ಪ್ರತಿಭಟನಾಕಾರನ ದೇಹದ ಮೇಲೆ ಹಾರಿಹಾರಿ ಬಿದ್ದಿದ್ದ ಪತ್ರಕರ್ತ ಅರೆಸ್ಟ್
ಅಸ್ಸಾಂ: ಪೊಲೀಸರ ಗುಂಡೇಟಿನಿಂದ ನಿಶ್ಚಲವಾಗಿ ಬಿದ್ದಿದ್ದ ಪ್ರತಿಭಟನಾಕಾರನ ದೇಹಕ್ಕೆ ಹಲ್ಲೆ ನಡೆಸಿ, ಒದ್ದು ವಿಕೃತಿ ಮೆರೆದ ಫೋಟೋಗ್ರಾಫರ್, ಪತ್ರಕರ್ತನನ್ನು ಅಸ್ಸಾಂ ಪೊಲೀಸರು ಬಂಧಿಸಿದ್ದು, ಪೊಲೀಸರ ಗುಂಟೇಟಿನಿಂದ ಸಾವಿಗೀಡಾಗಿದ್ದ ಎನ್ನಲಾಗಿರುವ ಪ್ರತಿಭಟನಾಕಾರನ ಮೃತದೇಹದ ಮೇಲೆ ಈತ ಹಾರಿ ಹಾರಿ ಬೀಳುತ್ತಿರುವುದು ವಿಡಿಯೋದಲ್ಲಿ ಸೆರೆಯಾಗಿದೆ.
ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಈತನ ಮನಸ್ಥಿತಿಯನ್ನು ತಾಲಿಬಾನ್ ಉಗ್ರರಿಗೆ ಹೋಲಿಸಿ ಆಕ್ರೋಶ ವ್ಯಕ್ತಪಡಿಸಲಾಗಿದೆ. ಹಲ್ಲೆ ನಡೆಸಿದ ಬಳಿಕ ಮೃತದೇಹದೊಂದಿಗೆ ಆರೋಪಿಯು ಸೆಲ್ಫಿ ಕೂಡ ತೆಗೆದುಕೊಳ್ಳುವ ಮೂಲಕ ತನ್ನ ವಿಕೃತ ಮನಸ್ಥಿತಿಯನ್ನು ತೋರಿಸಿದ್ದಾನೆ.]
ಆಸ್ಸಾಂನ ಸಿಪಾಝಾರ್ ಪ್ರದೇಶದಲ್ಲಿ ಗ್ರಾಮಸ್ಥರನ್ನು ತೆರೆವು ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಉಂಟಾಗ ಸಂಘರ್ಷದ ವೇಳೆ ಇಬ್ಬರು ಗ್ರಾಮಸ್ಥರು ಮೃತಪಟ್ಟಿದ್ದು, 20ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಬಿಜೆಪಿ ಬೆಂಬಲಿತ ಅಸ್ಸಾಂ ಸರ್ಕಾರದ ಪ್ರಚೋದನೆಯಿಂದ ಈ ಘಟನೆ ನಡೆದಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆತ್ತಿಕೊಂಡಿದ್ದಾರೆ. ಭಾರತೀಯರು ಈ ರೀತಿಯ ಶಿಕ್ಷೆಯನ್ನು ಅನುಭವಿಸಲು ಸಾಧ್ಯವಿಲ್ಲ ಎಂದು ಅವರು ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ಕ್ಯಾನ್ಸರ್ ನ್ನು ಗೆದ್ದವ ಪಾರ್ಟಿಯಲ್ಲಿ ಬಿಯರ್ ಬ್ಯಾರೆಲ್ ಸ್ಫೋಟಗೊಂಡು ಮೃತಪಟ್ಟ!
ಟಾಂಗಾ ಮೂಲಕ ವಿಧಾನಸೌಧಕ್ಕೆ ಬಂದ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್!
ಮೃತಪಟ್ಟ ಪ್ರತಿಭಟನಾಕಾರನ ಮೃತದೇಹಕ್ಕೆ ಥಳಿಸಿ, ಒದ್ದು ವಿಕೃತಿ ಮೆರೆದ ಪತ್ರಕರ್ತ
ಕಬ್ಬಿನ ಗದ್ದೆಯಲ್ಲಿ ಬೆತ್ತಲೆಯಾಗಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದ ಬಾಲಕಿ!
ಮನಮೋಹನ್ ಸಿಂಗ್ ವಿಮಾನದಲ್ಲಿಯೇ ಪತ್ರಿಕಾಗೋಷ್ಠಿ ನಡೆಸಿದ್ದರು | ಮೋದಿ ಫೋಟೋಗೆ ಕಾಂಗ್ರೆಸ್ ತಿರುಗೇಟು