ದಸರ ಮುಗಿದ ತಕ್ಷಣ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ: ಶಿಕ್ಷಕರಿಗೆ ಸರ್ಕಾರ ನೀಡಿದ ಆದೇಶ ಏನು? - Mahanayaka
7:14 AM Thursday 19 - September 2024

ದಸರ ಮುಗಿದ ತಕ್ಷಣ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ: ಶಿಕ್ಷಕರಿಗೆ ಸರ್ಕಾರ ನೀಡಿದ ಆದೇಶ ಏನು?

school open
14/10/2021

ಬೆಂಗಳೂರು: ದಸರ ಮುಗಿಯುತ್ತಿರುವಂತೆಯೇ ಶಾಲೆಗಳನ್ನು ಪೂರ್ಣ ಪ್ರಮಾಣದಲ್ಲಿ ನಡೆಸಲು(School Open) ಸರ್ಕಾರ ಸಿದ್ಧತೆ ನಡೆಸಿದೆ. ಹೀಗಾಗಿ ಅನ್ಯ ಇಲಾಖೆಯಲ್ಲಿ ಶಿಕ್ಷಕರ ನಿಯೋಜನೆ ರದ್ಧತಿಗೆ ಆದೇಶ ನೀಡಿದ್ದು, ವಾರದೊಳಗೆ ಮಾತೃ ಇಲಾಖೆಗೆ ಮರಳುವಂತೆ ಸೂಚನೆ ನೀಡಲಾಗಿದೆ.

ದಸರಾ ಮುಗಿದ ನಂತರ ರಾಜ್ಯದಲ್ಲಿ ಪ್ರಾಥಮಿಕ ಶಾಲೆಗಳನ್ನು ಪೂರ್ಣಪ್ರಮಾಣದಲ್ಲಿ ಆರಂಭಿಸಲಾಗುವುದು.  ಹೀಗಾಗಿ ಸರ್ಕಾರ ಈ ಆದೇಶ ನೀಡಿದೆ .ರಾಜ್ಯದಲ್ಲಿ ಸುಮಾರು 25 ಸಾವಿರ ಶಿಕ್ಷಕರ ಹುದ್ದೆಗಳು ಖಾಲಿ ಇದ್ದು, ಶಾಲೆಗಳಲ್ಲಿ ಮಕ್ಕಳ ಶೈಕ್ಷಣಿಕ ಪ್ರಗತಿಗೆ ತೊಂದರೆಯಾಗುತ್ತದೆ ಎನ್ನುವ ಕಾರಣಕ್ಕೆ ಇದೀಗ ಅನ್ಯ ಇಲಾಖೆಗಳಲ್ಲಿ ಸೇವೆ ಸಲ್ಲಿಸುತ್ತಿರುವ ಶಿಕ್ಷಕರ ಶಿಕ್ಷಕರ ನಿಯೋಜನೆ ರದ್ಧತಿಗೆ ಆದೇಶ ನೀಡಲಾಗಿದೆ ಎಂದು ವರದಿಯಾಗಿದೆ.

ಸಾಕ್ಷರತೆ ಕಾರ್ಯಕ್ರಮ ಸೇರಿದಂತೆ ವಿವಿಧ ಯೋಜನೆಗಳಡಿ ಶಿಕ್ಷಕರನ್ನು ಅನ್ಯ ಇಲಾಖೆಗೆ ನಿಯೋಜಿಸಲಾಗಿದೆ. ಇಂಥವರ ಸೇವಾವಧಿ 2021ರ ಮಾರ್ಚ್ ಗೆ ಕೊನೆಯಾಗಿದೆ. ದಸರಾ ಮುಗಿದ ನಂತರ ಶಾಲೆಗಳು ಆರಂಭವಾಗುತ್ತಿರುವುದರಿಂದ ಇಂತಹ ಶಿಕ್ಷಕರು ಮಾತೃ ಇಲಾಖೆಗೆ ಮರಳುವಂತೆ ಆದೇಶಿಸಲಾಗಿದೆ ಎಂದು ತಿಳಿದು ಬಂದಿದೆ.


Provided by

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

ಬಿಜೆಪಿಯ ಭ್ರಷ್ಟಾಚಾರವನ್ನು ಶಾಸಕರೊಬ್ಬರು ಮಂಚದ ಮೇಲೆಯೂ ಕನವರಿಸಿದ್ದರು | ಬಿಜೆಪಿಗೆ ಕಾಂಗ್ರೆಸ್ ತಿರುಗೇಟು

ಅನೈತಿಕ ಪೊಲೀಸ್ ಗಿರಿಯ ಸಮರ್ಥನೆ: ಸಿಎಂ ಹೇಳಿಕೆ ಕಾನೂನು ಸುವ್ಯವಸ್ಥೆಯನ್ನು ಗಂಡಾಂತರಕ್ಕೆ ತಳ್ಳಲಿದೆ | SDPI

ಮಾಜಿ ಪ್ರಧಾನಿ ಮನಮೋಹನ್ ಅವರ ಆರೋಗ್ಯದಲ್ಲಿ ಏರುಪೇರು | ಏಮ್ಸ್ ಆಸ್ಪತ್ರೆಗೆ ದಾಖಲು

ಸಿಬಿಐ ದಾಳಿ ರಾಜಕೀಯ ಪ್ರೇರಿತ ಎಂದವರಿಗೆ ಅವರದ್ದೇ ಪಕ್ಷದವರು ಸಾಕ್ಷ್ಯ ನೀಡಿದ್ದಾರೆ | ನಳಿನ್ ಕುಮಾರ್ ಕಟೀಲ್

ವಸತಿ ನಿಲಯದ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

“ಸಾವರ್ಕರ್ ರಾಷ್ಟ್ರಪಿತ” ಎಂದು ಬಿಜೆಪಿ ಶೀಘ್ರದಲ್ಲೇ ಘೋಷಿಸುತ್ತದೆ: ಓವೈಸಿ ಹೇಳಿಕೆ

ಕಲೆಕ್ಷನ್ ಪಾರ್ಟಿ: ಸಲೀಂ-ಉಗ್ರಪ್ಪ ಆರೋಪಕ್ಕೆ ಡಿ.ಕೆ.ಶಿವಕುಮಾರ್ ಪ್ರತಿಕ್ರಿಯೆ ಏನು ಗೊತ್ತಾ?

ಇತ್ತೀಚಿನ ಸುದ್ದಿ