ಯಾರ್ಯಾರದ್ದು ಏನು ಲೂಸ್​ ಆಗಿದೆ ಗೊತ್ತಿಲ್ಲ, ಸಿದ್ದರಾಮಯ್ಯ ತಲೆ ಲೂಸ್​ ಆಗಿದೆ | ಸದಾನಂದ ಗೌಡ ಕಿಡಿ - Mahanayaka
10:27 PM Wednesday 12 - March 2025

ಯಾರ್ಯಾರದ್ದು ಏನು ಲೂಸ್​ ಆಗಿದೆ ಗೊತ್ತಿಲ್ಲ, ಸಿದ್ದರಾಮಯ್ಯ ತಲೆ ಲೂಸ್​ ಆಗಿದೆ | ಸದಾನಂದ ಗೌಡ ಕಿಡಿ

sadananda gowda
29/09/2021

ಚಿಕ್ಕಬಳ್ಳಾಪುರ: ಯಾರ್ಯಾರದ್ದು ಏನು ಲೂಸ್​ ಆಗಿದೆ ಎನ್ನುವುದು ನನಗೆ ತಿಳಿದಿಲ್ಲ. ಆದರೆ ಸಿದ್ದರಾಮಯ್ಯ ತಲೆ ಲೂಸ್​ ಆಗಿರುವುದಂತೂ ಗ್ಯಾರಂಟಿ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಮಾಜಿ ಕೇಂದ್ರ ಸಚಿವ, ಸಂಸದ ಡಿ.ವಿ.ಸದಾನಂದ ಗೌಡ ಕಿಡಿಕಾರಿದ್ದಾರೆ ಎಂದು ವರದಿಯಾಗಿದೆ.

ಬಿಜೆಪಿಯದ್ದು ತಾಲಿಬಾನ್ ಸಂಸ್ಕೃತಿ ಎಂದು ಸಿದ್ದರಾಮಯ್ಯ ಹೇಳಿಕೆ ನೀಡಿದ ಬೆನ್ನಲ್ಲೇ ಬಿಜೆಪಿ ನಾಯಕರು ಸಿದ್ದರಾಮಯ್ಯ ವಿರುದ್ಧ ಮುಗಿಬಿದ್ದಿದ್ದಾರೆ. ಇದೇ ವಿಚಾರವಾಗಿ ಚಿಕ್ಕಬಳ್ಳಾಪುರದಲ್ಲಿ  ಪ್ರತಿಕ್ರಿಯಿಸಿದ ಸದಾನಂದ ಗೌಡ, ರಾಜಕಾರಣ ಮಾಡುವವರಿಗೆ ಸ್ವಲ್ಪ ತಲೆ ಕೆಟ್ಟಿದ್ರೆ ಪರವಾಗಿಲ್ಲ.ಆದರೆ ಪೂರ್ತಿ ತಲೆ ಕೆಟ್ಟಿರಬಾರದು ಎಂದು ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದರು.

ಬಿಜೆಪಿಯದ್ದು ತಾಲಿಬಾನ್ ಆಡಳಿತವಾಗಿದ್ದರೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಕಾರಿನಲ್ಲಿ ಓಡಾಡಲು ಸಾಧ್ಯವಾಗುತ್ತಿತ್ತೇ..? ಇವರ ಕಾಲಿಗೆ ಹಗ್ಗ ಕಟ್ಟಿ ಬೀದಿಯಲ್ಲಿ ಎಳೆದುಕೊಂಡು ಹೋಗ್ತಿದ್ರು. ಇದನ್ನು ಮೊದಲು ಸಿದ್ದರಾಮಯ್ಯ ಅರ್ಥ ಮಾಡಿಕೊಳ್ಳಬೇಕು. ಅದನ್ನು ಬಿಟ್ಟು ಬಾಯಿಗೆ ಬಂದಂತೆ ಮಾತನಾಡುವುದಲ್ಲ ಎಂದು ತಿರುಗೇಟು ನೀಡಿದರು.


Provided by

ಇನ್ನೂ ಮತಾಂತರದ ಬಗ್ಗೆ ಮಾತನಾಡಿದ ಅವರು, ಮತಾಂತರದ ಬಗ್ಗೆ ನಿರ್ದಾಕ್ಷಿಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಸರ್ಕಾರ ನಿರ್ಧಾರ ಮಾಡಿದೆ. ಗೃಹ ಸಚಿವರು ಹಾಗೂ ಮುಖ್ಯಮಂತ್ರಿಗಳು ನೇರವಾಗಿ ಕಾರ್ಯಾಚರಣೆ ನಡೆಸುವಂತೆ ಹೇಳಿದ್ದಾರೆ ಎಂದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಹೃದಯಾಘಾತವಾಗುವುದಕ್ಕೂ ಮೊದಲು ಕಂಡು ಬರುವ ಲಕ್ಷಣಗಳೇನು?

ಕಂಡ ಕಂಡಲ್ಲಿ ಪ್ಯಾಂಟ್ ಬಿಚ್ಚುವ ಬಿಜೆಪಿ ನಾಯಕರಿಗೆ ಕಳಚಲಾಗದ ‘ಪ್ಯಾಂಟ್ ಭಾಗ್ಯ’ ನೀಡುತ್ತೇವೆ | ಕಾಂಗ್ರೆಸ್

ಸಿದ್ದರಾಮಯ್ಯನವರೇ ದೊಡ್ಡ ಭಯೋತ್ಪಾದಕ ಅನ್ನಿಸುತ್ತಿದೆ | ನಳಿನ್ ಕುಮಾರ್ ಕಟೀಲ್ ವಾಗ್ದಾಳಿ

ಪುಷ್ಪಾ: ರಶ್ಮಿಕಾ ಹೊಸ ಅವತಾರ ಕಂಡು ಅಭಿಮಾನಿಗಳಿಗೆ ಮತ್ತೊಮ್ಮೆ ಕ್ರಶ್ ಆಯ್ತಂತೆ!

ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ | ತಾಯಿ, ಮಗಳು ದಾರುಣ ಸಾವು

ನಿಮ್ಮ ತಂದೆ ಕೂಡ ಪಂಚೆ ಉಡುವವರಾಗಿರಬಹುದು, ನಿಮ್ಮಂತಹ ಮಗನ ಬಗ್ಗೆ ಅವರೇನು ತಿಳಿಯಬಹುದು? | ಸಿ.ಟಿ.ರವಿಗೆ ಸಿದ್ದು ಗುದ್ದು

ಅತ್ಯಾಚಾರದಿಂದ ಬಾಲಕಿ ಗರ್ಭಿಣಿ: ತಂದೆಗೆ ವಿಷಯ ಹೇಳುತ್ತೇನೆ ಎಂದಿದ್ದಕ್ಕೆ ಯುವಕನಿಂದ ಘೋರ ಕೃತ್ಯ

ಸ್ವಇಚ್ಛೆಯಿಂದ ಮಾತ್ರ ಮತಾಂತರವಾಗಲು ಕಾನೂನಿನಲ್ಲಿ ಅವಕಾಶವಿದೆ | ಸಿಎಂ ಬಸವರಾಜ ಬೊಮ್ಮಾಯಿ

ಕೃಷ್ಣನ ಚಕ್ರ, ಟಿಪ್ಪುವಿನ ಸಿಂಹಾಸನ ಮಾರಾಟ ಮಾಡಿದ ಆರೋಪಿ ಅರೆಸ್ಟ್!

ಇತ್ತೀಚಿನ ಸುದ್ದಿ