ಮತ್ತೊಂದು ಗುಡ್ ನ್ಯೂಸ್:  ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯ ಬಳಿಕ ಅಡುಗೆ ಎಣ್ಣೆ ಬೆಲೆ ಇಳಿಕೆ - Mahanayaka
8:24 AM Thursday 12 - December 2024

ಮತ್ತೊಂದು ಗುಡ್ ನ್ಯೂಸ್:  ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆಯ ಬಳಿಕ ಅಡುಗೆ ಎಣ್ಣೆ ಬೆಲೆ ಇಳಿಕೆ

cooking oil
05/11/2021

ನವದೆಹಲಿ: ಪೆಟ್ರೋಲ್ ಡೀಸೆಲ್ ಬೆಲೆ ಇಳಿಕೆಯಾದ ಬೆನ್ನಲ್ಲೆ ಇದೀಗ ಕೇಂದ್ರ ಸರ್ಕಾರವು ಮತ್ತೊಂದು ಗುಡ್ ನ್ಯೂಸ್ ನೀಡಿದ್ದು,  ಅಡುಗೆ ಎಣ್ಣೆ ದರ ಇಳಿಕೆ ಮಾಡಿದೆ. ಈ ಸಂಬಂಧ ಕೇಂದ್ರ ಆಹಾರ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ಮಾಹಿತಿ ನೀಡಿದ್ದು, ಪ್ರತಿ ಕೆಜಿಗೆ 20 ರೂ ವರೆಗೆ ದರ ಕಡಿಮೆ ಮಾಡಲಾಗಿದೆ ಎಂದು ತಿಳಿದು ಬಂದಿದೆ.

ಶೇಂಗಾ ಎಣ್ಣೆ, ಸೋಯಾಬೀನ್ ಎಣ್ಣೆ, ಪಾಮ್ ಆಯಿಲ್, ಸೂರ್ಯಕಾಂತಿ ಎಣ್ಣೆ ಸೇರಿದಂತೆ ಬಹುತೇಕ ಅಡುಗೆ ಎಣ್ಣೆಗಳ ಇಳಿಕೆಯಾಗಿದೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳಲ್ಲಿ ಇಳಿಕೆಯಾಗಿದ್ದು, ಅಡುಗೆ ಎಣ್ಣೆ ದರ 7 -20 ರೂಪಾಯಿವರೆಗೆ ಇಳಿಕೆಯಾಗಿದೆ ಪಾಂಡೆ ತಿಳಿಸಿದ್ದಾರೆ.

ಖಾದ್ಯ ತೈಲ ಬೆಲೆಗಳು ಸಾಕಷ್ಟು ಗಣನೀಯವಾಗಿ ಕುಸಿದಿವೆ. ಹಲವು ಸ್ಥಳಗಳಲ್ಲಿ 20 ರೂ., 18 ರೂ., 10 ರೂ., 7 ರೂ.ಗಳಷ್ಟು ಇಳಿಕೆಯಾಗಿದೆ.

ತಾಳೆ ಎಣ್ಣೆ, ಕಡಲೆಕಾಯಿ, ಸೋಯಾಬೀನ್, ಸೂರ್ಯಕಾಂತಿ ಮತ್ತು ಎಲ್ಲಾ ಪ್ರಮುಖ ಎಣ್ಣೆಗಳ ಬೆಲೆ ಕುಸಿತ ಕಂಡಿದೆ ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿ ಸುಧಾಂಶು ಪಾಂಡೆ ಹೇಳಿದ್ದಾರೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/IaxQSuNxGHREVEoloSpDOO

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ