ಕ್ರೂಸ್ ಹಡಗಿನಲ್ಲಿ ಡ್ರಗ್ಸ್‌ ಪಾರ್ಟಿ: ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‌ ಅರೆಸ್ಟ್ - Mahanayaka
4:12 PM Wednesday 5 - February 2025

ಕ್ರೂಸ್ ಹಡಗಿನಲ್ಲಿ ಡ್ರಗ್ಸ್‌ ಪಾರ್ಟಿ: ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‌ ಅರೆಸ್ಟ್

aryan khan arrested
03/10/2021

ಮುಂಬೈ: ಮುಂಬೈನ ತೀರ ಪ್ರದೇಶದ ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆದಿದೆ ಎನ್ನಲಾದ ಡ್ರಗ್ಸ್‌ ಪಾರ್ಟಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್‌ ರನ್ನು ರಾಷ್ಟ್ರೀಯ ಮಾದಕ ವಸ್ತು ನಿಯಂತ್ರಣ ಘಟಕದ ಅಧಿಕಾರಿಗಳು ಬಂಧಿಸಿದ್ದಾರೆ.

ಆರ್ಯನ್ ಜೊತೆ ಇನ್ನೂ 7 ಜನರನ್ನು ಬಂಧಿಸಲಾಗಿದೆ ಎಂದು ಎನ್ ಸಿಬಿ ಅಧಿಕಾರಿಗಳು ತಿಳಿಸಿದ್ದು, ಬಂಧಿತರಲ್ಲಿ ಇಬ್ಬರು ಯುವತಿಯರೂ ಇದ್ದು, ಆರ್ಯನ್ ಖಾನ್ ಸೇರಿದಂತೆ ಮುನ್‌ಮುನ್ ದಮೇಚಾ, ನೂಪೂರ್ ಸಾರಿಕಾ, ಇಸ್‌ಮಿತ್ ಸಿಂಗ್, ಮೋಹಕ್ ಜೆಸ್ವಾಲ್, ವಿಕ್ರಾಂತ್ ಚೊಕ್ಕರ್, ಗೋಮಿತ್ ಚೋಪ್ರಾ, ಅರ್ಬಾಜ್ ಮರ್ಚಂಟ್ ಎನ್ನುವವರು ಇದ್ದಾರೆ ಎಂದು ಎನ್‌ ಸಿಬಿ ತಿಳಿಸಿದೆ ಎಂದು ವರದಿಯಾಗಿದೆ.

ಇನ್ನೂ ಬಂಧಿತರನ್ನು ಹೆಚ್ಚಿನ ವಿಚಾರಣೆಗಾಗಿ ನ್ಯಾಯಾಲಯಕ್ಕೆ ಹಾಜರುಪಡಿಸಿ ವಶಕ್ಕೆ ತೆಗೆದುಕೊಳ್ಳುವ ಸಾಧ್ಯತೆಗಳಿವೆ. ಸದ್ಯ ಬಂಧಿತರನ್ನು ವೈದ್ಯಕೀಯ ತಪಾಸಣೆಗೆ ಕರೆದೊಯ್ಯಲಾಗಿದೆ ಎಂದು ತಿಳಿದು ಬಂದಿದೆ. ಈ ಘಟನೆಗಳ ನಡುವೆ ನಟ ಶಾರೂಖ್ ಖಾನ್ ಅವರು ಸ್ಪೇನ್ ನಲ್ಲಿ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದು, ಚಿತ್ರೀಕರಣವನ್ನು ನಿಲ್ಲಿಸಿ ಅವರು ಭಾರತಕ್ಕೆ ಮರಳುತ್ತಿದ್ದಾರೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಅಂಬೇಡ್ಕರ್ ಗಿಂತಲೂ ದೊಡ್ಡವರ ಇವರೆಲ್ಲ? | ಬಿಜೆಪಿಯ ಮತಾಂತರ ಹೈಡ್ರಾಮದ ವಿರುದ್ಧ ರಮೇಶ್ ಕುಮಾರ್ ಕಿಡಿ

ಪತ್ನಿಯನ್ನು 500 ರೂಪಾಯಿಗೆ ಮಾರಾಟ ಮಾಡಿದ ಪತಿ | ಖರೀದಿಸಿದವನಿಂದ ಮಹಿಳೆಯ ಅತ್ಯಾಚಾರ

ಕೆರೆಯಲ್ಲಿ ಈಜಲು ಹೋದ ನಾಲ್ವರು ನೀರಿನಲ್ಲಿ ಮುಳುಗಿ ದಾರುಣ ಸಾವು!

ಬಿಜೆಪಿ ಅಭ್ಯರ್ಥಿ ವಿರುದ್ಧ ಭರ್ಜರಿ ಜಯಗಳಿಸಿದ ಮಮತಾ ಬ್ಯಾನರ್ಜಿ!

ಬಟ್ಟೆ ಒಣಗಲು ಹಾಕುತ್ತಿರುವ ವೇಳೆ ವಿದ್ಯುತ್ ಶಾಕ್: ಅಜ್ಜಿ ಹಾಗೂ ಮೊಮ್ಮಗ ಸ್ಥಳದಲ್ಲಿಯೇ ಸಾವು!

ಅಂಬೇಡ್ಕರ್ ಗಿಂತಲೂ ದೊಡ್ಡವರ ಇವರೆಲ್ಲ? | ಬಿಜೆಪಿಯ ಮತಾಂತರ ಹೈಡ್ರಾಮದ ವಿರುದ್ಧ ರಮೇಶ್ ಕುಮಾರ್ ಕಿಡಿ

ಬಾಲಕಿಯನ್ನು ಅಪಹರಿಸಿ ಅತ್ಯಾಚಾರ: ಒಂದು ವರ್ಷದ ಬಳಿಕ ಆರೋಪಿ ಅರೆಸ್ಟ್

 

ಇತ್ತೀಚಿನ ಸುದ್ದಿ