ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಖಾಸಗಿ ಶಾಲೆಗಳಿಗೆ ರಜೆ ಘೋಷಣೆ
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ನಿಧನದ ಹಿನ್ನೆಲೆಯಲ್ಲಿ ಕೆಲವು ಖಾಸಗಿ ಶಾಲೆಗಳು ಶನಿವಾರ ರಜೆ ಘೋಷಿಸಿದ್ದು, ಖಾಸಗಿ ಶಾಲೆಗಳ ಒಕ್ಕೂಟ ರೂಪ್ಸಾ ಕರ್ನಾಟಕ ಈ ಸಂಬಂಧ ಪ್ರಕಟಣೆ ಹೊರಡಿಸಿದೆ ಎಂದು ವರದಿಯಾಗಿದೆ.
ಇನ್ನೂ ಸರ್ಕಾರಿ ಶಾಲೆಗಳಿಗೆ ರಜೆ ಘೋಷಿಸುವ ಬಗ್ಗೆ ಈವರೆಗೆ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ ಎಂದು ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ಹೇಳಿದ್ದು, ಈ ಸಂಬಂಧ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಜೊತೆಗೆ ಚರ್ಚೆ ನಡೆಸಿ ತೀರ್ಮಾನಿಸಲಾಗುವುದು ಎಂದು ಅವರು ಹೇಳಿದ್ದಾರೆ.
ಶುಕ್ರವಾರ ಜಿಮ್ ನಲ್ಲಿ ವರ್ಕೌಟ್ ಮಾಡುತ್ತಿರುವ ಸಂದರ್ಭದಲ್ಲಿ ಪುನೀತ್ ರಾಜ್ ಕುಮಾರ್ ಅವರಿಗೆ ಹೃದಯಾಘಾತವಾಗಿತ್ತು. ವೈದ್ಯರ ನಿರಂತರ ಚಿಕಿತ್ಸೆಯ ಬಳಿಕವೂ ಪುನೀತ್ ರಾಜ್ ಕುಮಾರ್ ಅವರು ಚೇತರಿಸಿಕೊಳ್ಳದೇ ನಿಧನರಾಗಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka