ಉಪಚುನಾವಣೆ ಫಲಿತಾಂಶ: ಬಿಜೆಪಿಗೆ ಮುನ್ನಡೆ, ಕಾಂಗ್ರೆಸ್, ಜೆಡಿಎಸ್ ಗೆ ಹಿನ್ನಡೆ
10/11/2020
ಬೆಂಗಳೂರು: ರಾಜರಾಜೇಶ್ವರಿ ಮತ್ತು ಶಿರಾ ವಿಧಾನಸಭಾ ಕ್ಷೇತ್ರದ ಫಲಿತಾಂಶ ಇಂದು ಪ್ರಕಟವಾಗಲಿದ್ದು, ಈ ಎರಡೂ ಕ್ಷೇತ್ರಗಳಲ್ಲಿಯೂ ಬಿಜೆಪಿ ಮುನ್ನಡೆ ಸಾಧಿಸಿದೆ.
ಶಿರಾ ಕ್ಷೇತ್ರದ ಮತ ಎಣಿಕೆ ತುಮಕೂರಿನ ಸರ್ಕಾರಿ ಪಾಲಿಟೆಕ್ನ್ ಕಾಲೇಜಿನಲ್ಲಿ ನಡೆಯುತ್ತಿದೆ. ಆರ್ .ಆರ್.ನಗರದ ಮತ ಎಣಿಕೆ ಕಾರ್ಯ ಜ್ಞಾನಾಕ್ಷಿ ವಿದ್ಯಾ ನಿಕೇತನ್ ಶಾಲೆಯಲ್ಲಿ ನಡೆಯುತ್ತಿದೆ. ಆರ್.ಆರ್.ನಗರ ಕ್ಷೇತ್ರದಲ್ಲಿ ಮೂರು ಹಂತದ ಮತ ಎಣಿಕೆ ಮುಕ್ತಾಯವಾಗಿದೆ.
ಆರ್ ಆರ್ ನಗರದಲ್ಲಿ ಮುನಿರತ್ನ ಗೆಲುವಿನ ಸನಿಹದಲ್ಲಿದ್ದಾರೆ. ಶಿರಾ ವಿಧಾನ ಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ನಾಲ್ಕನೆ ಸುತ್ತಿನಲ್ಲೂ 1519 ಮತಗಳ ಮುನ್ನಡೆ ಕಾಯ್ದುಕೊಂಡಿದ್ದಾರೆ ಎಂದು ತಿಳಿದು ಬಂದಿದೆ.