ದಿ ನ್ಯೂಯಾರ್ಕ್ ಟೈಮ್ಸ್ ನಲ್ಲಿ ಮೋದೀಜಿಯ ಪ್ರವಾಸದ ಬಗ್ಗೆ ಯಾವುದೇ ವರದಿ ಪ್ರಕಟವಾಗಿಲ್ಲ, ವೈರಲ್ ಫೋಟೋ: ಫೇಕ್ ಪತ್ರಿಕೆ ಸ್ಪಷ್ಟನೆ
ಬೆಂಗಳೂರು: ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಪ್ರವಾಸ ವೇಳೆ ಅಮೆರಿಕದ ಪ್ರತಿಷ್ಠಿತ ಪತ್ರಿಕೆ ದಿ ನ್ಯೂಯಾರ್ಕ್ ಟೈಮ್ಸ್ ನ ಮುಖಪುಟದಲ್ಲಿಯೇ ಪ್ರಧಾನಿ ಮೋದಿ ಫೋಟೋವನ್ನು ಬಳಸಿ ವರದಿ ಪ್ರಕಟಿಸಿದ ಬಗ್ಗೆ ಫೋಟೋವೊಂದು ವೈರಲ್ ಆಗಿತ್ತು. ಆದರೆ, ಇಂತಹ ವರದಿ ನಮ್ಮ ಪತ್ರಿಕೆಯಲ್ಲಿ ಪ್ರಕಟವಾಗಿಲ್ಲ ಅದು ಸುಳ್ಳು ಎಂದು ಪತ್ರಿಕೆ ಸ್ಪಷ್ಟಪಡಿಸಿದೆ.
ಪ್ರಧಾನಿ ಮೋದಿ ಫೋಟೋ ಇರುವ ಪತ್ರಿಕೆಯ ಮುಖಪುಟದ ಚಿತ್ರವು ತಿರುಚಿದ ಚಿತ್ರವಾಗಿದೆ ಎಂದು ಪತ್ರಿಕೆ ಸ್ಪಷ್ಟಪಡಿಸಿದೆ ಜೊತೆಗೆ ಪ್ರಧಾನಿ ಮೋದಿ ಅವರ ಅಮೆರಿಕ ಪ್ರವಾಸದ ಯಾವುದೇ ವರದಿ ನ್ಯೂಯಾರ್ಕ್ ಟೈಮ್ಸ್ ನಲ್ಲಿ ಪ್ರಕಟಗೊಂಡಿಲ್ಲ ಎನ್ನುವುದು ತಿಳಿದು ಬಂದಿದೆ.
ಪ್ರಧಾನಿ ಮೋದಿ ಅಮೆರಿಕ ಪ್ರವಾಸದ ಬಗ್ಗೆ ತಿರುಚಿದ ಫೋಟೋವನ್ನು ಸೃಷ್ಟಸಿ, ‘ಭೂಮಿಯ ಕಟ್ಟ ಕಡೆಯ ಉತ್ತಮ ಭರವಸೆ ಎಂಬ ತಲೆಬರಹ’ವನ್ನು ನೀಡಲಾಗಿತ್ತು. ಜೊತೆಗೆ ವಿಶ್ವದಲ್ಲೇ ಅತೀ ಹೆಚ್ಚು ಪ್ರೀತಿಸಲ್ಪಡುವ ಮತ್ತು ಶಕ್ತಿಶಾಲಿ ನಾಯಕ, ನಮ್ಮನ್ನು ಹರಸಲು ಇಲ್ಲಿಗೆ ಬಂದಿದ್ದಾರೆ ಎಂದು ಪತ್ರಿಕೆ ವರದಿ ಮಾಡಿದೆ ಎಂಬಂತೆ ಫೇಕ್ ಫೋಟೋ ಸೃಷ್ಟಿಸಲಾಗಿತ್ತು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj
ಇನ್ನಷ್ಟು ಸುದ್ದಿಗಳು…
ರಾಜ್ಯದಲ್ಲಿ ಮತ್ತೊಂದು ದಲಿತ ದೌರ್ಜನ್ಯ: ಬೆಳ್ಳಂಬೆಳಗ್ಗೆ ದಲಿತರ ಗುಡಿಸಲುಗಳನ್ನು ಧ್ವಂಸ ಮಾಡಿದ ಅಧಿಕಾರಿಗಳು
ಯಾರ್ಯಾರದ್ದು ಏನು ಲೂಸ್ ಆಗಿದೆ ಗೊತ್ತಿಲ್ಲ, ಸಿದ್ದರಾಮಯ್ಯ ತಲೆ ಲೂಸ್ ಆಗಿದೆ | ಸದಾನಂದ ಗೌಡ ಕಿಡಿ
ಸಿದ್ದರಾಮಯ್ಯನವರೇ ದೊಡ್ಡ ಭಯೋತ್ಪಾದಕ ಅನ್ನಿಸುತ್ತಿದೆ | ನಳಿನ್ ಕುಮಾರ್ ಕಟೀಲ್ ವಾಗ್ದಾಳಿ
ಮೂವರು ಮಕ್ಕಳೊಂದಿಗೆ ನದಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ತಾಯಿ | ತಾಯಿ, ಮಗಳು ದಾರುಣ ಸಾವು
“ದೇವಸ್ಥಾನ ತೆರವಿಗೆ ಆದೇಶ ನೀಡಿದ್ದು ಜಿಲ್ಲಾಧಿಕಾರಿ, ವರ್ಗಾವಣೆಯಾಗಿದ್ದು ತಹಶೀಲ್ದಾರ್!”
ಕಡಬ: ಯುವತಿಯ ಮೇಲೆ ಅತ್ಯಾಚಾರ, ಗರ್ಭಪಾತ | ಕಾನ್ ಸ್ಟೇಬಲ್ ಅರೆಸ್ಟ್
ಸಿಪಿಐನಿಂದ ಕಾಂಗ್ರೆಸ್ ಗೆ ಹೋಗುವಾಗ ಸಿಪಿಐ ಕಚೇರಿಯ ಎಸಿಯನ್ನೂ ಕೊಂಡೊಯ್ದ ಕನ್ಹಯ್ಯಾ!
ಜೆಡಿಎಸ್ ನ್ನು ಸಿದ್ದರಾಮಯ್ಯ ಮಾತ್ರವಲ್ಲ, ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ | ಹೆಚ್.ಡಿ.ದೇವೇಗೌಡ ಗುಡುಗು