ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ರಾಜಕೀಯಕ್ಕೆ ಎಂಟ್ರಿ? | ಆಸ್ಕರ್ ಫೆರ್ನಾಂಡಿಸ್ ಸ್ಥಾನ ತುಂಬುತ್ತಾರಾ? - Mahanayaka

ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ರಾಜಕೀಯಕ್ಕೆ ಎಂಟ್ರಿ? | ಆಸ್ಕರ್ ಫೆರ್ನಾಂಡಿಸ್ ಸ್ಥಾನ ತುಂಬುತ್ತಾರಾ?

bhaskar rao
21/09/2021

ಬೆಂಗಳೂರು: ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ಅವರು ರಾಜಕೀಯಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿದ್ದು, ಸದ್ಯ ತಮ್ಮ ಸ್ವಯಂ ನಿವೃತ್ತಿಗೆ ಅರ್ಜಿ ಕೂಡ ಸಲ್ಲಿಸಿದ್ದಾರೆ ಎಂದು ಹೇಳಲಾಗಿದೆ. ಸದ್ಯದ ವರದಿಗಳ ಪ್ರಕಾರ ಅವರು ಕಾಂಗ್ರೆಸ್ ಪಕ್ಷದಲ್ಲಿ ಮುಂದೆ ಗುರುತಿಸಿಕೊಳ್ಳಲಿದ್ದಾರೆ ಎಂದು ಹೇಳಲಾಗಿದೆ.

ಕಾಂಗ್ರೆಸ್ ನ ಹಿರಿಯ ನಾಯಕರಾದ ಆಸ್ಕರ್ ಫೆರ್ನಾಂಡಿಸ್ ಅವರ ನಿಧನದಿಂದಾಗಿ ತೆರವಾಗಿರುವ ಸ್ಥಾನಗಳಿಗೆ ಸದ್ಯದಲ್ಲಿಯೇ ಉಪ ಚುನಾವಣೆ ನಡೆಯಲಿದ್ದು, ಈ ಚುನಾವಣೆಯಲ್ಲಿ ಭಾಸ್ಕರ್ ರಾವ್ ಅವರು ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ನಿರ್ಧರಿಸಿರುವ ಮಾಹಿತಿ ದೊರೆತಿದೆ ಎಂದು ಕನ್ನಡ ಸುದ್ದಿವಾಹಿನಿಯೊಂದು ವರದಿ ಮಾಡಿದೆ.

ರಾಜ್ಯ ಸಭಾ ಉಪ ಚುನಾವಣೆಯಲ್ಲಿ ಸ್ಪರ್ಧಿಸಬೇಕು ಎಂಬ ನಿರ್ಧಾರದ ಹಿನ್ನೆಲೆಯಲ್ಲಿ ಅವರು  ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಅವರು ಈಗಾಗಲೇ ತಮ್ಮ ಕರ್ತವ್ಯದಿಂದ ಸ್ವಯಂ ನಿವೃತ್ತಿಗಾಗಿ ಅರ್ಜಿ ಸಲ್ಲಿಸಿದ್ದಾರೆಂದು ಹೇಳಲಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on

ಇನ್ನಷ್ಟು ಸುದ್ದಿಗಳು…

ಗೋಶಾಲೆಗಳನ್ನೇ ಮಾಂಸ ಮಾರಾಟ ಕೇಂದ್ರಗಳನ್ನಾಗಿಸುವ ಹುನ್ನಾರ ನಡೆಯುತ್ತಿದೆ | ಕೋಡಿಹಳ್ಳಿ ಚಂದ್ರಶೇಖರ್ ಗಂಭೀರ ಆರೋಪ

ಮಾಟ ಮಂತ್ರದ ಕಾರಣ ನೀಡಿ, ಶಿಕ್ಷಣ ಸಂಸ್ಥೆಗೆ ನುಗ್ಗಿ ಮೂವರು ಮಹಿಳೆಯರಿಗೆ ತಲವಾರು ಬೀಸಿದ ಯುವಕ | ಓರ್ವ ಮಹಿಳೆ ಸ್ಥಿತಿ ಗಂಭೀರ

ಮಂತ್ರವಾದಿಯ ಮಾತು ನಂಬಿ, ನಿಧಿಗಾಗಿ ಮನೆಯೊಳಗೆ 20 ಅಡಿ ಗುಂಡಿ ತೋಡಿದ!

ದೆವ್ವ ಬಿಡಿಸುವ ನೆಪದಲ್ಲಿ ಕಾಡಿಗೆ ಕರೆದೊಯ್ದು 16ರ ಬಾಲಕಿಯ ಮೇಲೆ ಸಾಧುವಿನಿಂದ ಅತ್ಯಾಚಾರ!

2 ವರ್ಷದ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ: ಕ್ರಮಕೈಗೊಳ್ಳುವ ತಾಕತ್ ಇಲ್ಲದೇ ಭಾಷಣ ಬಿಗಿದು ಹೋದ ಅಧಿಕಾರಿಗಳು

ಸುಳ್ಳು ಜಾತಿ ಪ್ರಮಾಣ ಪತ್ರ:  ತಹಶೀಲ್ದಾರ್ ಸೇರಿದಂತೆ ಐವರ ವಿರುದ್ಧ ಎಫ್ ಐಆರ್

ಇತ್ತೀಚಿನ ಸುದ್ದಿ