ಇಂದು ಮಧ್ಯರಾತ್ರಿಯಿಂದಲೇ ಪಟಾಕಿ ನಿಷೇಧ | ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶ - Mahanayaka
10:04 AM Friday 13 - December 2024

ಇಂದು ಮಧ್ಯರಾತ್ರಿಯಿಂದಲೇ ಪಟಾಕಿ ನಿಷೇಧ | ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶ

09/11/2020

ನವದೆಹಲಿ: ಇಂದು ಮಧ್ಯರಾತ್ರಿಯಿಂದ ನವೆಂಬರ್ 30ರವರೆಗೆ ದೆಹಲಿ-ಎನ್ ಸಿಆರ್ ನಲ್ಲಿ ಎಲ್ಲಾ ಪಟಾಕಿ ಮಾರಾಟ ಹಾಗೂ ಸುಡುವುದನ್ನು ನಿಷೇಧಿಸಿ, ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಆದೇಶ ನೀಡಿದೆ.

ರಾಷ್ಟ್ರ ರಾಜಧಾನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ  ಕಳೆದ ವರ್ಷವೂ ಪಟಾಕಿ ಹೊಗೆಯು ಗಾಳಿಯನ್ನು ಕಲುಶಿತಗೊಳಿಸಿ, ಹಲವು ಜೀವಗಳನ್ನು ಬಲಿಪಡೆದಿತ್ತು. ಪರಿಸರ ಮಾಲಿನ್ಯಕ್ಕೆ ಕಾರಣವಾಗುತ್ತಿರುವ ಪಟಾಕಿಯನ್ನು ಸಂಪೂರ್ಣವಾಗಿ ನಿಷೇಧಿಸಲು ಇನ್ನೂ ಸರ್ಕಾರ ಮುಂದಾಗಿಲ್ಲ, ಕೊರೊನಾ ಸಂದರ್ಭದಲ್ಲಿ ಪಟಾಕಿಯು ಇಡೀ ಭಾರತಕ್ಕೆ ದೊಡ್ಡ ಪ್ರಮಾಣದ ಹಾನಿಯನ್ನುಂಟು ಮಾಡುವ ಸಾಧ್ಯತೆಗಳಿವೆ. ಈ ಕಾರಣಕ್ಕಾಗಿಯೇ ದೆಹಲಿಯಲ್ಲಿ ಪಟಾಕಿ ಸಿಡಿಸುವುದನ್ನು ನಿಷೇಧಿಸಲಾಗಿದೆ.

ದೆಹಲಿಯಲ್ಲಿ ವಾಯುವಿನ ಗುಣಮಟ್ಟ ಸಂಪೂರ್ಣವಾಗಿ ಕುಸಿದಿದೆ. ವಾಯು ಗುಣಮಟ್ಟ ಸೂಚ್ಯಂಕ (ಎಕ್ಯೂಐ) ಆನಂದ್ ವಿಹಾರದಲ್ಲಿ 484, ಮುಂಡ್ಕಾದಲ್ಲಿ 470, 465 ಓಖ್ಲಾ ಹಂತ 2 ಮತ್ತು ವಾಜೀರ್‌ಪುರದಲ್ಲಿ 468, ಇವೆಲ್ಲವೂ ಅತಿ ಕೆಟ್ಟ ಸ್ಥಿತಿಯಲ್ಲಿದೆ. ಪಟಾಕಿ ಸಿಡಿಸಿ ಹೊಗೆಯನ್ನು ಹರಡಿದರೆ ಖಂಡಿತವಾಗಿಯೂ ಅಪಾಯ ಕಟ್ಟಿಟ್ಟ ಬುತ್ತಿಯಾಗಿದೆ.

ದೆಹಲಿ ಮಾತ್ರವಲ್ಲದೇ ವಿವಿಧ ರಾಜ್ಯಗಳಲ್ಲಿ ಸಾಂಕ್ರಾಮಿಕ ರೋಗ ಕೊವಿಡ್ 19 ಹಿನ್ನೆಲೆಯಲ್ಲಿ ಪಟಾಕಿ ಸುಡುವುದು ಮತ್ತು ಮಾರಾಟ ಮಾಡುವ ಬಗ್ಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಕರ್ನಾಟಕದಲ್ಲಿಯೂ ಈ ಮಾರ್ಗ ಸೂಚಿಯನ್ನು ಬಿಡುಗಡೆ ಮಾಡಲಾಗಿದೆ. ಪ್ರತಿ ವರ್ಷವೂ ಜನರ ಕಣ್ಣು, ಪ್ರಾಣಗಳನ್ನು ಹಾನಿ ಮಾಡುತ್ತಿರುವ ಪಟಾಕಿ ಈ ಬಾರಿ ಸರ್ಕಾರ ನಿರ್ಲಕ್ಷ್ಯ ಮಾಡಿದರೆ, ಗಂಭೀರ ಸಮಸ್ಯೆಗಳಿಗೆ ಕಾರಣವಾಗುತ್ತದೆ. ಕೊವಿಡ್ 19 ಮುಖ್ಯವಾಗಿ ಶ್ವಾಸಕೋಶಕ್ಕೆ ಹಾನಿ ಮಾಡುತ್ತದೆ. ಇದೇ ಸಂದರ್ಭದಲ್ಲಿ ಪಟಾಕಿ ಸಿಡಿಸಿ ಹೊಗೆ ಹರಡಿದರೆ, ಖಂಡಿತಾ ಅಪಾಯಕ್ಕೆ ಕಾರಣವಾಗುತ್ತದೆ.

ಇತ್ತೀಚಿನ ಸುದ್ದಿ