ವಿದ್ಯಾರ್ಥಿಗೆ ಹಿಗ್ಗಾಮುಗ್ಗ ಥಳಿತ: ಶಿಕ್ಷಕನ ಕೃತ್ಯದ ವಿಡಿಯೋ ವೈರಲ್ ಮಾಡಿದ ವಿದ್ಯಾರ್ಥಿಗಳು - Mahanayaka

ವಿದ್ಯಾರ್ಥಿಗೆ ಹಿಗ್ಗಾಮುಗ್ಗ ಥಳಿತ: ಶಿಕ್ಷಕನ ಕೃತ್ಯದ ವಿಡಿಯೋ ವೈರಲ್ ಮಾಡಿದ ವಿದ್ಯಾರ್ಥಿಗಳು

students
14/10/2021

ಚೆನ್ನೈ: ವಿದ್ಯಾರ್ಥಿಗೆ ತರಗತಿಯೊಳಗೆ ಶಿಕ್ಷಕನೋರ್ವ ಅಮಾನವೀಯವಾಗಿ ಥಳಿಸಿದ್ದು, ಈ ದೃಶ್ಯವನ್ನು ಸಹಪಾಠಿಯೋರ್ವ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಮಾಡಿದ್ದು, ಇದೀಗ ಶಿಕ್ಷಕ ಸಂಕಷ್ಟಕ್ಕೆ ಸಿಲುಕಿದ್ದಾರೆ.

ತಮಿಳುನಾಡಿನ ಕಡಲೂರು ಜಿಲ್ಲೆಯಲ್ಲಿ ಬುಧವಾರ ಈ ಘಟನೆ ನಡೆದಿದ್ದು, ಇಲ್ಲಿನ ಚಿದಂಬರಂ ಸಮೀಪ ಸರ್ಕಾರಿ ನಂದನಾರ್ ಬಾಯ್ಸ್ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಈ ಘಟನೆ ನಡೆದಿದೆ ಎಂದು ಹೇಳಲಾಗಿದೆ.  ಕ್ಲಾಸ್ ತಪ್ಪಿಸಿಕೊಂಡಿದ್ದಕ್ಕೆ ಶಿಕ್ಷಕ ಕೋಪಗೊಂಡು 12ನೇ ತರಗತಿಯ ವಿದ್ಯಾರ್ಥಿಗೆ ಅಮಾನವೀಯವಾಗಿ ಥಳಿಸಿದ್ದಾರೆ.

ವಿದ್ಯಾರ್ಥಿಯನ್ನು ಮಂಡಿಯೂರಿ ಕೂರಿಸಿ, ಕೂದಲನ್ನು ಹಿಡಿದೆಳೆದು ಬೆತ್ತದಿಂದ ಹಿಗ್ಗಾಮುಗ್ಗಾ ಥಳಿಸಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ನಾನು ಮತ್ತೆ ಈ ರೀತಿಯಾಗಿ ತಪ್ಪು ಮಾಡುವುದಿಲ್ಲ ಎಂದು ವಿದ್ಯಾರ್ಥಿ ಬೇಡಿಕೊಂಡರೂ ಶಿಕ್ಷಕ ನಿರಂತರವಾಗಿ ಥಳಿಸಿರುವುದು ಕಂಡು ಬಂದಿದೆ.

ವಿಡಿಯೋ ವೈರಲ್ ಆದ ಬೆನ್ನಲ್ಲೇ ಕಡಲೂರು ಜಿಲ್ಲಾಧಿಕಾರಿ ಕೆ.ಬಾಲಸುಬ್ರಹ್ಮಣ್ಯಂ ಅವರು ಘಟನೆಯ ತನಿಖೆಗೆ ಆದೇಶಿಸಿದ್ದಾರೆ.ವಿದ್ಯಾರ್ಥಿಯು ಮೊದಲ ತರಗತಿಗೆ ಹಾಜರಿದ್ದು ಭೌತಶಾಸ್ತ್ರದ ಎರಡನೇ ಪಿರಿಯಡ್ ತಪ್ಪಿಸಿಕೊಂಡಿದ್ದ ಎಂದು ತಿಳಿದು ಬಂದಿದೆ. ಈ ವರದಿ ದೊರಕಿದ ಬೆನ್ನಲ್ಲೇ ನಾನು ತನಿಖೆ ನಡೆಸಲು ಆದೇಶಿಸಿದ್ದೇನೆ ಎಂದು ಬಾಲಸುಬ್ರಹ್ಮಣ್ಯಂ ತಿಳಿಸಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಇನ್ನಷ್ಟು ಸುದ್ದಿಗಳು…

SSLC ಪರೀಕ್ಷೆ ಪಾಸ್ ಆದ ವಿದ್ಯಾರ್ಥಿಗಳಿಗೆ 15 ಸಾವಿರ ರೂ. ಪ್ರೋತ್ಸಾಹ ಧನ

ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ದೇವಸ್ಥಾನದ ಮೇಲೆ ಅಪರಿಚಿತರಿಂದ ದಾಳಿ

ಅಮಾನವೀಯ ಘಟನೆ: ಹೊಲದಲ್ಲಿ ಗನ್ ಪಾಯಿಂಟ್ ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ

ಸಲೀಂ- ಉಗ್ರಪ್ಪ ಸಂಭಾಷಣೆ: ಸ್ವತಂತ್ರ ಏಜೆನ್ಸಿಯಿಂದ ತನಿಖೆ ಮಾಡಿಸಬೇಕು | ಡಿ.ವಿ.ಸದಾನಂದ ಗೌಡ

ಪರಿವರ್ತನೆ ಬಯಸುವ ಚಲನಶೀಲ ಮನುಷ್ಯರಿಗೆಲ್ಲರಿಗೂ 65ನೇ ಧಮ್ಮ ದೀಕ್ಷಾ ದಿನದ ಶುಭಾಶಯಗಳು

12 ವರ್ಷ ವಯಸ್ಸಿನ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನ: ಆರೋಪಿ ಅರೆಸ್ಟ್

ಮಾಜಿ ಪ್ರಧಾನಿ ಮನಮೋಹನ್ ಅವರ ಆರೋಗ್ಯದಲ್ಲಿ ಏರುಪೇರು | ಏಮ್ಸ್ ಆಸ್ಪತ್ರೆಗೆ ದಾಖಲು

ಹಬ್ಬದ ದಿನವೇ ಘೋರ ಕೃತ್ಯ: ಸಾಂಬರ್ ಚೆನ್ನಾಗಿಲ್ಲ ಎಂದು ತಾಯಿ, ತಂಗಿಯನ್ನು ಗುಂಡು ಹಾರಿಸಿಕೊಂಡ ಪಾಪಿ!

ಇತ್ತೀಚಿನ ಸುದ್ದಿ