ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಇನ್ನೂ ಪತ್ತೆಯಾಗದ ಆರೋಪಿ ರಾಜೇಶ್ ಭಟ್! - Mahanayaka
12:03 AM Tuesday 4 - February 2025

ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ: ಇನ್ನೂ ಪತ್ತೆಯಾಗದ ಆರೋಪಿ ರಾಜೇಶ್ ಭಟ್!

rajesh bhat
09/11/2021

ಮಂಗಳೂರು:  ಇಂಟರ್ನ್ ಶಿಪ್ ವಿದ್ಯಾರ್ಥಿನಿಗೆ ಲೈಂಗಿಕ ಕಿರುಕುಳ ನೀಡಿರುವ ಆರೋಪದ ಬಳಿಕ ತಲೆ ಮರೆಸಿಕೊಂಡಿರುವ ರಾಜೇಶ್ ಭಟ್ ನನ್ನು ಈವರೆಗೆ ಪತ್ತೆ ಹಚ್ಚಲು ಮಂಗಳೂರು ಪೊಲೀಸರಿಂದ ಸಾಧ್ಯವಾಗಿಲ್ಲ. ಹಿನ್ನೆಲೆಯಲ್ಲಿ ಆರೋಪಿಯ ವಿರುದ್ಧ ಲುಕ್ ಔಟ್ ನೋಟಿಸ್ ಜಾರಿಯಾಗಿದೆ.

ಪ್ರಕರಣದ ತೀವ್ರ ತನಿಖೆ ನಡೆಸುತ್ತಿರುವ ಮಂಗಳೂರು ಪೊಲೀಸರು ಆರೋಪಿಯ ಪತ್ತೆಗೆ ನಿರಂತರವಾಗಿ ಹುಟುಕಾಟ ನಡೆಸುತ್ತಿದ್ದಾರೆ. ರಾಜೇಶ್ ಭಟ್ ಗೆ ಸೇರಿದ ಎಲ್ಲಾ ಬ್ಯಾಂಕ್ ಖಾತೆಗಳನ್ನೂ ಸೀಝ್ ಮಾಡಲಾಗಿದೆ.

ತಮಿಳುನಾಡು, ಆಂಧ್ರ, ಕೇರಳ, ಮಹಾರಾಷ್ಟ್ರ ಸೇರಿದಂತೆ ಇತರೆ ರಾಜ್ಯಗಳ ಪೊಲೀಸರ ನೆರವು ಸಹ ಕೇಳಿದ್ದಾರೆ ಎನ್ನಲಾಗಿದೆ. ದೇಶದ ಎಲ್ಲ ಏರ್ಪೋರ್ಟ್ ಗಳಲ್ಲಿ ಲುಕ್ ಔಟ್ ನೋಟಿಸ್ ಜಾರಿ ಮಾಡಲಾಗಿದೆ. ಇನ್ನೂ ಈ ಪ್ರಕರಣ ಬೇಧಿಸಲು 6 ತಂಡಗಳನ್ನು ರಚಿಸಲಾಗಿದೆ.

ಘಟನೆ ನಡೆದ ತಕ್ಷಣವೇ ಆರೋಪಿ ರಾಜೇಶ್ ಭಟ್ ಈ ಕೇಸ್ ನ್ನು ಮುಚ್ಚಿ ಹಾಕಲು ನಾನಾ ರೀತಿಯ ಕಸರತ್ತು ನಡೆಸಿದ್ದ. ಪ್ರಕರಣ ದಾಖಲಾಗಿ ತಿಂಗಳುಗಳು ಕಳೆದರೂ ಆರೋಪಿಯನ್ನು ಇನ್ನೂ ಪತ್ತೆ ಹಚ್ಚಲು ಪೊಲೀಸರಿಗೆ ಇನ್ನೂ ಸಾಧ್ಯವಾಗಿಲ್ಲ. ಈ ನಿಟ್ಟಿನಲ್ಲಿ ತನಿಖೆಯನ್ನು ಇನ್ನಷ್ಟು ಚುರುಕುಗೊಳಿಸಬೇಕು ಎನ್ನುವ ಒತ್ತಾಯಗಳು ಕೂಡ ಕೇಳಿ ಬಂದಿವೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇತ್ತೀಚಿನ ಸುದ್ದಿ