ಮಕ್ಕಳು ಜ್ಯೂಸ್ ಕುಡಿದ ಬಳಿಕ ಜ್ಯೂಸ್ ಗೆ ವಿಷ ಬೆರೆಸಿದ್ದೇನೆ, ನಾನೂ ವಿಷ ಕುಡಿದ್ದೇನೆ ಎಂದ ತಂದೆ! - Mahanayaka
1:13 AM Wednesday 11 - December 2024

ಮಕ್ಕಳು ಜ್ಯೂಸ್ ಕುಡಿದ ಬಳಿಕ ಜ್ಯೂಸ್ ಗೆ ವಿಷ ಬೆರೆಸಿದ್ದೇನೆ, ನಾನೂ ವಿಷ ಕುಡಿದ್ದೇನೆ ಎಂದ ತಂದೆ!

poison
08/10/2021

ಪುತ್ತೂರು: ವ್ಯಕ್ತಿಯೋರ್ವ ತಾನೂ ವಿಷ ಕುಡಿದು ತನ್ನ ಮಕ್ಕಳಿಗೂ ಜ್ಯೂಸ್ ನಲ್ಲಿ ವಿಷ ಬೆರೆಸಿ ಕುಡಿಸಿದ ಆತಂಕಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನ ಬಲ್ಯ ಗ್ರಾಮದ ಗೋಣಿಗುಡ್ಡೆಯಲ್ಲಿ ನಡೆದಿದ್ದು, ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.

ಬೆಳ್ತಂಗಡಿ ತಾಲೂಕಿನ ಶಿಶಿಲ ಗ್ರಾಮದ ಬಾಳೆಗುಂಡಿ ನಿವಾಸಿ ವಿಶ್ವನಾಥ್ ಎಂಬವರು ಕುಡಿತದ ಚಟ ಹೊಂದಿದ್ದು, ಇದರಿಂದಾಗಿ ಕುಟುಂಬದಲ್ಲಿ ನೆಮ್ಮದಿ ಇರಲಿಲ್ಲ. ಪ್ರತೀ ದಿನ ಜಗಳದಿಂದ ಬೇಸತ್ತ ಅವರ ಪತ್ನಿ ಚಂದ್ರಾವತಿ ತಮ್ಮ ಮಕ್ಕಳನ್ನು ಕರೆದುಕೊಂಡು ತಮ್ಮ ತವರು ಮನೆ ಕಡಬದ ಬಲ್ಯ ಗ್ರಾಮದ ಗೋಣಿಗುಡ್ಡೆಯಲ್ಲಿ ವಾಸವಿದ್ದರು ಎನ್ನಲಾಗಿದೆ.

ಆದರೆ, ಇಲ್ಲಿಗೂ ಬಂದ ವಿಶ್ವನಾಥ ಬರುವಾಗ ಮಕ್ಕಳಿಗೆ ಜ್ಯೂಸ್ ನಲ್ಲಿ ವಿಷ ಬೆರೆಸಿ ತೆಗೆದುಕೊಂಡು ಬಂದಿದ್ದಾನೆ. ಬಳಿಕ ತನ್ನಿಬ್ಬರು ಮಕ್ಕಳಿಗೆ ನೀಡಿದ್ದಾನೆ. ಈ ವೇಳೆ ಓರ್ವ ಮಗ ಜ್ಯೂಸ್ ಕುಡಿಯಲು ನಿರಾಕರಿಸಿದ್ದಾನೆ. ಇನ್ನೋರ್ವ ಮಗ ಜ್ಯೂಸ್ ಕುಡಿದಿದ್ದಾನೆ. ಮಕ್ಕಳು ಜ್ಯೂಸ್ ಬೇಡ ಎಂದರೂ ಒತ್ತಾಯ ಪೂರ್ವಕವಾಗಿ ಯಾಕೆ ಗಂಡ ಕುಡಿಸುತ್ತಿದ್ದಾನೆ ಎಂಬ ಅನುಮಾನ ಬಂದು ಪತ್ನಿ ಚಂದ್ರಾವತಿ ಪ್ರಶ್ನಿದಾಗ, ತಾನು ಜ್ಯೂಸ್ ನಲ್ಲಿ ವಿಷ ಬೆರೆಸಿದ್ದೇನೆ. ಜೊತೆಗೆ ತಾನು ಕೂಡ ವಿಷ ಕುಡಿದಿದ್ದೇನೆ ಎಂದು ಆತ ಹೇಳಿದ್ದಾನೆ ಎನ್ನಲಾಗಿದೆ.

ಪತಿಯ ಮಾತು ಕೇಳಿ ದಿಕ್ಕೇ ತೋಚದಂತಾದ ಪತ್ನಿ ತಕ್ಷಣವೇ ಮಕ್ಕಳನ್ನು ಹಾಗೂ ವಿಶ್ವನಾಥನನ್ನು ನೆಲ್ಯಾಡಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದು, ಬಳಿಕ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ದಿದ್ದಾರೆ. ಬಳಿಕ ಓರ್ವ ಪುತ್ರನನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರು ಜಿಲ್ಲಾಸ್ಪತ್ರೆ  ವೆನ್ಲಾಕ್ ಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9

ಇನ್ನಷ್ಟು ಸುದ್ದಿಗಳು…

ವಿದ್ಯಾರ್ಥಿನಿ ನೀನಾಳ ಆತ್ಮಹತ್ಯೆಯ ಹಿಂದಿದೆ ಹಲವು ಅನುಮಾನಗಳು | ಸೂಕ್ತ ತನಿಖೆಗೆ ಆಗ್ರಹ

ರಸ್ತೆಯ ಗುಂಡಿ ತಪ್ಪಿಸಲು ಹೋಗಿ ಟಿಪ್ಪರ್ ನಡಿಗೆ ಬಿದ್ದ ಯುವತಿ

ಬಿ.ವೈ.ವಿಜಯೇಂದ್ರ ಆಪ್ತ ಗೆಳೆಯನ ಮನೆಯ ಮೇಲೂ ಐಟಿ ದಾಳಿ!

ಮದುವೆಯಾದ ಬಳಿಕ ನರಕ ತೋರಿಸಿದ ಪತಿ | ಹಿಂಸೆ ತಾಳಲಾರದೇ ಆತ್ಮಹತ್ಯೆಗೆ ಶರಣಾದ ಮಹಿಳೆ

ಆತ್ಮಹತ್ಯೆ ಮಾಡುವುದಾಗಿ ಶಿವಮೊಗ್ಗದಿಂದ ನಾಪತ್ತೆಯಾಗಿದ್ದ ನೌಕರ ಧರ್ಮಸ್ಥಳದಲ್ಲಿ ಪತ್ತೆ!

ಬಿಜೆಪಿ ನಾಯಕರು ಕಾರಿನಲ್ಲಿ ಬರುವ ವೇಳೆ ಎಚ್ಚರವಾಗಿರಿ | ಸಾರ್ವಜನಿಕರಿಗೆ ಡಿ.ಕೆ.ಶಿವಕುಮಾರ್ ಸಲಹೆ

ಯೋಗ ಶಿಕ್ಷಕನಿಂದ ಯುವತಿಯ ಅತ್ಯಾಚಾರ: ಯೋಗದ ಹೆಸರಿನಲ್ಲಿ ಶಿಕ್ಷಕನ ಕಾಮಲೀಲೆ ಬಯಲು

ಪ್ರಚೋದನಾತ್ಮಕ ಅವಹೇಳನಾಕಾರಿ ಭಾಷಣ:  ಚೈತ್ರಾ ಕುಂದಾಪುರ ವಿರುದ್ಧ ದೂರು ದಾಖಲು

ಇತ್ತೀಚಿನ ಸುದ್ದಿ