ಕೊಪ್ಪಳದಲ್ಲಿ ಅಸ್ಪೃಶ್ಯತಾ ಆಚರಣೆ ಪ್ರಕರಣ: ಐವರು ಕಿಡಿಗೇಡಿಗಳ ಅರೆಸ್ಟ್
ಕೊಪ್ಪಳ: 2 ವರ್ಷ ವಯಸ್ಸಿನ ಬಾಲಕ ದೇವಸ್ಥಾನಕ್ಕೆ ಪ್ರವೇಶಿಸಿದ್ದಕ್ಕೆ ದಂಡ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಕುಷ್ಟಗಿ ಪೊಲೀಸರು ಅರೆಸ್ಟ್ ಮಾಡಿದ್ದು, ಕುಷ್ಟಗಿ ಪೊಲೀಸ್ ಠಾಣೆಯಲ್ಲಿ ವಿಚಾರಣೆ ನಡೆಯುತ್ತಿದೆ ಎಂದು ವರದಿಯಾಗಿದೆ.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಾಲಚಂದ್ರ ಅವರ ದೂರಿನನ್ವಯ ಕನಕಪ್ಪ ಪೂಜಾರಿ, ಹನುಮೇಗೌಡ, ಗವಿ ಸಿದ್ದಪ್ಪ ಮ್ಯಾಗೇರಿ, ವಿರುಪಾಕ್ಷಗೌಡ ಮ್ಯಾಗೇರಿ ಹಾಗೂ ಶರಣಗೌಡ ಎಂಬ ಕಿಡಿಗೇಡಿಗಳ ವಿರುದ್ಧ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
ಹುಟ್ಟು ಹಬ್ಬ ಇದ್ದ ಕಾರಣ ನಾಲ್ಕು ವರ್ಷ ವಯಸ್ಸಿನ ದಲಿತ ಚೆನ್ಮದಾಸರ ಸಮುದಾಯದ ಬಾಲಕ ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಮಿಯಾಪೂರ ಗ್ರಾಮದಲ್ಲಿನ ದೇವಸ್ಥಾನಕ್ಕೆ ಪ್ರವೇಶಿಸಿದ್ದ. ಬಾಲಕ ದೇವಸ್ಥಾನಕ್ಕೆ ಪ್ರವೇಶಿಸಿದ ಎಂದು ಅರ್ಚಕ ಹಾಗೂ ಗ್ರಾಮಸ್ಥರು ದೇವಾಲಯಕ್ಕೆ ಸ್ಯಾನಿಟೈಸರ್ ಹೊಡೆಯಲು 10 ಸಾವಿರ ಹಾಗೂ ಪೂಜೆ ಮಾಡಿ, ಶುದ್ಧೀಕರಣಕ್ಕೆಂದು ಒಟ್ಟು 25 ಸಾವಿರ ರೂಪಾಯಿ ದಂಡ ಹಾಕಿದ್ದರು.
ಇದೊಂದು ಗಂಭೀರವಾದ ವಿಚಾರವಾಗಿದ್ದರೂ, ಅಭಿವೃದ್ಧಿ ಹೊಂದಿರುವ ಬಲಿಷ್ಠ ಜಾತಿಯವರನ್ನು ಎದುರು ಹಾಕಿಕೊಳ್ಳಲು ಸಾಧ್ಯವಾಗದೇ ಬಾಲಕನ ತಂದೆ ಈ ಬಗ್ಗೆ ದೂರು ನೀಡಲು ಹಿಂಜರಿದಿದ್ದರು. ಈ ಹಿನ್ನೆಲೆಯಲ್ಲಿ ಸಮಾಜ ಕಲ್ಯಾಣ ಅಧಿಕಾರಿಗಳು ದೂರು ದಾಖಲಿಸಿದ್ದರು.
ಇಷ್ಟೊಂದು ಗಂಭೀರವಾದ ಘಟನೆ ನಡೆದಿದ್ದರೂ, ಗ್ರಾಮದಲ್ಲಿ ಕಂದಾಯ ಅಧಿಕಾರಿಗಳು ಪೊಲೀಸ್ ಶಾಂತಿ ಸಭೆ ನಡೆಸುವ ಮೂಲಕ ಈ ಪ್ರಕರಣವನ್ನು ಮುಚ್ಚಿ ಹಾಕಲು ಯತ್ನಿಸಿದ್ದಾರೆ ಎನ್ನುವ ಆಕ್ರೋಶಗಳು ಕೂಡ ವ್ಯಾಪಕವಾಗಿ ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on
ಇನ್ನಷ್ಟು ಸುದ್ದಿಗಳು…
ವಿದ್ಯಾರ್ಥಿಗಳ ವೃತ್ತಿಪರ ಕೋರ್ಸ್ ಶುಲ್ಕ ಮನ್ನಾ | ತಮಿಳುನಾಡು ಸಿಎಂ ಸ್ಟಾಲಿನ್ ಘೋಷಣೆ
ಬೆಂಗಳೂರಿನ ಅಪಾರ್ಟ್ಮೆಂಟ್ ನಲ್ಲಿ ಅಗ್ನಿ ಅವಘಡ: ತಾಯಿ, ಮಗಳು ಸಜೀವ ದಹನ
ವಿಷ ಸೇವಿಸಿದ್ದ ಸಾಮೂಹಿಕ ಅತ್ಯಾಚಾರದ ಸಂತ್ರಸ್ತೆ ಬಾಲಕಿ ಚಿಕಿತ್ಸೆ ಫಲಿಸದೇ ಸಾವು
ಕಡಲತೀರದಲ್ಲಿ ಆಕ್ರಮಣಕಾರಿ ‘ಟೈಗರ್ ಶಾರ್ಕ್’ನ ಕಳೇಬರ ಪತ್ತೆ
ನೆಲಗಡಲೆ, ಬಾದಾಮಿ, ಒಣದ್ರಾಕ್ಷಿ ಹೃದಯಕ್ಕೆ ಚೈತನ್ಯ ತುಂಬುವ ತಿನಿಸುಗಳು
ಕೊಪ್ಪಳ ಘಟನೆ: ಬಿಜೆಪಿ, ಹಿಂದೂತ್ವ ಸಂಘಟನೆಗಳಿಗೆ ನಾಚಿಕೆಗೇಡು! | ಬಿಜೆಪಿ ಮನುವಾದಿ ಎಂದ ಕಾಂಗ್ರೆಸ್
ನಾನು ಎರಡು ಬಾರಿ ರಾಜ್ಯಸಭಾ ಸ್ಥಾನವನ್ನು ನಿರಾಕರಿಸಿದ್ದೇನೆ | ನಟ ಸೋನು ಸೂದ್
ಪಂಜಾಬ್ ನಲ್ಲಿ ಪ್ರಥಮ ದಲಿತ ಸಿಎಂ ಆಗಿ ಚರಣಜಿತ್ ಸಿಂಗ್ ಆಯ್ಕೆ | ದೇಶದ್ಯಾದ್ಯಂತ ‘ದಲಿತ ಸಿಎಂ’ ಚರ್ಚೆ