ಸರ್ಕಾರಿ ಆಸ್ಪತ್ರೆಯ ಲಿಫ್ಟ್ ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ | ವಾರ್ಡ್ ಬಾಯ್ ಅರೆಸ್ಟ್ - Mahanayaka
4:23 PM Wednesday 5 - February 2025

ಸರ್ಕಾರಿ ಆಸ್ಪತ್ರೆಯ ಲಿಫ್ಟ್ ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ | ವಾರ್ಡ್ ಬಾಯ್ ಅರೆಸ್ಟ್

goa hospital
26/09/2021

ಗೋವಾ:  ಸರ್ಕಾರಿ ಆಸ್ಪತ್ರೆಯ ಲಿಫ್ಟ್ ನಲ್ಲಿ ಇಬ್ಬರು ಅಪ್ರಾಪ್ತ ವಯಸ್ಸಿನ ಬಾಲಕಿಯರಿಗೆ ವಾರ್ಡ್ ಬಾಯ್ ವೋರ್ವ ಲೈಂಗಿಕ ಕಿರುಕುಳ ನಡೆಸಿರುವ ಘಟನೆ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ಆರೋಪಿಯನ್ನು ಪೊಲೀಸರು ಬಂಧಿಸಿ, ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

ಕಿರುಕುಳಕ್ಕೊಳಗಾದ ಬಾಲಕಿಯರು 13ರಿಂದ 14 ವರ್ಷ ವಯಸ್ಸಿನವರು ಎಂದು ಹೇಳಲಾಗಿದೆ. ಉತ್ತರ ಗೋವಾ ಜಿಲ್ಲಾ ಆಸ್ಪತ್ರೆಗೆ ತಮ್ಮ ತಾಯಿಯನ್ನು ಚಿಕಿತ್ಸೆಗಾಗಿ ದಾಖಲಿಸಿದ್ದ ಹಿನ್ನೆಲೆಯಲ್ಲಿ ಆಗಾಗ್ಗೆ ಆಸ್ಪತ್ರೆಗೆ ಭೇಟಿ ನೀಡುತ್ತಿದ್ದರು. ಈ ಬಾಲಕಿಯರು ಲಿಫ್ಟ್ ನಲ್ಲಿ ಹೋಗುತ್ತಿದ್ದ ವೇಳೆ 47 ವರ್ಷ ವಯಸ್ಸಿನ ವಾರ್ಡ್ ಬಾಯ್ ಇವರನ್ನು ಹಿಂಬಾಲಿಸಿ, ಲೈಂಗಿಕ ಕಿರುಕುಳ ನೀಡಿದ್ದ ಎಂದು ಬಾಲಕಿಯರ ಕುಟುಂಬದ ಸದಸ್ಯರು ದೂರು ದಾಖಲಿಸಿದ್ದಾರೆ.

ಆರೋಪಿಯ ವಿರುದ್ಧ ಪೋಕ್ಸೋ ಕಾಯ್ದೆ ಹಾಗೂ ಐಪಿಸಿಯ ವಿವಿಧ ಸೆಕ್ಷನ್ ಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ಆರೋಪಿಯನ್ನು ಬಂಧಿಸಿದ್ದು, ಘಟನೆ ಸಂಬಂಧ ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ. ಈ ಘಟನೆಯ ಬಗ್ಗೆ ಹೆಚ್ಚಿನ ಮಾಹಿತಿಗಳನ್ನು ಪೊಲೀಸರು ಸಂಗ್ರಹಿಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ರಾಜ್ಯ ಸರ್ಕಾರಕ್ಕೆ ನಾಚಿಕೆಗೇಡು: ದೇವಸ್ಥಾನ ಪ್ರವೇಶಿಸಿದ ದಲಿತ ವ್ಯಕ್ತಿಗೆ ದಂಡ | ಮತ್ತೊಂದು ಅಸ್ಪೃಶ್ಯತಾ ಆಚರಣೆ ಪ್ರಕರಣ

ಗೋಡೆ ಮೈಮೇಲೆ ಕುಸಿದು ಬಿದ್ದರೂ ತನ್ನ ಮಗುವಿನ ಮೈಗೆ ಸಣ್ಣ ಗೆರೆಯೂ ಬೀಳದಂತೆ ಕಾಪಾಡಿದ ತಾಯಿ | ವೈರಲ್ ವಿಡಿಯೋ

ಅಮಾನವೀಯ ಘಟನೆ: ಪತ್ನಿಗೆ ನಿದ್ರೆ ಮಾತ್ರೆ ನೀಡಿ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ ಪತಿ

ಸೊಂಟಕ್ಕೆ ವೇಲ್ ಕಟ್ಟಿಕೊಂಡು ಬೆಟ್ಟದಿಂದ ಹಾರಿ ಆತ್ಮಹತ್ಯೆಗೆ ಶರಣಾದ ಪ್ರೇಮಿಗಳು

ದಲಿತ ಮಕ್ಕಳ ಊಟದ ತಟ್ಟೆಯನ್ನು ಇತರ ಮಕ್ಕಳು ಮುಟ್ಟುತ್ತಿಲ್ಲ | ದೇವರಂತ ಮಕ್ಕಳ ಮೇಲೆಯೂ ಅಸ್ಪೃಶ್ಯತೆಯ ಕರಿನೆರಳು

ಪ್ರತಿಭಟನೆ ಹೆಸರಲ್ಲಿ ಜನರಿಗೆ ತೊಂದರೆ ಕೊಡುವುದು ಬೇಡ | ಭಾರತ್ ಬಂದ್ ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ

ಪ್ರೀತಿಸಿ ವಿವಾಹವಾದ ಪತ್ನಿಗೆ ಅಕ್ರಮ ಸಂಬಂಧ | ಫೇಸ್ ಬುಕ್ ಲೈವ್ ಗೆ ಬಂದು ಪತಿ ಆತ್ಮಹತ್ಯೆ

ಇತ್ತೀಚಿನ ಸುದ್ದಿ