ಸಿದ್ದರಾಮಯ್ಯನವರನ್ನು ಶೀಘ್ರವೇ ಆಫ್ಘಾನಿಸ್ತಾನಕ್ಕೆ ಕಳುಹಿಸಬೇಕು | ವಿ.ಶ್ರೀನಿವಾಸ್ ಪ್ರಸಾದ್ - Mahanayaka
3:15 PM Thursday 12 - December 2024

ಸಿದ್ದರಾಮಯ್ಯನವರನ್ನು ಶೀಘ್ರವೇ ಆಫ್ಘಾನಿಸ್ತಾನಕ್ಕೆ ಕಳುಹಿಸಬೇಕು | ವಿ.ಶ್ರೀನಿವಾಸ್ ಪ್ರಸಾದ್

shrinivas prasad
23/10/2021

ಮೈಸೂರು: ವಿರೋಧ ಪಕ್ಷಗಳಿಗೆ ಜವಾಬ್ದಾರಿ ಇದೆ. ವಿರೋಧ ಪಕ್ಷದ ನಾಯಕರಾದವರು ವಿವೇಚನೆಯಿಂದ ಜವಾಬ್ದಾರಿಯುತವಾಗಿ ಮಾತನಾಡಬೇಕು. ಆದರೆ, ದೇಶದ ಪ್ರಧಾನಿ ಬಗ್ಗೆ ಬೇಜವಾಬ್ದಾರಿತನದಿಂದ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ದೇಶದ ಪ್ರಧಾನಿ ಬಗ್ಗೆ ಬೇಜವಾಬ್ದಾರಿತನದಿಂದ ಅವಹೇಳನಕಾರಿಯಾಗಿ ಮಾತನಾಡುವುದು ಸರಿಯಲ್ಲ, ರಾಜ್ಯದಲ್ಲಿ ಅಸಂಬ್ಲಿ ಉಪ ಚುನಾವಣೆಯಲ್ಲಿ ರಾಜ್ಯ ನಾಯಕರ ಮಾತು ಮಿತಿ ಮೀರಿದೆ. ನಾನು ನಿಮ್ಮ ರೀತಿ ಪೇಪರ್ ಹಾಗೂ ಟಿವಿ ಮಾಧ್ಯಮಗಳಲ್ಲಿ ನೋಡಿದ್ದೇನೆ. ನಾನು ಚುನಾವಣಾ ಕ್ಷೇತ್ರಗಳಿಗೆ ಹೋಗಿಲ್ಲ. ಚುನಾವಣೆಯಲ್ಲಿ ನಾವು ಎರಡೂ ಕ್ಷೇತ್ರವನ್ನ ಗೆಲ್ಲುತ್ತೇವೆ ಎಂದು ಶ್ರೀನಿವಾಸ್ ಪ್ರಸಾದ್ ಹೇಳಿದ್ದಾರೆ.

ಸಿದ್ದರಾಮಯ್ಯವರ ತಾಲಿಬಾನ್ ಹೋಲಿಕೆಯ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ಅವರು, ತಾಲಿಬಾನ್ ಆಡಳಿತ ಹೇಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಖುದ್ದಾಗಿ ತಿಳಿದು ಕೊಳ್ಳಬೇಕಾಗಿದೆ. ಹಾಗಾಗಿ ಅವರನ್ನು ಒಂದು ತಿಂಗಳ ಕಾಲ ತಾಲಿಬಾನ್ ಆಡಳಿತವಿರುವ ಆಫ್ಘಾನಿಸ್ತಾನಕ್ಕೆ ತಕ್ಷಣವೇ ಕಳುಹಿಸಿ ಕೊಡಬೇಕಾಗಿದೆ ಎಂದು ವ್ಯಂಗ್ಯವಾಡಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb

ಇನ್ನಷ್ಟು ಸುದ್ದಿಗಳು…

ಚುನಾವಣೆಗೋಸ್ಕರ ಆರೆಸ್ಸೆಸ್, ವಿಎಚ್ ಪಿ ಬಗ್ಗೆ ಮಾತನಾಡುವುದು ಸರಿಯಲ್ಲ: ವಿಶ್ವಪ್ರಸನ್ನ ಸ್ವಾಮೀಜಿ

ದೆವ್ವದಂತೆ ವೇಷ ಧರಿಸಿ ಹೆದರಿಸಲು ಹೋದ ಯುವತಿಯ ದುರಂತ ಅಂತ್ಯ!

ತುಮಕೂರು: ಬಜರಂಗದಳದ ಬಂದ್ ಗೆ ತಡೆಯೊಡ್ಡಿದ ಬಿಜೆಪಿ | ಅಷ್ಟಕ್ಕೂ ನಡೆದ ಯಡವಟ್ಟೇನು?

“ರತ್ನನ್ ಪ್ರಪಂಚ” ವರ್ಣಿಸಲು ಪದಗಳೇ ಇಲ್ಲ | ಒಂದು ಒಳ್ಳೆಯ ಸಿನಿಮಾ ನೋಡಿದೆ: ಹಾಸನದ ಯುವಕ ಸಚಿನ್ ಸರಗೂರು

ರಾಜ್ಯದಲ್ಲಿ 378 ಕೊವಿಡ್ ಪ್ರಕರಣ ಪತ್ತೆ: 11 ಮಂದಿ ಸಾವು

ದುರ್ಗಾ ಪೂಜೆ ವೇಳೆ ಕೋಮುಗಲಭೆಗೆ ಕಾರಣವಾಗಿದ್ದ ಪ್ರಮುಖ ಆರೋಪಿ ಅರೆಸ್ಟ್!

ಲೈಂಗಿಕ ದೌರ್ಜನ್ಯ: ಆರೋಪಿ ವಕೀಲ ರಾಜೇಶ್ ಭಟ್ ನನ್ನು ರಕ್ಷಿಸಲು ನಡೆದಿತ್ತು ಭಾರೀ ಷಡ್ಯಂತ್ರ!

ಇತ್ತೀಚಿನ ಸುದ್ದಿ