ಸೊಂಟಕ್ಕೆ ವೇಲ್ ಕಟ್ಟಿಕೊಂಡು ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು
ರಾಮನಗರ: ಇಬ್ಬರು ಪ್ರೇಮಿಗಳು ಸೊಂಟಕ್ಕೆ ವೇಲ್ ಕಟ್ಟಿಕೊಂಡು ಬೆಟ್ಟದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ಕಬ್ಬಾಳ ಗ್ರಾಮದ ಬೆಟ್ಟದಲ್ಲಿ ನಡೆದಿದೆ.
ತಮಿಳುನಾಡು ಮೂಲದ 21 ವರ್ಷ ವಯಸ್ಸಿನ ಸತೀಶ್ ಮತ್ತು ಚಂದನಾ ಆತ್ಮಹತ್ಯೆ ಮಾಡಿಕೊಂಡವರು ಎಂದು ಗುರುತಿಸಲಾಗಿದೆ. ಒಂದು ವರ್ಷಗಳ ಹಿಂದೆಯಷ್ಟೇ ಈ ಜೋಡಿ ಪ್ರೀತಿಸಿ ವಿವಾಹವಾಗಿದ್ದರು ಎಂದು ಹೇಳಲಾಗಿದೆ. ಮೂರು ದಿನಗಳ ಹಿಂದೆ ಇವರಿಬ್ಬರು ಆತ್ಮಹತ್ಯೆಗೆ ಶರಣಾಗಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಮೃತ ಸತೀಶ್ ತಮಿಳುನಾಡಿನ ಹೊಸೂರಿನಲ್ಲಿ ಟ್ಯಾಕ್ಸಿ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ. ಮೂರು ವರ್ಷಗಳಿಂದ ಇಬ್ಬರು ಪ್ರೀತಿಸುತ್ತಿದ್ದರು ಎಂದು ಹೇಳಲಾಗಿದೆ. ಈ ನಡುವೆ ಏನು ನಡೆದಿದೆ ಎನ್ನುವುದು ತಿಳಿದು ಬಂದಿಲ್ಲ. ಘಟನೆ ಸಂಬಂಧ ಸ್ಥಳಕ್ಕೆ ಸಾತನೂರು ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿಗಳು ಪೊಲೀಸರ ತನಿಖೆಯಿಂದ ತಿಳಿದು ಬರಬೇಕಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ಹೇಳಿದಂತೆ ಕೇಳಲಿಲ್ಲ ಎಂದು ಪತ್ನಿಯ ಮೂಗನ್ನೇ ಕಚ್ಚಿ ತುಂಡರಿಸಿದ ಪಾಪಿ ಪತಿ!
ನಾಳೆ ನಡೆಯಲಿರುವ ಭಾರತ ಬಂದ್ ಗೆ ಕಾಂಗ್ರೆಸ್, ಜೆಡಿಎಸ್ ಬೆಂಬಲ
ದಲಿತ ಮಕ್ಕಳ ಊಟದ ತಟ್ಟೆಯನ್ನು ಇತರ ಮಕ್ಕಳು ಮುಟ್ಟುತ್ತಿಲ್ಲ | ದೇವರಂತ ಮಕ್ಕಳ ಮೇಲೆಯೂ ಅಸ್ಪೃಶ್ಯತೆಯ ಕರಿನೆರಳು
ಅಮೆರಿಕಾ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸ್ ಆದ ಪ್ರಧಾನಿ ನರೇಂದ್ರ ಮೋದಿ
ಕಿತ್ತು ತಿನ್ನುವ ಬಡತನ, ಉದ್ಯೋಗವೂ ಇಲ್ಲ | ನೊಂದ ಅಣ್ಣ ತಮ್ಮ ಆತ್ಮಹತ್ಯೆಗೆ ಶರಣು
ಅಕ್ಷರಸ್ಥರೇ ಇವತ್ತು ಬುದ್ಧ, ಬಸವ, ಅಂಬೇಡ್ಕರ್ ಅವರಿಗೆ ಮೋಸ ಮಾಡುತ್ತಿದ್ದಾರೆ | ಡಾ.ಎಚ್.ಟಿ. ಪೋತೆ
ರಸ್ತೆ ಬದಿಯ 10 ಟನ್ ಸ್ಫೋಟಕ ತುಂಬಿದ್ದ ಲಾರಿ ನಿಂತದ್ದು ಕಂಡು ಬೆಚ್ಚಿಬಿದ್ದ ಜನರು!