ಖಿನ್ನತೆಗೆ ಜಾರಿದ ಅಪ್ಪು ಅಭಿಮಾನಿ ನೇಣಿಗೆ ಶರಣು!
ತುಮಕೂರು: ಪುನೀತ್ ರಾಜ್ ಕುಮಾರ್ ಅವರ ನಿಧನದಿಂದ ಖಿನ್ನತೆಗೆ ಜಾರಿದ ಅಭಿಮಾನಿಯೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ತಾಲೂಕಿನ ಹೆಬ್ಬೂರು ಹೋಬಳಿಯ ಕೋಡುಪಾಳ್ಯ ಗ್ರಾಮದಲ್ಲಿ ನಡೆದಿದೆ.
30 ವರ್ಷ ವಯಸ್ಸಿನ ಭರತ್ ಆತ್ಮಹತ್ಯೆಗೆ ಶರಣಾಗಿರುವ ವ್ಯಕ್ತಿಯಾಗಿದ್ದು, ಸಾವಿಗೂ ಮುನ್ನ ಡೆತ್ ನೋಟ್ ಬರೆದಿದ್ದು, ನನ್ನ ಸಾವಿಗೆ ನಾನೇ ಕಾರಣ. ನಾನು ಪುನೀತ್ ರಾಜ್ ಕುಮಾರ್ ಅಭಿಮಾನಿಯಾಗಿದ್ದು, ಅವರ ಸಾವನ್ನು ನೋಡಲಾಗುತ್ತಿಲ್ಲ. ಅವರು ಹೋದ ಜಾಗಕ್ಕೆ ನಾನೂ ಹೋಗುತ್ತಿದ್ದೇನೆ ಎಂದು ಪತ್ರದಲ್ಲಿ ಹೇಳಿದ್ದಾರೆ.
ಮಾಹಿತಿಗಳ ಪ್ರಕಾರ ಭರತ್ ಗಾರೆ ಕೆಲಸ ಮಾಡಿಕೊಂಡಿದ್ದು, ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಎಂದು ತಿಳಿದು ಬಂದಿದೆ. ಇನ್ನೂ ಭರತ್ ಆತ್ಮಹತ್ಯೆ ಬೆನ್ನಲ್ಲೇ ಮೃತ ಭರತ್ ನ ಕಣ್ಣುಗಳನ್ನು ಕುಟುಂಬಸ್ಥರು ದಾನ ಮಾಡಿದ್ದಾರೆ. ಘಟನೆ ಸಂಬಂಧ ಹೆಬ್ಬೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪುನೀತ್ ಅಕಾಲಿಕ ಸಾವಿನ ಬೆನ್ನಲ್ಲೇ ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದು ಆತಂಕ ಸೃಷ್ಟಿಸಿದೆ. ಈಗಾಗಲೇ ನಟ ಶಿವರಾಜ್ ಕುಮಾರ್ ಅವರು ಆತ್ಮಹತ್ಯೆಮಾಡಿಕೊಳ್ಳಬೇಡಿ ಪುನೀತ್ ಅಭಿಮಾನಿಗಳಿಗೆ ಮನವಿ ಮಾಡಿಕೊಂಡಿದ್ದಾರೆ. ಜೊತೆಗೆ ನಿಮಗೂ ಒಂದು ಕುಟುಂಬ ಇದೆ ಎನ್ನುವುದನ್ನು ಮರೆಯಬೇಡಿ ಎಂದು ಹೇಳಿದ್ದಾರೆ.
ನಟ ಪುನೀತ್ ಅವರ ಅಕಾಲಿಕ ಮರಣಕ್ಕೆ ಮರುಗದ ಜೀವಗಳಿಲ್ಲ. ಅವರ ಸಾವು ರಾಜ್ಯ ಮಾತ್ರವಲ್ಲದೇ ದೇಶದಲ್ಲೇ ಎಲ್ಲರನ್ನೂ ಬೆಚ್ಚಿ ಬೀಳಿಸಿದೆ. ಹಲವಾರು ಜನರನ್ನು ಖಿನ್ನತೆಗೆ ಕೂಡ ನೂಕಿದೆ. ಆದರೆ, ಇದಕ್ಕೆಲ್ಲ ಆತ್ಮಹತ್ಯೆ ಪರಿಹಾರವಲ್ಲ. ಪುನೀತ್ ಇಂದು ಬದುಕಿರುತ್ತಿದ್ದರೆ, ಅಭಿಮಾನಿಗಳು ಆತ್ಮಹತ್ಯೆ ಮಾಡಿಕೊಳ್ಳುತ್ತಿರುವುದನ್ನು ಅವರು ಸಹಿಸುತ್ತಿರಲಿಲ್ಲ ಎನ್ನುವುದನ್ನು ಅಭಿಮಾನಿಗಳು ಅರ್ಥ ಮಾಡಿಕೊಳ್ಳಬೇಕಿದೆ ಎನ್ನುವ ಮಾತುಗಳು ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DwpZfHgaZak34xk58taiWR
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka