ಯೋಗ ಶಿಕ್ಷಕನಿಂದ ಯುವತಿಯ ಅತ್ಯಾಚಾರ: ಯೋಗದ ಹೆಸರಿನಲ್ಲಿ ಶಿಕ್ಷಕನ ಕಾಮಲೀಲೆ ಬಯಲು - Mahanayaka
3:17 AM Wednesday 11 - December 2024

ಯೋಗ ಶಿಕ್ಷಕನಿಂದ ಯುವತಿಯ ಅತ್ಯಾಚಾರ: ಯೋಗದ ಹೆಸರಿನಲ್ಲಿ ಶಿಕ್ಷಕನ ಕಾಮಲೀಲೆ ಬಯಲು

yoga
07/10/2021

ಚೆನ್ನೈ: ಯೋಗ ಶಿಕ್ಷಕನೋರ್ವ ತನ್ನ ಬಳಿ ಯೋಗ ಕಲಿಯುತ್ತಿದ್ದ 22 ವರ್ಷ ವಯಸ್ಸಿನ ಯುವತಿಯ ಮೇಲೆ ಅತ್ಯಾಚಾರ ನಡೆಸಿ, ವಿಡಿಯೋ ಮಾಡಿಕೊಂಡು ಬೆದರಿಕೆ ಹಾಕಿ ಪದೇ ಪದೇ ಅತ್ಯಾಚಾರ ನಡೆಸಿದ ಘಟನೆ ನಡೆಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ಕೋಡಂಬಕ್ಕಂ ನಿವಾಸಿಯಾಗಿರುವ 45 ವರ್ಷದ ಯೋಗರಾಜ್ ಅಲಿಯಾಸ್ ಪೂವೇಂದ್ರನ್ ಚಿದಂಬರಂ ಬಂಧಿತ ಆರೋಪಿಯಾಗಿದ್ದಾನೆ. ಮಾಂಬಲಂನ ಮಹಿಳಾ ಪೊಲೀಸರು ಹೇಳುವಂತೆ, ಏಪ್ರಿಲ್ ನಲ್ಲಿ ಮೊದಲ ಬಾರಿಗೆ ಅತ್ಯಾಚಾರ ಎಸಗಿದ್ದಾನೆ. ಮೊದಲಿಗೆ ಕೂಲ್  ಡ್ರಿಂಕ್ ನಲ್ಲಿ ಅಮಲು ಪದಾರ್ಥ ಬೆರೆಸಿಕೊಟ್ಟಿದ್ದ ಎಂದು ಯುವತಿ ಆರೋಪಿಸಿದ್ದು, ಆ ಬಳಿಕ ಆತ ತನ್ನ ಮೇಲೆ ಹಲವು ಬಾರಿ ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಯುವತಿ ಆರೋಪಿಸಿದ್ದಾಳೆ.

ಏಪ್ರಿಲ್‌ ನಲ್ಲಿ ಹುಟ್ಟುಹಬ್ಬದ ಪಾರ್ಟಿಯನ್ನು ಆಯೋಜಿಸುವ ನೆಪದಲ್ಲಿ ಆರೋಪಿ ತನ್ನ ಮನೆಗೆ ಯುವತಿಯನ್ನು ಆಹ್ವಾನಿಸಿ, ಪಾರ್ಟಿ ವೇಳೆ ತಂಪು ಪಾನೀಯಕ್ಕೆ ಮತೌಷಧಿ ಬೆರೆಸಿ ಅತ್ಯಾಚಾರ ನಡೆಸಿದ್ದಾನೆ. ಬಳಿಕ ಘಟನೆಯನ್ನು ವಿಡಿಯೋ ಮಾಡಿಕೊಂಡು, ತನಗೆ ಸಹಕರಿಸದಿದ್ದರೆ ಅತ್ಯಾಚಾರದ ವಿಡಿಯೋ ವೈರಲ್ ಮಾಡುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಯುವತಿ ದೂರಿನಲ್ಲಿ ತಿಳಿಸಿದ್ದಾಳೆ.

ಯೋಗ ತರಗತಿಗೆ ಬರುತ್ತಿದ್ದ ಹಲವು ಮಹಿಳೆಯನ್ನು ಈತ ಅತ್ಯಾಚಾರ ನಡೆಸಿದ್ದಾನೆ ಎಂದು ಸಂತ್ರಸ್ತ ಯುವತಿ ಆರೋಪಿಸಿದ್ದು, ಆರೋಪಿಯ ಮೊಬೈಲ್ ನಲ್ಲಿ ಸಾಕಷ್ಟು ಮಹಿಳೆಯರ ವಿಡಿಯೋಗಳಿವೆ ಎಂದು ಹೇಳಿದ್ದಾಳೆ. ಸದ್ಯ ಆರೋಪಿಯ ಮೊಬೈಲ್ ಹಾಗೂ ಲ್ಯಾಪ್ ಟಾಪ್ ನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

RSS ಶಿಕ್ಷಣ ನೀಡುತ್ತಿರುವುದು ರಾಷ್ಟ್ರ ನಿರ್ಮಾಣಕ್ಕಲ್ಲ, ಮಕ್ಕಳ ಮನಸ್ಸಿನಲ್ಲಿ ವಿಷ ಬೀಜ ಬಿತ್ತಲು | ಬಿಜೆಪಿಗರಿಗೆ ಕುಮಾರಸ್ವಾಮಿ ತಿರುಗೇಟು

ಪ್ರಚೋದನಾತ್ಮಕ ಅವಹೇಳನಾಕಾರಿ ಭಾಷಣ:  ಚೈತ್ರಾ ಕುಂದಾಪುರ ವಿರುದ್ಧ ದೂರು ದಾಖಲು

ಅಪ್ರಾಪ್ತ ವಿದ್ಯಾರ್ಥಿನಿಯ ಮೇಲೆ ಅತ್ಯಾಚಾರ ಎಸಗಿ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೋ ಹರಿಯಬಿಟ್ಟ ಕಿಡಿಗೇಡಿ

ಆಸ್ಪತ್ರೆ ಸ್ಟಾಫ್ ನರ್ಸ್ ಆತ್ಮಹತ್ಯೆಗೆ ಹೊಸ ತಿರುವು: ಮೊಬೈಲ್ ನಲ್ಲಿ ಪತ್ತೆಯಾದ ಫೋಟೋಗಳಿಂದ ರಹಸ್ಯ ಬಯಲು

ಹಿಂಸೆಗೆ ಪ್ರಚೋದಿಸುವ ದುರುದ್ದೇಶದಿಂದಲೇ ರೈತರ ಹತ್ಯೆ ನಡೆದಿದೆ | ರವಿಕಿರಣ್ ಪೂನಚ

ಮಾಟ ಮಂತ್ರದಿಂದ ನೆಮ್ಮದಿ ಪಡೆಯಲು ಹೋಗಿ 4.41 ಕೋಟಿ ರೂಪಾಯಿ ಕಳೆದುಕೊಂಡ ಮಹಿಳೆ

ಅರ್ಜಿ ನೀಡಲು ಬಂದ ಮಹಿಳೆಗೆ ಕಿರುಕುಳ: ಗ್ರಾ.ಪಂ. ಸದಸ್ಯನ ವಿರುದ್ಧ ದೂರು

ಇತ್ತೀಚಿನ ಸುದ್ದಿ