ಮನಮೋಹನ್ ಸಿಂಗ್ ವಿಮಾನದಲ್ಲಿಯೇ ಪತ್ರಿಕಾಗೋಷ್ಠಿ ನಡೆಸಿದ್ದರು | ಮೋದಿ ಫೋಟೋಗೆ ಕಾಂಗ್ರೆಸ್ ತಿರುಗೇಟು
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ವಿಮಾನದಲ್ಲಿ ಪ್ರಯಾಣಿಸುತ್ತಾ, ಕಾರ್ಯನಿರ್ವಹಿಸುತ್ತಿರುವ ಚಿತ್ರ ಇದೀಗ ವ್ಯಾಪಕ ಚರ್ಚೆಗೊಳಗಾಗುತ್ತಿದೆ. ಮಾಜಿ ಪ್ರಧಾನಿ ಲಾಲ್ ಬಹದ್ದೂರ್ ಶಾಸ್ತ್ರಿ ಅವರನ್ನು ಮೋದಿ ಕಾಪಿ ಮಾಡಿದ್ದಾರೆ ಎನ್ನುವ ವಾದದ ನಡುವೆಯೇ ಇದೀಗ ಕಾಂಗ್ರೆಸ್, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಫೋಟೋವೊಂದನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್ ಪ್ರಧಾನಿ ಮೋದಿಗೆ ತಿರುಗೇಟು ನೀಡಿದ್ದಾರೆ.
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ವಿಮಾನದಲ್ಲಿ ಸುದ್ದಿಗೋಷ್ಠಿ ನಡೆಸುತ್ತಿರುವ ಚಿತ್ರವನ್ನು ಬಿಡುಗಡೆ ಮಾಡಿರುವ ಕಾಂಗ್ರೆಸ್, ಈ ಚಿತ್ರವನ್ನು ಕಾಪಿ ಮಾಡಲು ನಿಮ್ಮಿಂದ ಸಾಧ್ಯವಿಲ್ಲ ಎಂದು ಕಾಲೆಳೆದಿದೆ. ಪ್ರಧಾನಿ ನರೇಂದ್ರ ಮೋದಿ ಪತ್ರಿಕಾಗೋಷ್ಠಿಗಳನ್ನು ಎದುರಿಸುವುದಿಲ್ಲ. ಹೀಗಾಗಿ ಅವರು ಈ ಚಿತ್ರವನ್ನು ಕಾಪಿ ಮಾಡಲು ಸಾಧ್ಯವಿಲ್ಲ ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ಪ್ರಧಾನಿ ಮೋದಿ ಅವರು ತೆಗೆಸಿಕೊಂಡಿರುವ ಫೋಟೋವು ಪ್ರಚಾರಕ್ಕೆ ತೆಗೆಸಿಕೊಂಡಿರುವಂತೆ ಕಾಣುತ್ತಿದೆ. ಆದರೆ, ಮನಮೋಹನ್ ಸಿಂಗ್ ಅವರ ಚಿತ್ರಗಳು ಪ್ರಚಾರಕ್ಕ ಪೋಸ್ ನೀಡಿದ್ದಲ್ಲ. ಅವರು ನಿಜವಾಗಿಯೂ ಕಾರ್ಯನಿರ್ವಹಿಸುತ್ತಿದ್ದರು ಎಂದು ಕಾಂಗ್ರೆಸ್ ಕಾಲೆಳೆದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/HpGUvPNd4TWBQJG8MXH5on
ಇನ್ನಷ್ಟು ಸುದ್ದಿಗಳು…
ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದರೆ ಗಂಭೀರ ಸಮಸ್ಯೆ ಉಂಟಾಗಬಹುದು | ಇದಕ್ಕೆ ಪರಿಹಾರವೇನು?
ಕಳೆದ 6 ವರ್ಷಗಳಿಂದ ಈ ಶಾಲೆಗೆ ಇಂಗ್ಲಿಷ್ ಶಿಕ್ಷಕರನ್ನೇ ನೇಮಿಸಿಲ್ಲ!
ಲಾಲ್ ಬಹದ್ದೂರು ಶಾಸ್ತ್ರಿಯವರಂತೆಯೇ, ಪ್ರಧಾನಿ ಮೋದಿ ಫೋಟೋ | ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯೋ ಚರ್ಚೆ?
ಬಾಲಕಿಯ ಮೇಲೆ 29 ಮಂದಿಯಿಂದ ಅತ್ಯಾಚಾರ: 21 ಆರೋಪಿಗಳ ಅರೆಸ್ಟ್
ಬಿಜೆಪಿ ನಾಯಕರೊಬ್ಬರ ಕಚೇರಿಯಲ್ಲಿ ಮಹಿಳಾ ಕಾರ್ಯಕರ್ತೆಗೆ ಲೈಂಗಿಕ ಕಿರುಕುಳ!
ಮದುವೆ ಮಂಟಪದಲ್ಲಿ ಗುಟ್ಕಾ ಜಗಿದ ವರನಿಗೆ ಕಪಾಳಕ್ಕೆ ಬಾರಿಸಿ ಉಗುಳಿಸಿದ ವಧು! | ವಿಡಿಯೋ ವೈರಲ್
ಕೊಪ್ಪಳ ಘಟನೆ: ಬಿಜೆಪಿ, ಹಿಂದೂತ್ವ ಸಂಘಟನೆಗಳಿಗೆ ನಾಚಿಕೆಗೇಡು! | ಬಿಜೆಪಿ ಮನುವಾದಿ ಎಂದ ಕಾಂಗ್ರೆಸ್
ಜಾತಿ ಪೀಡೆಗಳನ್ನು ಮಟ್ಟ ಹಾಕಲು ನಡೆಯಲಿದೆ ಗುಪ್ತ ಸಮೀಕ್ಷೆ: ಅಸ್ಪೃಶ್ಯತೆ ಆಚರಿಸಿದರೆ ಜೈಲೂಟ ಗ್ಯಾರೆಂಟಿ