ಮತ್ತೆ ಉದಯಿಸಲಿದೆ ಕೆಜೆಪಿ? | ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುತ್ತಾ? - Mahanayaka

ಮತ್ತೆ ಉದಯಿಸಲಿದೆ ಕೆಜೆಪಿ? | ಜೆಡಿಎಸ್ ಜೊತೆಗೆ ಮೈತ್ರಿ ಮಾಡಿಕೊಳ್ಳುತ್ತಾ?

kjp jds
01/10/2021

ಶಿವಮೊಗ್ಗ: 2023ರ ವಿಧಾನಸಭಾ ಚುನಾವಣೆಯಲ್ಲಿ ಕೆಜೆಪಿ ಮತ್ತೊಮ್ಮೆ ರಾಜ್ಯದಲ್ಲಿ ಸದ್ದು ಮಾಡಲಿದ್ದು, ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ ಮಾಡಿಕೊಂಡು ರಾಜ್ಯದಲ್ಲಿ ಹೊಸ ಸರ್ಕಾರ ಸ್ಥಾಪಿಸಲು ಯೋಜನೆ ರೂಪಿಸಲಾಗಿದೆ ಎನ್ನುವ ವಿಚಾರ ಇದೀಗ ಚರ್ಚೆಗೆ ಬಂದಿದೆ.

2023ರ ಚುನಾವಣೆಯನ್ನು ಎದುರಿಸಲು ಜೆಡಿಎಸ್ ಈಗಾಗಲೇ ಸಿದ್ಧತೆ ನಡೆಸಿದೆ.   ‘ಮಿಷನ್ 123’ ಎಂಬ ಮಂತ್ರದೊಂದಿಗೆ ಜೆಡಿಎಸ್ ಮುಂದಿನ ವಿಧಾನಸಭಾ ಚುನಾವಣೆಗೆ ಮುಂದಾಗಿದೆ. ಮಿಷನ್ 123 ನಮ್ಮ ಗುರಿಯಲ್ಲ ಛಲ ಎಂದು ಕೂಡ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಹೇಳಿದ್ದರು. ಈ ನಡುವೆ ಕೆಜೆಪಿ ಮತ್ತೆ ರಾಜ್ಯದಲ್ಲಿ ಪುನರ್ ಸ್ಥಾಪನೆಗೊಳ್ಳಲಿದೆ ಎನ್ನುವ ವಿಚಾರ ಚರ್ಚೆಯಲ್ಲಿದೆ.

ಈ ಹೊಸ ಚರ್ಚೆಯನ್ನು ಕೆಪಿಸಿಸಿ ವಕ್ತಾರ ಹಾಗೂ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಹೇಳಿದ್ದಾರೆ ಎಂದು ವರದಿಯಾಗಿದೆ. ಬೆಂಕಿ ಇಲ್ಲದೆ ಹೊಗೆ ಬರುವುದಿಲ್ಲ ಎನ್ನುವಂತೆ ಕಿಮ್ಮನೆ ಅವರು ಸುಮ್ಮನೆ ಈ ವಿಚಾರವನ್ನು ಪ್ರಸ್ತಾಪಿಸಿರಲಿಕ್ಕಿಲ್ಲ. ಅವರಿಗೆ ಈ ಬಗ್ಗೆ ಮಾಹಿತಿ ದೊರೆತಿರಬಹುದು ಎನ್ನುವ ಚರ್ಚೆಗಳು ಕೂಡ ಇದೀಗ ಕೇಳಿ ಬಂದಿವೆ.

2023ರ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ಧವಾಗಿದೆ. ಒಂದೆಡೆ ರಾಜ್ಯ ಬಿಜೆಪಿ ಮುಂದಿನ ಚುನಾವಣೆಗೆ ಮತಾಂತರ ಎಂಬ ವಿಚಾರವನ್ನು ಎತ್ತಿಕೊಂಡಿದೆ. ಈ ವಿಚಾರವಾಗಿ ನೂರಾರು ಅಸಂಬದ್ಧ ಪೋಸ್ಟರ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ. ಕಾಂಗ್ರೆಸ್ ಬೆಲೆ ಏರಿಕೆ ಮತ್ತು ದೇವಾಲಯ ಧ್ವಂಸ, ರೈತರ ಸಮಸ್ಯೆಗಳನ್ನು ಎತ್ತಿಕೊಂಡಿದೆ.

ಜೆಡಿಎಸ್ ಈಗಾಗಲೇ ಕಾರ್ಯಾಗಾರಗಳನ್ನು ಹಮ್ಮಿಕೊಳ್ಳುತ್ತಿದ್ದು, 2023ರ ಚುನಾವಣೆಯನ್ನು ಹೇಗೆ ಎದುರಿಸುವುದು ಎಂಬ ಬಗ್ಗೆ ಸಿದ್ಧತೆಯನ್ನು ನಡೆಸುತ್ತಿದೆ. ಇನ್ನೊಂದಡೆ ರಾಜ್ಯದಲ್ಲಿ ಬಿಎಸ್ ಪಿ ಕೂಡ ರಾಜಕೀಯ ಚಟುವಟಿಕೆ ಆರಂಭಿಸಿದೆ. ಈ ನಡುವೆ ಚರ್ಚೆಯಲ್ಲಿಯೇ ಇಲ್ಲದ ಕೆಜೆಪಿ ಕೂಡ ಚರ್ಚೆಗೆ ಬಂದಿದ್ದು, ಇನ್ನಷ್ಟು ಕುತೂಹಲವನ್ನು ಕೆರಳಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/KPRE32QAEFL3ZvRW2wbYvj

ಇನ್ನಷ್ಟು ಸುದ್ದಿಗಳು…

ಗರ್ಭಪಾತದ ವೇಳೆ ಅತ್ಯಾಚಾರ ಸಂತ್ರಸ್ತೆ ಸಾವು: ನಾಲ್ವರು ಅರೆಸ್ಟ್

ಕ್ಲಾಸ್ ನಲ್ಲಿ ಗಲಾಟೆ ಮಾಡಿದ ವಿದ್ಯಾರ್ಥಿಯ ಕಣ್ಣಿಗೆ ಪೆನ್ ಎಸೆದ ಶಿಕ್ಷಕಿಗೆ ಜೈಲು!

BSPಯನ್ನು ಅಧಿಕಾರಕ್ಕೆ ತರಲು ಕಾರ್ಯಕರ್ತರು ಶ್ರಮಿಸಬೇಕು | ಕಾರ್ಯಕರ್ತರ ಸಮಾವೇಶದಲ್ಲಿ ರಾಮ್ಜೀ ಗೌತಮ್ ಕರೆ

ಸೊಸೆಗೆ ಚಾಕುವಿನಿಂದ ಚುಚ್ಚಿದ ಅತ್ತೆ: ಸೊಸೆ ಮೃತಪಟ್ಟಿದ್ದಾಳೆ ಎಂದು ಭಾವಿಸಿ ಅತ್ತೆ ನೇಣಿಗೆ ಶರಣು

ಕೂದಲು ಉದುರುವಿಕೆ, ಎದೆ ಉರಿ ಸೇರಿದಂತೆ ಹಲವು ರೋಗಗಳ ನಿವಾರಣೆ ಅಲೋವೆರಾ ಉತ್ತಮ

ಅರ್ಚಕನ ಮಾದಕ ಜಾಲ ಬಯಲು: ಗಾಂಜಾ ಮಾರಾಟ ಮಾಡುತ್ತಿದ್ದ ಅರ್ಚಕ ಅರೆಸ್ಟ್

ನೆಹರೂ ಒಪ್ಪಿದ್ದ ಆರೆಸ್ಸೆಸ್ ನ್ನು  ಕಾಂಗ್ರೆಸ್ ಒಪ್ಪಿಕೊಳ್ಳಲಿ | ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ

ಇತ್ತೀಚಿನ ಸುದ್ದಿ