ವ್ಯಕ್ತಿಗೆ ಕೊವಿಡ್ ಲಸಿಕೆಯ ಬದಲು ರೇಬಿಸ್ ನಿರೋಧಕ ಚುಚ್ಚು ಮದ್ದು ನೀಡಿದ ನರ್ಸ್!

ಥಾಣೆ: ಕೊವಿಡ್ ಲಸಿಕೆಯ ಬದಲು ವ್ಯಕ್ತಿಯೋರ್ವರಿಗೆ ರೇಬಿಸ್ ನಿರೋಧಕ ಚುಚ್ಚುಮದ್ದು ಚುಚ್ಚಿ ಘಟನೆ ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ನಡೆದಿದ್ದು, ಘಟನೆಗೆ ಸಂಬಂಧಿಸಿದಂತೆ ವೈದ್ಯರು ಹಾಗೂ ನರ್ಸ್ ನ್ನು ಅಮಾನತು ಮಾಡಲಾಗಿದೆ ಎಂದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ರಾಜ್ ಕುಮಾರ್ ಯಾದವ್ ಎಂಬವರು ಕೊವಿಡ್ ಲಸಿಕೆ ಹಾಕಿಸಿಕೊಳ್ಳಲು ಸೋಮವಾರ ಕಲ್ವಾ ಪ್ರದೇಶದ ಆರೋಗ್ಯ ಕೇಂದ್ರಕ್ಕೆ ತೆರಳಿದ್ದರು. ಲಸಿಕೆ ಪಡೆದ ಬಳಿಕ ಅವರಿಗೆ ತಪ್ಪಾಗಿ ರೇಬಿಸ್ ನಿರೋಧಕ ಚುಚ್ಚು ಮದ್ದನ್ನು ನೀಡಲಾಗಿದೆ ಎಂದು ಸಿಬ್ಬಂದಿ ತಿಳಿಸಿದ್ದಾರೆನ್ನಲಾಗಿದೆ. ಇದರಿಂದಾಗಿ ಅವರು ಗಾಬರಿಗೊಳಗಾಗಿದ್ದರು.
ಮಾಹಿತಿಗಳ ಪ್ರಕಾರ ರಾಜ್ ಕುಮಾರ್ ಯಾದವ್ ಅವರ ಆರೋಗ್ಯಕ್ಕೆ ಯಾವುದೇ ತೊಂದರೆಯಾಗಿಲ್ಲ, ಅವರ ಆರೋಗ್ಯವಂತರಾಗಿದ್ದಾರೆ ಎನ್ನಲಾಗಿದೆ. ಈ ಘಟನೆಯ ಬಗ್ಗೆ ದೂರು ದಾಖಲಾಗಿದ್ದು, ಪ್ರಾಥಮಿಕ ತನಿಖೆಯ ಪ್ರಕಾರ ಇದೊಂದು ನಿರ್ಲಕ್ಷ್ಯದಿಂದ ನಡೆದ ಘಟನೆ ಎಂದು ಪರಿಗಣಿಸಿ, ಆರೋಗ್ಯ ಕೇಂದ್ರದ ಉಸ್ತುವಾರಿ ವಹಿಸಿಕೊಂಡಿದ್ದ ಮಹಿಳಾ ವೈದ್ಯೆ ಹಾಗೂ ನರ್ಸ್ ನ್ನು ಅಮಾನತುಗೊಳಿಸಲಾಗಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ಯಾರ್ಯಾರದ್ದು ಏನು ಲೂಸ್ ಆಗಿದೆ ಗೊತ್ತಿಲ್ಲ, ಸಿದ್ದರಾಮಯ್ಯ ತಲೆ ಲೂಸ್ ಆಗಿದೆ | ಸದಾನಂದ ಗೌಡ ಕಿಡಿ
ಕಂಡ ಕಂಡಲ್ಲಿ ಪ್ಯಾಂಟ್ ಬಿಚ್ಚುವ ಬಿಜೆಪಿ ನಾಯಕರಿಗೆ ಕಳಚಲಾಗದ ‘ಪ್ಯಾಂಟ್ ಭಾಗ್ಯ’ ನೀಡುತ್ತೇವೆ | ಕಾಂಗ್ರೆಸ್
ಸಿದ್ದರಾಮಯ್ಯನವರೇ ದೊಡ್ಡ ಭಯೋತ್ಪಾದಕ ಅನ್ನಿಸುತ್ತಿದೆ | ನಳಿನ್ ಕುಮಾರ್ ಕಟೀಲ್ ವಾಗ್ದಾಳಿ
ಪುಷ್ಪಾ: ರಶ್ಮಿಕಾ ಹೊಸ ಅವತಾರ ಕಂಡು ಅಭಿಮಾನಿಗಳಿಗೆ ಮತ್ತೊಮ್ಮೆ ಕ್ರಶ್ ಆಯ್ತಂತೆ!
“ದೇವಸ್ಥಾನ ತೆರವಿಗೆ ಆದೇಶ ನೀಡಿದ್ದು ಜಿಲ್ಲಾಧಿಕಾರಿ, ವರ್ಗಾವಣೆಯಾಗಿದ್ದು ತಹಶೀಲ್ದಾರ್!”
ಅತ್ಯಾಚಾರದಿಂದ ಬಾಲಕಿ ಗರ್ಭಿಣಿ: ತಂದೆಗೆ ವಿಷಯ ಹೇಳುತ್ತೇನೆ ಎಂದಿದ್ದಕ್ಕೆ ಯುವಕನಿಂದ ಘೋರ ಕೃತ್ಯ
ಪುರುಷರ ಒಳ ಉಡುಪು ಜಾಹೀರಾತಿನಲ್ಲಿ ರಶ್ಮಿಕಾ ಮಂದಣ್ಣ: ಸೃಷ್ಟಿಯಾಯ್ತು ಹೊಸ ವಿವಾದ
ಮಂಗಳೂರು: ಬೇರೆ ಬೇರೆ ಧರ್ಮದ ವಿದ್ಯಾರ್ಥಿಗಳು ಜೊತೆಯಾಗಿ ಪ್ರಯಾಣಿಸುತ್ತಿದ್ದ ಕಾರಿಗೆ ದಾಳಿ: ಐವರು ಕಿಡಿಗೇಡಿಗಳ ಬಂಧನ