ಬಂಟ್ವಾಳ: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳ ಅರೆಸ್ಟ್ - Mahanayaka
11:13 PM Wednesday 11 - December 2024

ಬಂಟ್ವಾಳ: ವಿದ್ಯಾರ್ಥಿನಿಯ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ: ನಾಲ್ವರು ಆರೋಪಿಗಳ ಅರೆಸ್ಟ್

arrest
09/10/2021

ಬಂಟ್ವಾಳ: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಅಮ್ಟಾಡಿಯಲ್ಲಿ ಅಪ್ರಾಪ್ತ ವಯಸ್ಸಿನ ಬಾಲಕಿಯ ಮೇಲೆ ಐವರು ಆರೋಪಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಸಂತ್ರಸ್ತ ಬಾಲಕಿಗೆ ಪರಿಚಯವಿದ್ದಾತ ಕೂಡ ಬಂಧಿತ ಆರೋಪಿಗಳಲ್ಲಿ ಓರ್ವ ಎಂದು ವರದಿಯಾಗಿದೆ. ಶುಕ್ರವಾರ ಬೆಳಿಗ್ಗೆ 7 ಗಂಟೆಗೆ ಬಾಲಕಿ ತನ್ನ ಮನೆಯಿಂದ ಶಾಲೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಬಾಲಕಿಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರ ನಡೆಸಿದ್ದರು. ಬಳಿಕ ಇಲ್ಲಿನ ಬ್ರಹ್ಮರಕೂಟ್ಲುವಿನ ಟೋಲ್ ಗೇಟ್ ಬಳಿಯಲ್ಲಿ ಬಿಟ್ಟು ಹೋಗಿದ್ದರು. ಈ ದೃಶ್ಯ ಕ್ಯಾಮರಾದಲ್ಲಿ ಸೆರೆಯಾಗಿದೆ ಎಂದು ಹೇಳಲಾಗಿದೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 366(A), 376(D), 506ಗಳಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ಮುಂದುವರಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ಪೊಲೀಸರ ದುಷ್ಕೃತ್ಯದಿಂದ ಠಾಣೆ ಎದುರೇ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡ ಅತ್ಯಾಚಾರ ಸಂತ್ರಸ್ತೆ

ಮಗನ ಅಂತ್ಯಸಂಸ್ಕಾರ ಮುಗಿದು ಕೆಲವೇ ಕ್ಷಣಗಳಲ್ಲಿ ತಾಯಿ ಹೃದಯಾಘಾತದಿಂದ ಸಾವು!

ಆರ್ಯನ್ ಖಾನ್ ಭಾಗವಹಿಸಿದ್ದ ಡ್ರಗ್ಸ್ ಪಾರ್ಟಿಯಲ್ಲಿ ಸಿಕ್ಕಿ ಬಿದ್ದಿದ್ದ ಬಿಜೆಪಿ ನಾಯಕನ ಭಾವನನ್ನು ಬಿಡುಗಡೆ ಮಾಡಲಾಗಿದೆ | ಎನ್‌ ಸಿಪಿ ನಾಯಕ ಗಂಭೀರ ಆರೋಪ

ಪಟಾಕಿ ಶಬ್ದಕ್ಕೆ ಬೆಚ್ಚಿ ಬಿದ್ದ ಆನೆ: ದಿಕ್ಕಾಪಾಲಾಗಿ ಓಡಿದ ಜನರು

ಗಂಗೊಳ್ಳಿ: ಹಿಂದೂಗಳ ಮೀನುಮಾರುಕಟ್ಟೆಯನ್ನು ಮುಸ್ಲಿಮರು ಬಹಿಷ್ಕರಿಸಿದ್ದು ಯಾಕೆ? | ಒಂದೇ ತಾಯಿ ಮಕ್ಕಳಂತಿದ್ದವರ ನಡುವೆ ಏನಿದು ಗಲಾಟೆ?

ರೈತರ ಹತ್ಯೆ ಪ್ರಕರಣದ ಆರೋಪಿಗಳನ್ನು ಬಂಧಿಸದಿದ್ದರೆ, ಪ್ರಧಾನಿ ನಿವಾಸಕ್ಕೆ ಮುತ್ತಿಗೆ | ಭೀಮ್ ಆರ್ಮಿ ಎಚ್ಚರಿಕೆ

ಇತ್ತೀಚಿನ ಸುದ್ದಿ