BreakingNews… ನಟ ಪುನೀತ್ ರಾಜ್ ಕುಮಾರ್ ಇನ್ನಿಲ್ಲ | ಅಧಿಕೃತ ಮಾಹಿತಿ - Mahanayaka
3:52 PM Thursday 12 - December 2024

BreakingNews… ನಟ ಪುನೀತ್ ರಾಜ್ ಕುಮಾರ್ ಇನ್ನಿಲ್ಲ | ಅಧಿಕೃತ ಮಾಹಿತಿ

puneeth rajkumar no more
29/10/2021

ಬೆಂಗಳೂರು:  ನಟ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು, ಅವರ ನಿಧನಕ್ಕೆ ಇಡೀ ಕರುನಾಡೇ ಕಣ್ಣೀರು ಹಾಕಿದೆ. ದಿಢೀರ್ ಬೆಳವಣಿಗೆಯಲ್ಲಿ ನಡೆದ ಘಟನೆಗೆ ಇಡೀ ಚಿತ್ರರಂಗ ಮಾತ್ರವಲ್ಲದೇ ಅಭಿಮಾನಿಗಳೇ ನಿರೀಕ್ಷೆ ಮಾಡದಂತಹ ಘಟನೆ ನಡೆದಿದೆ.

ನಿನ್ನೆ ಪುನೀತ್ ರಾಜ್ ಕುಮಾರ್ ಅವರು ಭಜರಂಗಿ ಚಿತ್ರದ ಪ್ರಮೋಷನ್ ನ ಬಳಿಕ ಅವರು ತೀವ್ರವಾಗಿ ಸುಸ್ತಾಗಿದ್ದರು. ಆ ಬಳಿಕ ಬೆಳಗ್ಗೆ ಅವರು ಜಿಮ್ ಗೆ ಹೋಗಿದ್ದರು. ಜಿಮ್ ನಲ್ಲಿ  ಅವರಿಗೆ ಎದೆನೋವು ಕಾಣಿಸಿಕೊಂಡಿದೆ ಎನ್ನಲಾಗಿದೆ. ತಕ್ಷಣ ಅವರನ್ನು ರಮಣಶ್ರೀ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಬಳಿಕ ವಿಕ್ರಂ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು.

ಘಟನಾ ಸ್ಥಳದಲ್ಲಿ ಅಪ್ಪು ಅಭಿಮಾನಿಗಳು, ಚಿತ್ರರಂಗದ ನಟರ ರೋದನೆ ಮುಗಿಲು ಮುಟ್ಟಿದೆ. ಕೊನೆಯ ಕ್ಷಣಗಳ ವರೆಗೆ ಕೂಡ ಪುನೀತ್ ರಾಜ್ ಕುಮಾರ್ ಅವರನ್ನು ಉಳಿಸಿಕೊಳ್ಳುವ ಪ್ರಯತ್ನ ನಡೆಸಲಾಗಿದೆ. ಆದರೆ, ಅದು ಸಾಧ್ಯವಾಗಿರಲಿಲ್ಲ.

ಆರೋಗ್ಯವಂತರಾಗಿದ್ದ ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯ ಸಂಬಂಧಿ ಕಾಯಿಲೆ ಇದೆ ಎಂಬ ಬಗ್ಗೆ ಯಾರು ಕೂಡ ನಿರೀಕ್ಷಿಸಿರಲಿಲ್ಲ. ಇದೊಂದು ಅನಿರೀಕ್ಷಿತ ಘಟನೆ ಕೂಡ ಆಗಿದೆ. ನಿನ್ನೆಯಷ್ಟೇ ಲವಲವಿಕೆಯಿಂದ ಹಲವು ಕಾರ್ಯಕ್ರಮಗಳಲ್ಲಿ ಪುನೀತ್ ರಾಜ್ ಕುಮಾರ್ ಭಾಗವಹಿಸಿದ್ದರು. ಆದರೆ ಇಂದು ಬೆಳಗ್ಗೆ ಇದ್ದಕ್ಕಿದಂತೆ ಅವರಿಗೆ ಹೃದಯಾಘಾತವಾಗಿದೆ ಎನ್ನುವ ಸುದ್ದಿ ಬರ ಸಿಡಿಲಿನಂತೆ ಅಪ್ಪಳಿಸಿದೆ.

ನಟ ಪುನೀತ್ ರಾಜ್ ಕುಮಾರ್ ಅವರಿಗೆ ಸಣ್ಣ ಮಟ್ಟದಲ್ಲಿ ಹೃದಯಾಘಾತವಾಗಿದೆ ಎಂದೇ ಎಲ್ಲರೂ ಭಾವಿಸಿದ್ದರು. ಅವರು ಚೇತರಿಸಿಕೊಳ್ಳುತ್ತಾರೆ ಎಂದೇ ಎಲ್ಲರೂ ಅಂದುಕೊಂಡಿದ್ದರು. ಆದರೆ ಕೊನೆಯ ಕ್ಷಣದಲ್ಲಿ ಪುನೀತ್ ರಾಜ್ ಕುಮಾರ್ ಅವರು ನಿಧನರಾಗಿದ್ದಾರೆ ಎನ್ನುವ ಮಾಹಿತಿ ದೊರೆತಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ