ದಸರ ಮುಗಿದ ತಕ್ಷಣವೇ 1ರಿಂದ 5ರವರೆಗೆ ಶಾಲೆ ಆರಂಭ | ಸಚಿವ ಬಿ.ಸಿ.ನಾಗೇಶ್
ಉಡುಪಿ: ದಸರಾ ಮುಗಿದ ತಕ್ಷಣವೇ 1ರಿಂದ 5ನೇ ತರಗತಿ ವರೆಗೆ ಶಾಲಾ ಆರಂಭಕ್ಕೆ ರಾಜ್ಯ ಸರ್ಕಾರ ಆಸಕ್ತಿ ತೋರಿರುವುದಾಗಿ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದು, ಶಾಲೆ ಆರಂಭಕ್ಕೆ ಸಂಬಂಧ ಪಟ್ಟಂತೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಬಸವ ರಾಜ್ ಬೊಮ್ಮಾಯಿ ಟಾಸ್ಕ್ ಫೋರ್ಸ್ ಸಭೆ ಕರೆಯುತ್ತಾರೆ ಎಂದು ಅವರು ತಿಳಿಸಿದ್ದಾರೆ.
ಉಡುಪಿಯಲ್ಲಿ ಈ ಸಂಬಂಧ ಮಾತನಾಡಿದ ಬಿ.ಸಿ.ನಾಗೇಶ್(B.C.Nagesh), ಹಲವಾರ ಜಿಲ್ಲೆಗಳಲ್ಲಿ ಕೊವಿಡ್ ಪಾಸಿಟಿವಿಟಿ ಝೀರೋ ಇದೆ. ಶಾಲೆ ಆರಂಭಿಸಬಹುದು ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ದಸರಾ ಮುಗಿದ ತಕ್ಷಣವೇ ಶಾಲೆಗಳು ಆರಂಭ ಮಾಡಲಾಗುತ್ತದೆ, ಜೊತೆಗೆ ದಸರಾ ಮುಗಿದ ತಕ್ಷಣ ಬಿಸಿಯೂಟ ಆರಂಭವಾಗಲಿದೆ. ಆಯಾ ಜಿಲ್ಲೆಯ ಅಧಿಕಾರಿಗಳು ಎಲ್ಲಾ ವ್ಯವಸ್ಥೆಗಳನ್ನು ಮಾಡಿದ್ದಾರೆ. ತಾಂತ್ರಿಕ ಸಲಹಾ ಸಮಿತಿ ಒಪ್ಪಿಗೆ ಮೇರೆಗೆ ಶೀಘ್ರ ಶಾಲೆ ಆರಂಭಿಸುತ್ತೇವೆ ಎಂದು ಅವರು ಮಾಹಿತಿ ನೀಡಿದರು.
ಎಲ್ಲರಿಗೂ ಶಾಲೆ ಕಡ್ಡಾಯ ಮಾಡಿಲ್ಲ, ಮುಂದೆಯೂ ಕಡ್ಡಾಯ ಮಾಡಲ್ಲ. ಆನ್ ಲೈನ್ ಹಾಗೂ ಆಫ್ ಲೈನ್ ಎರಡು ಮಾದರಿಯಲ್ಲಿ ತರಗತಿಗಳು ನಡೆಯಲಿದೆ. ಈಗ ಆರಂಭವಾಗಿರುವ ಶಾಲೆಗಳ ಹಾಜರಾತಿ ತೃಪ್ತಿಕರವಾಗಿದೆ. ಆನ್ಲೈನ್ ತರಗತಿಯಿಂದ ಕೆಲ ಗ್ರಾಮೀಣ ಮಕ್ಕಳಿಗೆ ತೊಂದರೆ ಆಗಿದೆ. ಗ್ರಾಮೀಣ ಭಾಗದಲ್ಲಿ ಹೈಸ್ಕೂಲ್ ಮಕ್ಕಳ ಹಾಜರಾತಿ ಶೇ.90ರಷ್ಟು ಇದೆ. ದಸರಾದ ಮರುದಿನದಿಂದಲೇ ಎಲ್ಲಾ ಶಾಲೆಗಳಲ್ಲಿ ಬಿಸಿಯೂಟ ಆರಂಭಿಸಲಾಗುವುದು ಎಂದು ಸಚಿವರು ಇದೇ ಸಂದರ್ಭದಲ್ಲಿ ತಿಳಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/GprkhpfFmuL8YDKlAEmru9
ಇನ್ನಷ್ಟು ಸುದ್ದಿಗಳು…
ಬೌದ್ಧ ಮೂಲದ ರಥೋತ್ಸವಗಳು | ರಘು ಧರ್ಮಸೇನ
ರೈತರ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸದಿದ್ದರೆ, ಪ್ರಧಾನಿ ನಿವಾಸಕ್ಕೆ ಮುತ್ತಿಗೆ | ಭೀಮ್ ಆರ್ಮಿ ಎಚ್ಚರಿಕೆ
ಅಫ್ಘಾನಿಸ್ತಾನದ ಮಸೀದಿಯಲ್ಲಿ ಬಾಂಬ್ ಸ್ಫೋಟ: 100ಕ್ಕೂ ಅಧಿಕ ಮಂದಿ ಸಾವು
ಏರ್ ಇಂಡಿಯಾ ಟಾಟಾ ಸನ್ ಪ್ರೈವೇಟ್ ಲಿಮಿಟೆಡ್ ಪಾಲು | ಶೇ.100ರಷ್ಟು ಷೇರು ಮಾರಾಟ
ವಿದ್ಯಾರ್ಥಿನಿ ನೀನಾಳ ಆತ್ಮಹತ್ಯೆಯ ಹಿಂದಿದೆ ಹಲವು ಅನುಮಾನಗಳು | ಸೂಕ್ತ ತನಿಖೆಗೆ ಆಗ್ರಹ
ಆತ್ಮಹತ್ಯೆ ಮಾಡುವುದಾಗಿ ಶಿವಮೊಗ್ಗದಿಂದ ನಾಪತ್ತೆಯಾಗಿದ್ದ ನೌಕರ ಧರ್ಮಸ್ಥಳದಲ್ಲಿ ಪತ್ತೆ!
ಸುಬ್ರಮಣಿಯನ್ ಸ್ವಾಮಿ, ವರುಣ್ ಗಾಂಧಿಗೆ ಕಾರ್ಯಕಾರಿಣಿಯಿಂದ ಗೇಟ್ ಪಾಸ್ ನೀಡಿದ ಬಿಜೆಪಿ!