ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ - Mahanayaka
10:20 AM Thursday 12 - December 2024

ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಜಿ ಆಹ್ವಾನ

fee refund
15/10/2021

ಬೆಂಗಳೂರು: ಅಧಿಕೃತ ರಾಷ್ಟ್ರೀಯ ಕ್ರೀಡಾ ಸಂಸ್ಥೆಗಳು ಆಯೋಜಿಸುವ ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ ಭಾಗವಹಿಸಿ ಪದಕ ಪಡೆದ ಮತ್ತು ಅಂತರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳಿಗೆ ಭಾರತ ಸರ್ಕಾರ ನಿಯೋಜಿಸಲ್ಪಟ್ಟ ತಂಡದಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಿದ ರಾಜ್ಯದ ಕ್ರೀಡಾಪಟುಗಳ ಶೈಕ್ಷಣಿಕ ಶುಲ್ಕವನ್ನು ಮರುಪಾವತಿಸುವ ಯೋಜನೆಯನ್ನು ಅನುಷ್ಠಾನಗೊಳಿಸಲು ಅರ್ಹ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

2021-22ನೇ ಸಾಲಿನ ಶೈಕ್ಷಣಿಕ ಶುಲ್ಕ ಮರುಪಾವತಿಗಾಗಿ ಅರ್ಹ ಕ್ರೀಡಾಪಟುಗಳಿಂದ ಅರ್ಜಿಗಳನ್ನು ಆಯಾ ಜಿಲ್ಲೆಗಳ ಉಪ ಸಹಾಯಕ ನಿರ್ದೇಶಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಮುಖಾಂತರ ಸಲ್ಲಿಸುವಂತೆ ಸೂಚಿಸಲಾಗಿದೆ. ಮುಂದುವರೆದು ಉಲ್ಲೇಖ ಎರಡರ ಪತ್ರದಲ್ಲಿ ಆಯುಕ್ತರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಬೆಂಗಳೂರು ಇವರು ಅಕ್ಟೋಬರ್ 30 ರವರೆಗೆ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಆಯುಕ್ತರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಬೆಂಗಳೂರು ಕಚೇರಿಯನ್ನು ಸಂಪರ್ಕಿಸಲು ತಿಳಿಸಲಾಗಿದೆ ಕಚೇರಿ ದೂ.ಸಂ 080-22215601 ಗೆ ಸಂಪರ್ಕಿಸಬಹುದಾಗಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ಗ್ರಾಮಾಂತರ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ನಟ ವಿಜಯ್ ಅಭಿಮಾನಿಗಳ ಸಂಘ

ಕನ್ನಡದ ಮತ್ತೋರ್ವ ಹಿರಿಯ ನಟ ಪ್ರೊ.ಜಿ.ಕೆ.ಗೋವಿಂದ ರಾವ್ ನಿಧನ

ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ದೇವಸ್ಥಾನದ ಮೇಲೆ ಅಪರಿಚಿತರಿಂದ ದಾಳಿ

ಪುತ್ತೂರು: ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾದಿಂದ 65ನೇ ಧಮ್ಮ‌ದೀಕ್ಷಾ ಕಾರ್ಯಕ್ರಮ

ಸಾವರ್ಕರ್ ಕ್ಷಮಾದಾನ ಅರ್ಜಿ- ಗಾಂಧಿ ಸಲಹೆ ನೀಡಿದ್ದರೇ ?

ಅಮಾನವೀಯ ಘಟನೆ: ಹೊಲದಲ್ಲಿ ಗನ್ ಪಾಯಿಂಟ್ ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ

ಮಾಜಿ ಪ್ರಧಾನಿ ಮನಮೋಹನ್ ಅವರ ಆರೋಗ್ಯದಲ್ಲಿ ಏರುಪೇರು | ಏಮ್ಸ್ ಆಸ್ಪತ್ರೆಗೆ ದಾಖಲು

ಇತ್ತೀಚಿನ ಸುದ್ದಿ