ಮರಕ್ಕೆ ನೇಣುಬಿಗಿದುಕೊಂಡು ಎಎಸ್ ಐ ಆತ್ಮಹತ್ಯೆಗೆ ಶರಣು! - Mahanayaka
3:59 PM Thursday 12 - December 2024

ಮರಕ್ಕೆ ನೇಣುಬಿಗಿದುಕೊಂಡು ಎಎಸ್ ಐ ಆತ್ಮಹತ್ಯೆಗೆ ಶರಣು!

asi gurumorthy
03/10/2021

ಚಿತ್ರದುರ್ಗ: ಸಹಾಯಕ ಸಬ್ ಇನ್ಸ್ ಪೆಕ್ಟರ್ ಒಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರು ಘಟನೆ ಚಿತ್ರದುರ್ಗ ಜಿಲ್ಲೆಯಲ್ಲಿ ನಡೆದಿದ್ದು, ಇವರು ಎಎಸ್ ಐ ಆಗಿ ಕಾರ್ಯನಿರ್ವಹಿಸುತ್ತಿದ್ದ ಗುರುಮೂರ್ತಿ ದಂಡಿನಕುರುಬರಹಟ್ಟಿ ಗ್ರಾಮದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.

ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿ ಪೊಲೀಸ್ ಠಾಣೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಆಗಿದ್ದ ಗುರುಮೂರ್ತಿ ಅವರು  ಗಣಪತಿ ವಿಸರ್ಜನೆಯ ಬಂದೋಬಸ್ತ್ ಗೆ ತಾವೇ ಕೇಳಿ ನಿಯೋಜನೆಯಾಗಿದ್ದರು. ಆದರೆ, ಬಂದೋಬಸ್ತ್ ಗೆ ತೆರಳದೇ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ತಿಳಿದು ಬಂದಿದೆ.

ಗುರುಮೂರ್ತಿ ಅವರ ಆತ್ಮಹತ್ಯೆಗೆ ಕಾರಣ ಏನು ಎನ್ನುವುದು ತಿಳಿದು ಬಂದಿಲ್ಲ. ಆದರೆ, ಪ್ರಾಥಮಿಕ ಮಾಹಿತಿಗಳ ಪ್ರಕಾರ ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಅವರು ನೇಣುಬಿಗಿದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಘಟನೆ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಸದ್ಯ ತನಿಖೆ ನಡೆಸುತ್ತಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ಅಂಬೇಡ್ಕರ್ ಗಿಂತಲೂ ದೊಡ್ಡವರ ಇವರೆಲ್ಲ? | ಬಿಜೆಪಿಯ ಮತಾಂತರ ಹೈಡ್ರಾಮದ ವಿರುದ್ಧ ರಮೇಶ್ ಕುಮಾರ್ ಕಿಡಿ

ಕ್ರೂಸ್ ಹಡಗಿನಲ್ಲಿ ಡ್ರಗ್ಸ್‌ ಪಾರ್ಟಿ: ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್‌ ಅರೆಸ್ಟ್

ಪತ್ನಿಯನ್ನು 500 ರೂಪಾಯಿಗೆ ಮಾರಾಟ ಮಾಡಿದ ಪತಿ | ಖರೀದಿಸಿದವನಿಂದ ಮಹಿಳೆಯ ಅತ್ಯಾಚಾರ

ಬಟ್ಟೆ ಒಣಗಲು ಹಾಕುತ್ತಿರುವ ವೇಳೆ ವಿದ್ಯುತ್ ಶಾಕ್: ಅಜ್ಜಿ ಹಾಗೂ ಮೊಮ್ಮಗ ಸ್ಥಳದಲ್ಲಿಯೇ ಸಾವು!

ಮುಸ್ಲಿಂ, ಕ್ರಿಶ್ಚಿಯನ್ ಧರ್ಮದವರು ಹಿಂದೂಗಳಿಗೆ ಅಮಿಷವೊಡ್ಡಿ ಮತಾಂತರ ನಡೆಸುತ್ತಿದ್ದಾರೆ | ಕೆ.ಎಸ್‌.ಈಶ್ವರಪ್ಪ ಆರೋಪ

ಅಂಜನಾದ್ರಿ ಬೆಟ್ಟದಿಂದ ಅಂಗಡಿ ತೆರವು ಮಾಡಲು ಅನ್ಯ ಧರ್ಮೀಯರಿಗೆ ಬೆದರಿಕೆ: ಅತುಲ್ ಕುಮಾರ್ ವಿರುದ್ಧ ಎಫ್ ಐಆರ್

ಇತ್ತೀಚಿನ ಸುದ್ದಿ