ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರ ಬೇಕು? | ಸಿದ್ದರಾಮಯ್ಯಗೆ ಸಿ.ಟಿ.ರವಿ ಪ್ರಶ್ನೆ
ಬೆಂಗಳೂರು: ಕಂಬಳಿ ಹೊದ್ದುಕೊಳ್ಳಲು ಯೋಗ್ಯತೆ ಬೇಕು, ನೀನು ಎಂದಾದರೂ ಕುರಿ ಕಾಯ್ದಿದ್ದೀಯಾ? ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ವಿರುದ್ಧ ನೀಡಿದ ಹೇಳಿಕೆಗೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ತಿರುಗೇಟು ನೀಡಿದ್ದಾರೆ.
ಸಿದ್ದರಾಮಯ್ಯನವರು ಮುಸ್ಲಿಮರ ಧಾರ್ಮಿಕ ಟೋಪಿ ಹಾಕಿಕೊಂಡಿರುವ ಫೋಟೋವನ್ನು ಶೇರ್ ಮಾಡಿರುವ ಸಿ.ಟಿ.ರವಿ, ಕಂಬಳಿ ಹಾಕಲು ಕುರುಬ ಜಾತಿಯವರೇ ಆಗಬೇಕು ಅನ್ನುವ ನಿಮ್ಮ ವಾದದ ಪ್ರಕಾರ, ಈ ಟೊಪ್ಪಿ ಹಾಕಲು ಯಾರಿಗೆ ಹುಟ್ಟಿರಬೇಕು ಮಾಜಿ ಮುಖ್ಯಮಂತ್ರಿಗಳೇ ಎಂದು ತಿರುಗೇಟು ನೀಡಿದ್ದಾರೆ.
ಇನ್ನೂ ಸಿದ್ದರಾಮಯ್ಯನವರ ಹೇಳಿಕೆಗೆ ಹೆಚ್.ವಿಶ್ವನಾಥ್ ಕೂಡ ವಿರೋಧ ವ್ಯಕ್ತಪಡಿಸಿದ್ದು, ಕಾಗಿನೆಲೆ ಪೀಠಕ್ಕೆ ಯಾರೇ ಹೋದರೂ ಕಂಬಳಿ ಹೊದಿಸಿ ಗೌರವ ತೋರುತ್ತಾರೆ. ಅದೇ ರೀತಿ ಸಿಎಂ ಬಸವರಾಜ್ ಬೊಮ್ಮಾಯಿ ಅವರಿಗೂ ಹೊದಿಸಿದ್ದಾರೆ. ಇದಕ್ಕೆ ವಿಶೇಷ ಅರ್ಥ ಕಲ್ಪಿಸುವುದಲ್ಲ. ಸಿದ್ದರಾಮಯ್ಯ, ಇದನ್ನು ಒಂದು ದೊಡ್ಡ ಅಪರಾಧ ಎನ್ನುವಂತೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb