ಕೊಪ್ಪಳ ಘಟನೆ: ಬಿಜೆಪಿ, ಹಿಂದೂತ್ವ ಸಂಘಟನೆಗಳಿಗೆ ನಾಚಿಕೆಗೇಡು! | ಬಿಜೆಪಿ ಮನುವಾದಿ ಎಂದ ಕಾಂಗ್ರೆಸ್
ಬೆಂಗಳೂರು: ಕೊಪ್ಪಳದಲ್ಲಿ ದಲಿತ ಮಗು ದೇವಸ್ಥಾನ ಪ್ರವೇಶಿಸಿದ್ದಕ್ಕೆ ಪೋಷಕರ ಮೇಲೆ ದಂಡ ಹಾಕಿ ಅಸ್ಪೃಷ್ಯತಾ ಆಚರಣೆ ನಡೆಸಿರುವ ಘಟನೆಯ ಬಗ್ಗೆ ರಾಜ್ಯಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಜೊತೆಗೆ, ಬಿಜೆಪಿ ಸರ್ಕಾರ ಹಾಗೂ ಹಿಂದೂತ್ವ ಸಂಘಟನೆಗಳ ಮೌನವನ್ನು ಕೂಡ ಜನ ಪ್ರಶ್ನೆ ಮಾಡುತ್ತಿದ್ದು, ಇಂತಹ ಘಟನೆಗಳ ವಿರುದ್ಧ ಧ್ವನಿಯೆತ್ತದಿರುವುದು ನಾಚಿಕೆಗೇಡಿನ ಸಂಗತಿ ಎಂದು ಜನರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕೊಪ್ಪಳದಲ್ಲಿ ಅಸ್ಪೃಶ್ಯತೆಯ ಆಚರಣೆಗೆ ಸಂಬಂಧಿಸಿದಂತೆ ರಾಜ್ಯ ಕಾಂಗ್ರೆಸ್ ಕೂಡ ಆಕ್ರೋಶ ವ್ಯಕ್ತಪಡಿಸಿದ್ದು, ಮನುಸ್ಮೃತಿಯನ್ನು ನಂಬಿರುವ ಬಿಜೆಪಿ ತನ್ನ ಗುಪ್ತ ಅಜೆಂಡಾವಾದ ದಲಿತ ವಿರೋಧಿ ವಾತಾವರಣವನ್ನು ವ್ಯವಸ್ಥಿತವಾಗಿ ಸ್ಥಾಪಿಸುತ್ತಿರುವ ಪರಿಣಾಮದಿಂದಲೇ ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಹೆಚ್ಚುತ್ತಿದೆ ಎಂದ ಕಾಂಗ್ರೆಸ್ ಟೀಕಿಸಿದೆ.
ಬಿಜೆಪಿ ಪಕ್ಷದ ಸಂಪುಟದಲ್ಲಿ ದಲಿತರಿಗೆ ಅವಕಾಶ ನೀಡದೆ ತನಗಿರುವ ದಲಿತರ ಮೇಲಿನ ಅಸಹನೆಯನ್ನ ಬಹಿರಂಗಪಡಿಸಿದೆ. ಬಿಜೆಪಿ ತನ್ನ ಆಡಳಿತದಲ್ಲಿ ದಲಿತ ವಿರೋಧಿ ವಾತಾವರಣ ನಿರ್ಮಿಸುತ್ತಿದೆ. ದಲಿತರಿಗೆ ಮೂತ್ರ ಕುಡಿಸುವುದರಿಂದ ಹಿಡಿದು ಬಹಿಷ್ಕಾರ, ಹಲ್ಲೆಯ ಪ್ರಕರಣಗಳು ಹೆಚ್ಚುತ್ತಿವೆ ಎಂದು ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಬಿಜೆಪಿ ಮನುವಾದಿ ಆಡಳಿತದಲ್ಲಿ ದಲಿತರಿಗೆ ನೆಮ್ಮದಿಯ ಬದುಕಿಲ್ಲದಾಗಿದೆ. ಕೇಂದ್ರ ಸಚಿವ ನಾರಾಯಣಸ್ವಾಮಿ ಅವರು ಕಟ್ಟಲು ಹೊರಟ ಹಿಂದೂರಾಷ್ಟ್ರದ ಅಡಿಗಲ್ಲು ಇದೇನಾ!? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on
ಇನ್ನಷ್ಟು ಸುದ್ದಿಗಳು…
ಹಿರಿಯ ಪೊಲೀಸ್ ಅಧಿಕಾರಿ ಭಾಸ್ಕರ್ ರಾವ್ ರಾಜಕೀಯಕ್ಕೆ ಎಂಟ್ರಿ? | ಆಸ್ಕರ್ ಫೆರ್ನಾಂಡಿಸ್ ಸ್ಥಾನ ತುಂಬುತ್ತಾರಾ?
ಗೋಶಾಲೆಗಳನ್ನೇ ಮಾಂಸ ಮಾರಾಟ ಕೇಂದ್ರಗಳನ್ನಾಗಿಸುವ ಹುನ್ನಾರ ನಡೆಯುತ್ತಿದೆ | ಕೋಡಿಹಳ್ಳಿ ಚಂದ್ರಶೇಖರ್ ಗಂಭೀರ ಆರೋಪ
2 ವರ್ಷದ ದಲಿತ ಮಗು ದೇವಸ್ಥಾನ ಪ್ರವೇಶಿಸಿದಕ್ಕೆ ದಂಡ: ಕ್ರಮಕೈಗೊಳ್ಳುವ ತಾಕತ್ ಇಲ್ಲದೇ ಭಾಷಣ ಬಿಗಿದು ಹೋದ ಅಧಿಕಾರಿಗಳು
ಅಮಾನವೀಯ ಘಟನೆ: ಮಕ್ಕಳ ಹೆಸರಿಗೆ ಆಸ್ತಿ ಬರೆದ ಬಳಿಕ ತಂದೆಯನ್ನು ಕೋಣೆಯೊಳಗೆ ಬಂಧಿಸಿಟ್ಟ ಮಕ್ಕಳು!
ವಿಡಿಯೋದಲ್ಲಿರುವುದು ನಾನಲ್ಲ, ಅದೊಂದು ನಕಲಿ ವಿಡಿಯೋ: ಸದಾನಂದ ಗೌಡ ಸ್ಪಷ್ಟನೆ