ಮುಸ್ಲಿಮರ ಮುಂಗೈಗೆ ಬೆಲ್ಲ: ಕಾಂಗ್ರೆಸ್ ನ ನಿಜಬಣ್ಣವನ್ನು ಸಿ.ಎಂ.ಇಬ್ರಾಹಿಂ ಬೆತ್ತಲಾಗಿಸಿದ್ದಾರೆ | ಕಾಂಗ್ರೆಸ್ ಗೆ ಚುಚ್ಚಿದ ಬಿಜೆಪಿ

ಬೆಂಗಳೂರು: ಉಪ ಚುನಾವಣೆ ನಡುವೆ ಕಾಂಗ್ರೆಸ್—ಬಿಜೆಪಿ ನಡುವಿನ ಜಟಾಪಟಿ ಹೆಚ್ಚಾಗಿದ್ದು, ಇದೀಗ ಸಿಎಂ ಇಬ್ರಾಹೀಂ ಅವರ ಹೇಳಿಕೆಯನ್ನು ಉಲ್ಲೇಖಿಸಿ ರಾಜ್ಯ ಬಿಜೆಪಿ ಕಾಂಗ್ರೆಸ್ ಗೆ ತಿರುಗೇಟು ನೀಡಿದೆ. ಮುಸ್ಲಿಮರನ್ನು ಕಾಂಗ್ರೆಸ್ ಕೇವಲ ವೋಟ್ ಬ್ಯಾಂಕ್ ಗೆ ಮಾತ್ರ ಬಳಸುವ ಮೂಲಕ ಮುಸ್ಲಿಮ್ ನಾಯಕರನ್ನು ಕಡೆಗಣಿಸಿದೆ ಎಂದು ಬಿಜೆಪಿ, ಕಾಂಗ್ರೆಸ್ ಗೆ ತಿರುಗೇಟು ನೀಡಿದೆ.
ಕಾಂಗ್ರೆಸ್ ವಿರುದ್ಧ ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಸೋತ ಸಿದ್ದರಾಮಯ್ಯ ವಿಪಕ್ಷ ನಾಯಕ – ಸೋತ ಪರಮೇಶ್ವರ ಸಚಿವ – ಸೋತ ಖರ್ಗೆಗೆ ರಾಜ್ಯಸಭಾ ಸ್ಥಾನ ಆದರೆ ಮುಸ್ಲಿಮರಿಗೆ ಏನು? ಎಂದು ಪ್ರಶ್ನಿಸಿರುವ ಸಿಎಂ ಇಬ್ರಾಹಿಂ ಅವರ ಹೇಳಿಕೆಯ ವಿಡಿಯೋವನ್ನು ಟ್ವೀಟ್ ಮಾಡಿದೆ.
ಗಾಜಿನ ಮನೆಯಲ್ಲಿ ಕುಳಿತಿರುವ ಕಾಂಗ್ರೆಸ್ಸಿಗರು ಇಬ್ರಾಹಿಂ ಅವರ ಪ್ರಶ್ನೆಗೆ ಮೊದಲು ಉತ್ತರ ನೀಡುವರೇ? – ಸೋತ ಸಿದ್ದರಾಮಯ್ಯ ವಿಪಕ್ಷ ನಾಯಕ, ಸೋತ ಪರಮೇಶ್ವರ ಸಚಿವ, ಸೋತ ಖರ್ಗೆಗೆ ರಾಜ್ಯಸಭಾ ಸ್ಥಾನ ಆದರೆ ಮುಸ್ಲಿಮರಿಗೆ ಏನು? ನೆರೆಮನೆಯ ದುಃಖಕ್ಕೆ ಅಳುವವರನ್ನು ಜಗತ್ತು ಮೆಚ್ಚುವುದೇ? ಎಂದು ಬಿಜೆಪಿ, ಕಾಂಗ್ರೆಸ್ ಗೆ ಚುಚ್ಚಿದೆ.
ಅಲ್ಪಸಂಖ್ಯಾತರನ್ನು ಮತಬ್ಯಾಂಕ್ ಗಷ್ಟೇ ಸೀಮಿತಗೊಳಿಸಿದ ಕಾಂಗ್ರೆಸ್ ಪಕ್ಷಕ್ಕೆ, ಕಾಂಗ್ರೆಸ್ ಹಿರಿಯ ನಾಯಕ ಸಿ. ಎಂ. ಇಬ್ರಾಹಿಂ ಅವರ ಪ್ರಶ್ನೆಗಳಿಗೆ ಉತ್ತರಿಸಲು ಸಾಧ್ಯವೆ? ಎಂದು ರಾಜ್ಯ ಬಿಜೆಪಿ ಪ್ರಶ್ನಿಸಿದೆ.
ದಶಕಗಳಿಂದ ಅಲ್ಪಸಂಖ್ಯಾತರ ಮುಂಗೈಗೆ ಬೆಲ್ಲ ಸವರುತ್ತಲೇ ಬಂದ ಕಾಂಗ್ರೆಸ್ಸಿಗರೇ, ಸಿ.ಎಂ.ಇಬ್ರಾಹಿಂ ಅವರ ಈ ಪ್ರಶ್ನೆಗೆ ನಿಮ್ಮ ಉತ್ತರವೇನು? ಕಾಂಗ್ರೆಸ್ ಪಕ್ಷ ಅಲ್ಪಸಂಖ್ಯಾತರ ಮೇಲೆ ಹೊಂದಿರುವ ಪ್ರೀತಿಯ ನಿಜಬಣ್ಣವನ್ನು ಇಬ್ರಾಹಿಂ ಬೆತ್ತಲಾಗಿಸಿದ್ದಾರೆ ಎಂದು ಕಾಂಗ್ರೆಸ್ ಗೆ ಬಿಜೆಪಿ ತಿರುಗೇಟು ನೀಡಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಇನ್ನಷ್ಟು ಸುದ್ದಿಗಳು…
ಮದುವೆ ಆದರೂ ‘ಸಿಂಗಲ್’ ಆಗಿರುವ ಮೋದಿ ಬಗ್ಗೆ ಮಾತನಾಡುವ ಧೈರ್ಯ ನಿಮಗಿದೆಯೇ? | ಸುಧಾಕರ್ ಗೆ ಕುಟುಕಿದ ಕಾಂಗ್ರೆಸ್
ಭಾರೀ ಮಳೆಗೆ ಕುಸಿದು ಬಿದ್ದ ಮನೆ: ಇಬ್ಬರು ಮಕ್ಕಳ ದಾರುಣ ಸಾವು
ಉಪ್ಪಿನಂಗಡಿ ಬಸ್ ನಿಲ್ದಾಣದಲ್ಲಿ ಭೀಕರ ಅಪಘಾತ: ತಾಯಿ ಮಗುವಿಗೆ ಡಿಕ್ಕಿ ಹೊಡೆದ ಕೆಎಸ್ಸಾರ್ಟಿಸಿ ಬಸ್
ಬಿಜೆಪಿಗೆ ಬಿಗ್ ಶಾಕ್: ಬಿಜೆಪಿ ತೊರೆದು ಪುತ್ರನೊಂದಿಗೆ ಕಾಂಗ್ರೆಸ್ ಗೆ ಸೇರ್ಪಡೆಗೊಂಡ ಸಚಿವ!
ಬೊಮ್ಮಾಯಿ ಸಂಪುಟದ 4 ಹಾಲಿ ಸಚಿವರಿಗೆ ಕೋಕ್ ನೀಡುವ ಸಾಧ್ಯತೆ | 8 ಶಾಸಕರಿಗೆ ಶೀಘ್ರವೇ ಸಚಿವ ಸ್ಥಾನ!
ತರಕಾರಿ ವ್ಯಾಪಾರಿಯ ಹನಿಟ್ರ್ಯಾಪ್: ಯುವತಿ ಸಹಿತ ಮೂವರು ಆರೋಪಿಗಳ ಅರೆಸ್ಟ್
500ಕ್ಕೂ ಅಧಿಕ ಚಿತ್ರದಲ್ಲಿ ನಟಿಸಿದ್ದ ಹಿರಿಯ ನಟ ನೆಡುಮುಡಿ ವೇಣು ನಿಧನ