ಭಾರತ್ ಬಂದ್: ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಸಾವಿರಾರು ವಾಹನಗಳು - Mahanayaka
6:33 PM Wednesday 5 - February 2025

ಭಾರತ್ ಬಂದ್: ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿದ ಸಾವಿರಾರು ವಾಹನಗಳು

delhi gurugram border
27/09/2021

ದೆಹಲಿ: ಮೂರು ಕೃಷಿ ಕಾನೂನುಗಳನ್ನು ವಿರೋಧಿಸಿ ಇಂದು ದೇಶದಲ್ಲಿ ಭಾರತ್ ಬಂದ್ ನಡೆಯುತ್ತಿದ್ದು,  ದೇಶಾದ್ಯಂತ ತೀವ್ರ ಪ್ರತಿಭಟನೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯಲ್ಲಿ ರೈತರ ಪ್ರತಿಭಟನೆ ತೀವ್ರತೆ ಪಡೆದುಕೊಂಡಿದೆ.

ದೆಹಲಿ, ಗುರುಗ್ರಾಮ ಗಡಿಯಲ್ಲಿ ರೈತರ ಪ್ರತಿಭಟನೆಯಿಂದಾಗಿ ತೀವ್ರ ರೀತಿಯ ಟ್ರಾಫಿಕ್ ಜಾಮ್ ಸಂಭವಿಸಿದ್ದು, ಸಾವಿರಾರು ವಾಹನಗಳು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿವೆ. ರೈತರು ನಿರಂತರವಾಗಿ ಶಾಂತಿಯುತ ಪ್ರತಿಭಟನೆ ನಡೆಸಿದರೂ ಕೇಂದ್ರ ಸರ್ಕಾರ ತನ್ನ ಹಠ ಬಿಡಲಿಲ್ಲ. ಹೀಗಾಗಿ ರೈತರು ಈ ಬಾರಿ ತಮ್ಮ ಶಾಂತಿಯುತ ಪ್ರತಿಭಟನೆಯಿಂದ ಒಂದು ಹೆಜ್ಜೆ ಮುಂದೆ ಇಟ್ಟಿದ್ದು, ಭಾರತ್ ಬಂದ್ ಗೆ ಕರೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಪ್ರತಿಭಟನೆ ತೀವ್ರಗೊಳ್ಳುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.

ಇನ್ನೂ ರೈತರ ಪ್ರತಿಭಟನೆ ಕಾಂಗ್ರೆಸ್ ಬೆಂಬಲ ನೀಡಿದ್ದು, ಭಾರತ್ ಬಂದ್ ಗೆ ಸಂಬಂಧಿಸಿದಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪ್ರತಿಕ್ರಿಯಿಸಿ,  ಮೂರು ಕೃಷಿ ಕಾಯ್ದೆಗಳ ವಿರುದ್ಧ ಹಿಂಸಾರಹಿತವಾಗಿ ಸತ್ಯಾಗ್ರಹ ನಡೆಸುವ ಕೃಷಿಕರ ಸಂಕಲ್ಪ ದೃಢವಾಗಿದೆ. ಆದರೆ, ಶೋಷಣೆ ಮನೋಭಾವದ ಸರ್ಕಾರಕ್ಕೆ ಇದು ಇಷ್ಟವಾಗುತ್ತಿಲ್ಲ. ಹೀಗಾಗಿಯೇ ಭಾರತ್‌ ಬಂದ್‌ ಪ್ರತಿಭಟನೆಗೆ ಕರೆ ನೀಡಲಾಗಿದೆ ಎಂದು ವ್ಯಾಖ್ಯಾನಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಪ್ರತಿಭಟನಾಕಾರರನ್ನು ನಿಯಂತ್ರಿಸುತ್ತಿದ್ದ ಡಿಸಿಪಿಯ ಕಾಲಿನ ಮೇಲೆ ಹರಿದ ಕಾರು!

ತನ್ನ ಸಹೋದ್ಯೋಗಿ ಮಹಿಳೆಯ ಮೇಲೆಯೇ ಅತ್ಯಾಚಾರ ನಡೆಸಿದ ವಾಯುಪಡೆಯ ಅಧಿಕಾರಿ!

ರಾಜ್ಯದಲ್ಲಿಯೂ ತಟ್ಟಿದ ಭಾರತ್ ಬಂದ್ ಬಿಸಿ: ಕೃಷಿ ಕಾಯ್ದೆಗಳನ್ನು ವಿರೋಧಿಸಿ ತೀವ್ರ ಪ್ರತಿಭಟನೆ

ಸರ್ಕಾರಿ ಆಸ್ಪತ್ರೆಯ ಲಿಫ್ಟ್ ನಲ್ಲಿ ಇಬ್ಬರು ಅಪ್ರಾಪ್ತ ಬಾಲಕಿಯರಿಗೆ ಲೈಂಗಿಕ ಕಿರುಕುಳ | ವಾರ್ಡ್ ಬಾಯ್ ಅರೆಸ್ಟ್

ರಾಜ್ಯ ಸರ್ಕಾರಕ್ಕೆ ನಾಚಿಕೆಗೇಡು: ದೇವಸ್ಥಾನ ಪ್ರವೇಶಿಸಿದ ದಲಿತ ವ್ಯಕ್ತಿಗೆ ದಂಡ | ಮತ್ತೊಂದು ಅಸ್ಪೃಶ್ಯತಾ ಆಚರಣೆ ಪ್ರಕರಣ

ಗೋಡೆ ಮೈಮೇಲೆ ಕುಸಿದು ಬಿದ್ದರೂ ತನ್ನ ಮಗುವಿನ ಮೈಗೆ ಸಣ್ಣ ಗೆರೆಯೂ ಬೀಳದಂತೆ ಕಾಪಾಡಿದ ತಾಯಿ | ವೈರಲ್ ವಿಡಿಯೋ

ಸಿಎಂ ಬೊಮ್ಮಾಯಿಯನ್ನು ಡ್ರೈವಿಂಗ್ ಮಾಡೋದು ಯಡಿಯೂರಪ್ಪ | ಸಿದ್ದರಾಮಯ್ಯ

ಇತ್ತೀಚಿನ ಸುದ್ದಿ