ಸಲಿಂಗ ವಿವಾಹ ಭಾರತೀಯ ಸಂಸ್ಕೃತಿಯ ಭಾಗವಲ್ಲ: ದೆಹಲಿ ಕೋರ್ಟ್ ನಲ್ಲಿ ಕೇಂದ್ರ ಸರ್ಕಾರ ಹೇಳಿಕೆ
ನವದೆಹಲಿ: ಭಾರತದಲ್ಲಿ ಪುರುಷ ಮತ್ತು ಮಹಿಳೆಯರ ನಡುವಿನ ವಿವಾಹ ಮಾತ್ರ ಕಾನೂನು ಬದ್ಧವಾಗಿದೆ ಎಂದು ಕೇಂದ್ರ ಸರ್ಕಾವು ದೆಹಲಿ ಹೈಕೋರ್ಟ್ ಗೆ ಹೇಳಿದ್ದು, ಸಲಿಂಗ ವಿವಾಹ ಭಾರತೀಯ ಸಂಸ್ಕೃತಿ ಅಥವಾ ಕಾನೂನಿನ ಭಾಗವಲ್ಲ ಎಂದು ಹೇಳಿದೆ ಎಂದು ವರದಿಯಾಗಿದೆ.
ಭಾರತದಲ್ಲಿ ಸಲಿಂಗ ವಿವಾಹಕ್ಕೆ ಕಾನೂನಿನ ಮಾನ್ಯತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಡಿ.ಎನ್. ಪಟೇಲ್ ಮತ್ತು ನ್ಯಾಯಮೂರ್ತಿ ಜ್ಯೋತಿ ಸಿಂಗ್ ನೇತೃತ್ವದ ಪೀಠವು ನಡೆಸಿತು.
ಭಾರತೀಯ ದಂಡ ಸಂಹಿತೆಯ ಸೆಕ್ಷನ್ 377 ರ ಅಡಿಯಲ್ಲಿ, ಸಲಿಂಗಕಾಮವು ಕ್ರಿಮಿನಲ್ ಅಪರಾಧವಲ್ಲ ಮತ್ತು ಈ ನಿಬಂಧನೆಯು ಮದುವೆಗೆ ಸಂಬಂಧಿಸಿಲ್ಲ ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಹೇಳಿದ್ದಾರೆ.
ಸಲಿಂಗ ವಿವಾಹದ ಕುರಿತು ದೆಹಲಿ ಹೈಕೋರ್ಟ್ ನಲ್ಲಿ ಸಲ್ಲಿಸಲಾಗಿರುವ ಅರ್ಜಿಗಳಿಗೆ ಕೇಂದ್ರ ಸರ್ಕಾರವು ಪದೇ ಪದೇ ಆಕ್ಷೇಪ ವ್ಯಕ್ತಪಡಿಸಿದೆ. ಸಲಿಂಗ ವಿವಾಹ ಭಾರತೀಯ ಸಂಸ್ಕೃತಿ ಅಥವಾ ಕಾನೂನಿನ ಭಾಗವಲ್ಲ ಮತ್ತು ಅಂತಹ ಸಂಬಂಧಗಳನ್ನು ಭಾರತೀಯ ಕುಟುಂಬ ವ್ಯವಸ್ಥೆಗೆ ಹೋಲಿಸಲಾಗುವುದಿಲ್ಲ ಎಂದು ಕೇಂದ್ರವು ಅಭಿಪ್ರಾಯಪಟ್ಟಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DvHWsFS1hwLKfIX9njyNyb
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka