ಹೃದಯ ವಿದ್ರಾವಕ ಘಟನೆ: 3 ತಿಂಗಳ ಮಗುವನ್ನು ಕೊಂದು ದಂಪತಿ ನೇಣಿಗೆ ಶರಣು
ಗದಗ: ಮೂರು ತಿಂಗಳ ಮಗುವನ್ನು ಕೊಂದು ದಂಪತಿ ನೇಣಿಗೆ ಶರಣಾಗಿರುವ ಹೃದಯ ವಿದ್ರಾವಕ ಘಟನೆಯೊಂದು ಗದಗ ಜಿಲ್ಲೆಯ ಗಜೇಂದ್ರಗಡ ತಾಲೂಕಿನ ನಾಗೇಂದ್ರಗಡ ಗ್ರಾಮದಲ್ಲಿ ನಡೆದಿದ್ದು, ಕೌಟುಂವಿಕ ಕಲಹದ ಹಿನ್ನೆಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.
30 ವರ್ಷ ವಯಸ್ಸಿನ ಮಲ್ಲಪ್ಪ ಗಡಾದ ಹಾಗೂ 24 ವರ್ಷ ವಯಸ್ಸಿನ ಸುಧಾ ಆತ್ಮಹತ್ಯೆಗೆ ಶರಣಾದವರಾಗಿದ್ದು, ಮೂರು ತಿಂಗಳ ಮಗು ರೂಪಾಶ್ರೀ ತನ್ನ ಹೆತ್ತವರಿಂದಲೇ ಹತ್ಯೆಗೀಡಾದ ಮಗುವಾಗಿದೆ.
ಪುತ್ರಿಯನ್ನು ಹತ್ಯೆ ಮಾಡಿದ ಬಳಿಕ ತಮ್ಮ ಜಮೀನಿನಲ್ಲಿದ್ದ ಮನೆಯಲ್ಲಿ ಮಲ್ಲಪ್ಪ ಹಾಗೂ ಸುಧಾ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂಬ ಶಂಕೆ ವ್ಯಕ್ತವಾಗಿದೆ.
2 ವರ್ಷದ ಹಿಂದೆಯಷ್ಟೆ ಇವರಿಬ್ಬರು ವಿವಾಹವಾಗಿದ್ದರು ಎನ್ನಲಾಗಿದೆ. ಕೌಟುಂಬಿಕ ಕಲಹದಿಂದ ಬೇಸತ್ತು ಆತ್ಮಹತ್ಯೆಗೆ ಶರಣಾಗಿದ್ದಾರೆಯೇ? ಎನ್ನುವ ಅನುಮಾನ ಸೃಷ್ಟಿಯಾಗಿದೆ. ಘಟನೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಗಜೇಂದ್ರಗಡ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹೆಚ್ಚಿನ ವಿವರ ತನಿಖೆಯಿಂದ ತಿಳಿದು ಬರಬೇಕಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO
ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka