ತೂಕವನ್ನು ಇಳಿಸಿಕೊಳ್ಳಲು ನಿಮ್ಮ ಆಹಾರದಲ್ಲಿ ಇವುಗಳನ್ನು ಸೇರಿಸಿ! - Mahanayaka
7:40 AM Thursday 19 - September 2024

ತೂಕವನ್ನು ಇಳಿಸಿಕೊಳ್ಳಲು ನಿಮ್ಮ ಆಹಾರದಲ್ಲಿ ಇವುಗಳನ್ನು ಸೇರಿಸಿ!

lose weight
25/09/2021

ಅತಿಯಾದ ತೂಕ ಹೊಂದಿದ ದೇಹ ನಮ್ಮಲ್ಲಿ ನಾನಾ ರೀತಿಯ ಕಾಯಿಲೆಗಳಿಗೆ ಕಾರಣವಾಗಬಹುದು. ಮಾತ್ರವಲ್ಲದೇ ನಮ್ಮ ದೇಹದ ಅಂದವನ್ನೂ ಇದು ಕಳೆಗುಂದಿಸುತ್ತದೆ. ಬಹುತೇಕ ಜನರು ತೂಕವನ್ನು ಇಳಿಸಿಕೊಳ್ಳಲು ಊಟವನ್ನು ತ್ಯಜಿಸುತ್ತಾರೆ. ಆದರೆ ಈ ರೀತಿ ಮಾಡುವುದರಿಂದ ಬೇರೆಯೇ ಆರೋಗ್ಯ ಸಮಸ್ಯೆಗಳು ಉಂಟಾಗ ಬಹುದು.

ಜೀರಿಗೆ: ನಮ್ಮ ದೇಹದ ತೂಕವನ್ನು ಇಳಿಸಲು ಜೀರಿಗೆ ಉತ್ತಮವಾಗಿದೆ. ಜೀರಿಗೆಯ ನೀರನ್ನು ನಿಯಮಿತವಾಗಿ ಕುಡಿಯುವುದರಿಂದ ನಮ್ಮ ದೇಹದಲ್ಲಿ ಅಧಿಕವಾಗಿರುವ ಕೊಬ್ಬನ್ನು ಕರಗಿಸಬಹುದು. ಮಾತ್ರವಲ್ಲದೇ ನಮ್ಮ ಜೀರ್ಣಕ್ರಿಯೆಯನ್ನು ಜೀರಿಗೆ ಸುಗಮಗೊಳಿಸುತ್ತದೆ. ಇದರ ಜೊತೆಗೆ ನಮ್ಮ ದೇಹದಲ್ಲಿರುವ ವಿಷವನ್ನು ಕೂಡ ಇದು ದೇಹದಿಂದ ಹೊರ ಹಾಕುತ್ತದೆ.

ಮೆಣಸು:  ಮೆಣಸನ್ನು ಕೇವಲ ರುಚಿಗಾಗಿ ಮಾತ್ರವೇ ಬಳಸುತ್ತಾರೆ ಎಂದ ಬಹಳಷ್ಟು ಜನರು ತಿಳಿದಿರುತ್ತಾರೆ. ಆದರೆ, ಮೆಣಸಿನಲ್ಲಿ  ವಿಟಮಿನ್ ಎ, ಕೆ,ಸಿ, ಕ್ಯಾಲ್ಸಿಯಂ, ಪೊಟ್ಯಾಶಿಯಂ ಮತ್ತು ಸೋಡಿಯಂಗಳು ಸಮೃದ್ಧವಾಗಿದೆ. ಇದರಲ್ಲಿರುವ ಪೈಬರ್ ಅಂಶ ನಮ್ಮ ದೇಹದ ತೂಕವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ಈ ಮೂಲಕ ದೇಹದಲ್ಲಿ ಕೊಬ್ಬು ಸಂಗ್ರಹವಾಗುವುದನ್ನು ಮೆಣಸು ತಡೆಯುತ್ತದೆ.


Provided by

ದಾಲ್ಚಿನಿ: ಹಲವು ಔಷಧ ಗುಣವನ್ನು ಹೊಂದಿರುವ ಮಸಾಲೆ ವಸ್ತು ಈ ದಾಲ್ಚಿನಿಯಾಗಿದ್ದು, ಇದರಲ್ಲಿ ರೋಗ ನಿರೋಧಕ ಶಕ್ತಿಗಳು ಸಮೃದ್ಧವಾಗಿದೆ.  ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮಾತ್ರವಲ್ಲದೇ ತೂಕ ಕಡಿಮೆ ಮಾಡಲು ಸಹಕಾರಿಯಾಗಿದೆ. ಪ್ರತಿ ದಿನ ಖಾಲಿ ಹೊಟ್ಟೆಗೆ ಚಾಲ್ಚಿನಿ ನೀರನ್ನು ಕುಡಿಯುವುದರಿಂದ ತೂಕ ಇಳಿಕೆಯಾಗುತ್ತದೆ.

ಮೆಂತ್ಯೆ: ನಾರಿನಂಶವಿರುವ ಮೆಂತ್ಯೆಯು ನಮ್ಮ ಹಸಿವನ್ನು ನಿಯಂತ್ರಿಸುತ್ತದೆ. ಪ್ರತಿ ದಿನ ಬೆಳಿಗ್ಗೆ ಮೆಂತ್ಯೆಯನ್ನು ನೀರಿನಲ್ಲಿ ಬೇಯಿಸಿ ಕುಡಿಯುವುದರಿಂದ ದೇಹದ ತೂಕ ಕಡಿಮೆಯಾಗುತ್ತದೆ. ಇದು ಹೊಟ್ಟೆಯ ಕೊಬ್ಬನ್ನು ನೈಸರ್ಗಿಕವಾಗಿ ಕರಗಿಸುತ್ತದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಸದಾ ಹಿಂಸಿಸುವ ಮೈಕೈ ನೋವಿಗೆ ಶಾಶ್ವತ ಪರಿಹಾರ ಏನು?

ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದರೆ ಗಂಭೀರ ಸಮಸ್ಯೆ ಉಂಟಾಗಬಹುದು | ಇದಕ್ಕೆ ಪರಿಹಾರವೇನು?

ರಕ್ತದಲ್ಲಿ ಹಿಮೋಗ್ಲೋಬಿನ್ ಕಡಿಮೆಯಾದರೆ ಗಂಭೀರ ಸಮಸ್ಯೆ ಉಂಟಾಗಬಹುದು | ಇದಕ್ಕೆ ಪರಿಹಾರವೇನು?

ಮೂತ್ರಪಿಂಡಗಳ ಆರೋಗ್ಯ ಕಾಪಾಡಲು ಈ ಕ್ರಮಗಳನ್ನು ಅನುಸರಿಸಿ!

ನೀವು ಲಿಂಬೆ ಸೋಡಾವನ್ನು ಅತೀಯಾಗಿ ಕುಡಿಯುತ್ತೀರಾ? | ಹಾಗಿದ್ದರೆ, ಈ ವಿಚಾರ ನೀವು ತಿಳಿಯಲೇ ಬೇಕು

ಲೈಂಗಿಕ ಆಯಾಸ ಪರಿಹಾರ ಸೇರಿದಂತೆ ಹಲವು ಸಮಸ್ಯೆಗಳಿಗೆ ಖರ್ಜೂರದಲ್ಲಿದೆ ಪರಿಹಾರ

ನಿಫಾ ವೈರಸ್ ನ ರೋಗ ಲಕ್ಷಣಗಳೇನು ಗೊತ್ತಾ? | ರೋಗಿ ಕೋಮಾಕ್ಕೆ ಹೋಗುವ ಸಾಧ್ಯತೆ ಹೆಚ್ಚು!

ಇತ್ತೀಚಿನ ಸುದ್ದಿ