ಗಂಟಲಲ್ಲಿ ಮೊಟ್ಟೆ ಸಿಕ್ಕಿಹಾಕಿಕೊಂಡು ಮಹಿಳೆ ಸಾವು
ಹೈದರಾಬಾದ್: ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಬೇಯಿಸಿದ ಮೊಟ್ಟೆ(Boiled Egg) ಗಂಟಲಲ್ಲಿ ಸಿಕ್ಕಿ ಹಾಕಿಕೊಂಡು ಮಹಿಳೆಯೊಬ್ಬರು ಉಸಿರುಗಟ್ಟಿ ಸಾವನ್ನಪ್ಪಿದ ದಾರುಣ ಘಟನೆ ತೆಲಂಗಾಣದ ನೇರಳಪಲ್ಲಿ(Neralapalliಯಲ್ಲಿ ನಡೆದಿದೆ.
ಲೀಲಮ್ಮ ಎಂಬವರು ಮೃತಪಟ್ಟವರು ಎಂದು ಗುರುತಿಸಸಲಾಗಿದೆ. ಊಟ ಮಾಡುತ್ತಿದ್ದ ಸಂದರ್ಭದಲ್ಲಿ ಮೊಟ್ಟೆಯನ್ನು ಕಚ್ಚದೇ ಹಾಗೆಯೇ ಬಾಯಿಗೆ ಹಾಕಿಕೊಂಡಿದ್ದಾರೆ. ಈ ವೇಳೆ ಮೊಟ್ಟೆ ಆಕಸ್ಮಿಕವಾಗಿ ಗಂಟಲಿಗೆ ಜಾರಿದೆ ಎನ್ನಲಾಗಿದೆ.
ಗಂಟಲಿನಲ್ಲಿ ಮೊಟ್ಟೆ ಸಿಲುಕಿಕೊಂಡಿದ್ದು, ಪರಿಣಾಮವಾಗಿ ಅವರಿಗೆ ಉಸಿರಾಡಲು ಸಾಧ್ಯವಾಗದೇ ಅವರು ಉಸಿರುಗಟ್ಟಿ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಮೊಟ್ಟೆಯನ್ನು ಕತ್ತರಿಸಿ ತಿನ್ನುತ್ತಿದ್ದರೆ, ಈ ಅನಾಹುತ ಸಂಭವಿಸುತ್ತಿರಲಿಲ್ಲ ಎಂದು ಮೃತ ಮಹಿಳೆಯ ಸಂಬಂಧಿಕರು ಬೇಸರ ವ್ಯಕ್ತಪಡಿಸಿದ್ದಾರೆ.
ಮಹಾನಾಯಕ(Mahanayaka) ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಇನ್ನಷ್ಟು ಸುದ್ದಿಗಳು…
ವಿದ್ಯಾರ್ಥಿಗೆ ಹಿಗ್ಗಾಮುಗ್ಗ ಥಳಿತ: ಶಿಕ್ಷಕನ ಕೃತ್ಯದ ವಿಡಿಯೋ ವೈರಲ್ ಮಾಡಿದ ವಿದ್ಯಾರ್ಥಿಗಳು
ದೇವಸ್ಥಾನದ ಆವರಣದಲ್ಲಿಯೇ ಮುಖ್ಯ ಅರ್ಚಕನನ್ನು ಗುಂಡು ಹಾರಿಸಿ ಕೊಂದ ಯುವಕರು !
ಸಹೋದ್ಯೋಗಿಗೆ ಲೈಂಗಿಕ ಕಿರುಕುಳ ಆರೋಪ: ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ಅರೆಸ್ಟ್
ಬಾಂಗ್ಲಾದೇಶದಲ್ಲಿ ದುರ್ಗಾ ಪೂಜೆ ವೇಳೆ ದೇವಸ್ಥಾನದ ಮೇಲೆ ಅಪರಿಚಿತರಿಂದ ದಾಳಿ
ಅಮಾನವೀಯ ಘಟನೆ: ಹೊಲದಲ್ಲಿ ಗನ್ ಪಾಯಿಂಟ್ ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ
ಪುತ್ತೂರು: ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾದಿಂದ 65ನೇ ಧಮ್ಮದೀಕ್ಷಾ ಕಾರ್ಯಕ್ರಮ
ದಕ್ಷಿಣ ಕನ್ನಡ: ಭೀಮ್ ಸೇನೆಯಿಂದ ದಮ್ಮ ಚಕ್ರ ಪರಿವರ್ತನಾ ದಿನಾಚರಣೆ