹೇಳಿಕೆಗಳನ್ನು ನೀಡಿದ್ದರು. ಅವರ ವಿರುದ್ಧವೂ ಹಲವಾರು ಆರೋಪಗಳನ್ನು ಹೊರಿಸಲಾಗಿದೆ. ಅದರ ನಂತರ ಅಖಾರ ಪರಿಷತ್ ಕೂಡ ಈ ವಿಷಯದ ಬಗ್ಗೆ ಸಭೆ ಕರೆದಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on
ಇನ್ನಷ್ಟು ಸುದ್ದಿಗಳು…
ನಾನು ಎರಡು ಬಾರಿ ರಾಜ್ಯಸಭಾ ಸ್ಥಾನವನ್ನು ನಿರಾಕರಿಸಿದ್ದೇನೆ | ನಟ ಸೋನು ಸೂದ್
ಪಂಜಾಬ್ ನಲ್ಲಿ ಪ್ರಥಮ ದಲಿತ ಸಿಎಂ ಆಗಿ ಚರಣಜಿತ್ ಸಿಂಗ್ ಆಯ್ಕೆ | ದೇಶದ್ಯಾದ್ಯಂತ ‘ದಲಿತ ಸಿಎಂ’ ಚರ್ಚೆ
ಬಾಲಕಿಗೆ ಲೈಂಗಿಕ ಕಿರುಕುಳ ನೀಡಿದ ಮುಖ್ಯೋಪಾಧ್ಯಾಯನಿಗೆ ಪೊಲೀಸರ ಎದುರೇ ಹಿಗ್ಗಾಮುಗ್ಗಾ ಥಳಿಸಿದ ಜನರು!
ಮಗಳನ್ನು ಚುಡಾಯಿಸಬೇಡ ಎಂದಿದ್ದಕ್ಕೆ ಬಾಲಕಿಯ ತಂದೆಗೆ ಮಾರಣಾಂತಿಕ ಹಲ್ಲೆ!