ದೇವಸ್ಥಾನದ ಆವರಣದಲ್ಲಿಯೇ ಮುಖ್ಯ ಅರ್ಚಕನನ್ನು ಗುಂಡು ಹಾರಿಸಿ ಕೊಂದ ಯುವಕರು !
ಧರ್ಬಾಂಗ: ದೇವಸ್ಥಾನದ ಮುಖ್ಯ ಅರ್ಚಕನೋರ್ವನನ್ನು ದುಷ್ಕರ್ಮಿಗಳ ತಂಡವೊಂದು ಗುಂಡು ಹಾರಿಸಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬಿಹಾರದ ಧರ್ಬಾಂಗ ಜಿಲ್ಲೆಯಲ್ಲಿ ನಡೆದಿದ್ದು, ಕಾರಿನಲ್ಲಿ ಬಂದಿದ್ದ ದುಷ್ಕರ್ಮಿಗಳು ಅರ್ಚಕನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ.
ಇಲ್ಲಿನ ಯೂನಿವರ್ಸಿಟಿ ಪೊಲೀಸ್ ಠಾಣೆ ವ್ಯಾಪ್ತಿಯ ರಾಮನಗರ ಮೊಹಲ್ಲಾದಲ್ಲಿ ಇರುವ ಕಂಕಾಲಿ ದೇವಸ್ಥಾನದಲ್ಲಿ ಮುಖ್ಯ ಅರ್ಚಕನನ್ನು ದೇವಸ್ಥಾನದ ಆವರಣದಲ್ಲಿಯೇ ದುಷ್ಕರ್ಮಿಗಳ ಹತ್ಯೆ ನಡೆಸಿದ್ದಾರೆ. ಕೃತ್ಯ ನಡೆಸಿ ಪರಾರಿಯಾಗುತ್ತಿದ್ದ ದುಷ್ಕರ್ಮಿಗಳ ಪೈಕಿ ಓರ್ವನನ್ನು ಸಾರ್ವಜನಿಕರು ಹಿಡಿದುಕೊಂಡಿದ್ದು, ಆತನಿಗೆ ಹಿಗ್ಗಾಮುಗ್ಗಾ ಥಳಿಸಿದ ಪರಿಣಾಮ ಆತ ಸಾವನ್ನಪ್ಪಿದ್ದಾನೆ.
ಕಂಕಾಲಿ ದೇಗುಲದ ಮುಖ್ಯ ಅರ್ಚಕರು ಸ್ವಲ್ಪ ದಿನಗಳ ಹಿಂದೆ ಕೆಲವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಕೆಲವು ಗೂಂಡಾಗಳು ಕಂಠಪೂರ್ತಿ ಕುಡಿದು ತೊಂದರೆಕೊಡುತ್ತಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದರು. ಆದರೆ ಪೊಲೀಸರು ಆಗ ಯಾವುದೇ ಕ್ರಮವನ್ನೂ ತೆಗೆದುಕೊಂಡಿರಲಿಲ್ಲ. ಅದಾದ ನಂತರ ಒಂದುದಿನ ಈ ಅರ್ಚಕರು ತಮ್ಮ ರಾಮ್ಬಾಘ್ನಲ್ಲಿರುವ ಮನೆಯಲ್ಲಿ ರಾತ್ರಿ ಮಲಗಿದ್ದಾಗ ಇದೇ ದುಷ್ಕರ್ಮಿಗಳು ದಾಳಿ ನಡೆಸಿದ್ದರು ಎಂದೂ ಹೇಳಲಾಗಿದೆ. ಆದರೆ ಈಗ ದೇಗುಲದ ಆವರಣದಲ್ಲಿ ಅವರ ಮೇಲೆ ಗುಂಡು ಹಾರಿಸಿದ್ದಾರೆ ಎಂದು ತಿಳಿದು ಬಂದಿದೆ.
ಜಗಳ ಆರಂಭವಾಗಿದ್ದು ಎಲ್ಲಿಂದ?
ಇಷ್ಟೆಲ್ಲ ರಾದ್ದಾಂತಕ್ಕೆ ಅರ್ಚಕನ ಮಗ ಕಾರಣವಾಗಿದ್ದ ಎನ್ನಲಾಗಿದೆ. ಅರ್ಚಕನನ್ನು ಗುಂಡು ಹಾರಿಸಿ ಕೊಂದ ನಾಲ್ವರು ಯುವಕರ ಪೈಕಿ ಓರ್ವನ ಜೊತೆಗೆ ಅರ್ಚಕನ ಮಗ ಮೊಬೈಲ್ ವಿಚಾರಕ್ಕೆ ಸಂಬಂಧಿಸಿದಂತೆ ಜಗಳ ನಡೆಸಿದ್ದ. ಈ ಗಲಾಟೆಯನ್ನು ಸೌಹಾರ್ದಯುತವಾಗಿ ಬಗೆಹರಿಸುವ ಬದಲು ಅರ್ಚಕ ತನ್ನ ಮಗನಿಗೆ ಬೆಂಬಲವಾಗಿ ನಿಂತು ಯುವಕನ ಮೇಲೆಯೇ ರೇಗಾಡಿ ಜಗಳ ಮಾಡಿದ್ದು, ಇದರಿಂದಾಗಿ ಯುವಕದ ದ್ವೇಷ ಕಟ್ಟಿಕೊಂಡಿದ್ದ ಎನ್ನಲಾಗಿದೆ. ಇದೇ ದ್ವೇಷದಲ್ಲಿ ಯುವಕರು ಹತ್ಯೆ ಮಾಡಿದ್ದಾರೆ ಎಂದು ತಿಳಿದು ಬಂದಿದೆ. ಇನ್ನೊಂದು ಮುಖ್ಯ ವಿಚಾರವೇನೆಂದರೆ, ಅರ್ಚಕನನ್ನು ಹತ್ಯೆ ಮಾಡಿದ ಯುವಕರು ವೃತ್ತಿಪರರೇನಲ್ಲ, ಯಾರಿಗೂ ಕ್ರಿಮಿನಲ್ ಹಿನ್ನೆಲೆ ಇರಲಿಲ್ಲ. ಅರ್ಚಕನ ಮಗ ಮಾಡಿದ ಕೆಲಸಕ್ಕೆ ಇದೀಗ ತಂದೆ ಬಲಿಯಾಗಿರುವುದು ದುರಂತ ಎಂಬಂತಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಇನ್ನಷ್ಟು ಸುದ್ದಿಗಳು…
ಅಮಾನವೀಯ ಘಟನೆ: ಹೊಲದಲ್ಲಿ ಗನ್ ಪಾಯಿಂಟ್ ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ
ಗ್ರಾಮಾಂತರ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಟ ವಿಜಯ್ ಅಭಿಮಾನಿಗಳ ಸಂಘ
ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ಆರೋಪ: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅರೆಸ್ಟ್
ವಿದ್ಯಾರ್ಥಿಗೆ ಹಿಗ್ಗಾಮುಗ್ಗ ಥಳಿತ: ಶಿಕ್ಷಕನ ಕೃತ್ಯದ ವಿಡಿಯೋ ವೈರಲ್ ಮಾಡಿದ ವಿದ್ಯಾರ್ಥಿಗಳು
ಪುತ್ತೂರು: ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾದಿಂದ 65ನೇ ಧಮ್ಮದೀಕ್ಷಾ ಕಾರ್ಯಕ್ರಮ
ಸಲೀಂ- ಉಗ್ರಪ್ಪ ಸಂಭಾಷಣೆ: ಸ್ವತಂತ್ರ ಏಜೆನ್ಸಿಯಿಂದ ತನಿಖೆ ಮಾಡಿಸಬೇಕು | ಡಿ.ವಿ.ಸದಾನಂದ ಗೌಡ