ಹತ್ಯೆಯಾದ 8 ರೈತರ ಕುಟುಂಬಗಳ ಭೇಟಿಗೆ ತೆರಳಿದ ಪ್ರಿಯಾಂಕಾ ಗಾಂಧಿ ಅರೆಸ್ಟ್!
ಉತ್ತರಪ್ರದೇಶ: ಉತ್ತರ ಪ್ರದೇಶ ಉಪ ಮುಖ್ಯಮಂತ್ರಿ ಕೇಶವ ಪ್ರಸಾದ್ ಮೌರ್ಯ ಅವರಿಗೆ ಕಪ್ಪು ಬಾವುಟ ಪ್ರದರ್ಶಿಸಿದ್ದಕ್ಕೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ರೈತರ ಮೇಲೆ ಕಾರು ಹರಿಸಿ ರೈತರನ್ನು ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಲು ಯತ್ನಿಸಿದ ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿಯವರನ್ನು ಬಂಧಿಸಲಾಗಿದೆ.
ಪ್ರಿಯಾಂಕಾ ಗಾಂಧಿಯವರನ್ನು ಉತ್ತರ ಪ್ರದೇಶ ಪೊಲೀಸರು ಗೃಹಬಂಧನದಲ್ಲಿರಿಸಿದ್ದರು. ಪ್ರಿಯಾಂಕಾ ಆ ಆದೇಶವನ್ನು ಧಿಕ್ಕರಿಸಿ ಭಾನುವಾರ ರಾತ್ರಿ ಲಖನೌದಿಂದ ಲಖಿಂಪುರ್ ಖೇರಿಗೆ ತೆರಳಿದರು. ಉತ್ತರ ಪ್ರದೇಶ ಪೊಲೀಸರು ಸೋಮವಾರ ಬೆಳಗಿನ ಜಾವ 5:30 ರ ಸುಮಾರಿಗೆ ಹರಗಾಂವ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಪ್ರಿಯಾಂಕಾರನ್ನು ಬಂಧಿಸಿದ್ದಾರೆ.
ಲಖಿಂಪುರ್ ಖೇರಿಯಲ್ಲಿ ರೈತರ ಹತ್ಯೆಯ ಬೆನ್ನಲ್ಲೇ ಪ್ರಿಯಾಂಕಾ ಗಾಂಧಿ ಹಾಗೂ ಉತ್ತರ ಪ್ರದೇಶದ ಮಾಜಿ ಸಿಎಂ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಅವರನ್ನು ಗೃಹಬಂಧನದಲ್ಲಿರಸಲಾಗಿತ್ತು. ಆದರೆ, ಪ್ರಿಯಾಂಕಾ ಗಾಂಧಿ ತಮ್ಮ ಮನೆಯಿಂದ ಹೊರ ಬಂದು ಹತ್ಯೆಗೀಡಾಗಿರುವ ರೈತರ ಕುಟುಂಬಗಳನ್ನು ಭೇಟಿಯಾಗಲು ತೆರಳುತ್ತಿದ್ದ ವೇಳೆ ಪೊಲೀಸರು ಬಂಧಿಸಿದ್ದಾರೆ.
ಈ ಸಂಬಂಧ ರಾಷ್ಟ್ರೀಯ ಯೂಥ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್ ಟ್ವೀಟ್ ಮಾಡಿದ್ದು, ಘಟನೆಯ ವಿಡಿಯೋ ಹಂಚಿಕೊಂಡು, “ಈ ದೇಶದಲ್ಲಿ ಏನಾಗುತ್ತಿದೆ? Z+ ಭದ್ರತೆಯಿರುವ ನಾಯಕಿಯನ್ನು ಯಾವುದೇ ವಾರಂಟ್ ಇಲ್ಲದೇ ಪೊಲೀಸರು ಬಂಧಿಸಿದ್ದಾರೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9
ಇನ್ನಷ್ಟು ಸುದ್ದಿಗಳು…
ಶಾಸಕರ ಕಾರಿಗೆ ಮಹಿಳೆ ಬಲಿ: ಕಾರು -ಬೈಕ್ ಡಿಕ್ಕಿಯಾಗಿ ಮಹಿಳೆ ಸ್ಥಳದಲ್ಲೇ ಸಾವು
ಕಾರು ಹತ್ತಿಸಿ ಪ್ರತಿಭಟನಾ ನಿರತ ಮೂವರು ರೈತರ ಭೀಕರ ಹತ್ಯೆ ಮಾಡಿದ ಕೇಂದ್ರ ಸಚಿವರ ಪುತ್ರ!
ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪಾರ್ಟಿ: ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಅರೆಸ್ಟ್
ಪತ್ನಿಯನ್ನು 500 ರೂಪಾಯಿಗೆ ಮಾರಾಟ ಮಾಡಿದ ಪತಿ | ಖರೀದಿಸಿದವನಿಂದ ಮಹಿಳೆಯ ಅತ್ಯಾಚಾರ
ಮುಸ್ಲಿಂ, ಕ್ರಿಶ್ಚಿಯನ್ ಧರ್ಮದವರು ಹಿಂದೂಗಳಿಗೆ ಅಮಿಷವೊಡ್ಡಿ ಮತಾಂತರ ನಡೆಸುತ್ತಿದ್ದಾರೆ | ಕೆ.ಎಸ್.ಈಶ್ವರಪ್ಪ ಆರೋಪ
ಅಂಬೇಡ್ಕರ್ ಗಿಂತಲೂ ದೊಡ್ಡವರ ಇವರೆಲ್ಲ? | ಬಿಜೆಪಿಯ ಮತಾಂತರ ಹೈಡ್ರಾಮದ ವಿರುದ್ಧ ರಮೇಶ್ ಕುಮಾರ್ ಕಿಡಿ