ರಾಜ್ ಕುಮಾರ್, ಪಾರ್ವತಮ್ಮ ರಾಜ್ ಕುಮಾರ್ ಸಮಾಧಿ ಪಕ್ಕದಲ್ಲಿಯೇ ಪುನೀತ್ ಅಂತ್ಯಕ್ರಿಯೆ

ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನಿಧನ ಹೊಂದಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಅವರ ಅಂತಿಮ ದರ್ಶನ ನಡೆಯುತ್ತಿದೆ. ಲಕ್ಷಾಂತರ ಅಭಿಮಾನಿಗಳು ಪುನೀತ್ ರಾಜ್ ಕುಮಾರ್ ಅವರ ಅಂತಿಮ ದರ್ಶನ ಪಡೆಯುತ್ತಿದ್ದಾರೆ.
ಇಂದು ಸಂಜೆ 3:30ರವರೆಗೆ ಅಂತಿಮ ದರ್ಶನ ನಡೆಯುವುದು ಬಳಿಕ 5:30ರ ಸುಮಾರಿಗೆ ಕಂಠೀರವ ಸ್ಟುಡಿಯೋದಲ್ಲಿ ರಾಜ್ ಕುಮಾರ್ ಹಾಗೂ ಪಾರ್ವತಮ್ಮ ರಾಜ್ ಕುಮಾರ್ ಸಮಾಧಿ ಪಕ್ಕದಲ್ಲಿಯೇ ಪುನೀತ್ ರಾಜ್ ಕುಮಾರ್ ಅವರ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ತಿಳಿದು ಬಂದಿದೆ.
ಇನ್ನೂ ಪುನೀತ್ ಅವರ ಪುತ್ರಿ ಧ್ರುತಿ ನ್ಯೂಯಾರ್ಕ್ ನಿಂದ ದೆಹಲಿಗೆ ಆಗಮಿಸಿ, ಅಲ್ಲಿಂದ ವಿಶೇಷ ವಿಮಾನದಲ್ಲಿ ಬೆಂಗಳೂರಿಗೆ ಸಂಜೆ 4:15ರ ವೇಳೆಗೆ ತಲುಪುವ ಸಾಧ್ಯತೆ ಇದೆ. ಬಳಿಕ ಸಕಲ ಸರ್ಕಾರಿ ಗೌರವಗಳೊಂದಿಗೆ ಪುನೀತ್ ಅಂತ್ಯಕ್ರಿಯೆ ನಡೆಸಲಾಗುತ್ತದೆ. ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಆಪ್ತರಿಗೆ ಮಾತ್ರವೇ ಅವಕಾಶ ನೀಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka