ನಿಧಿಯಾಸೆಗಾಗಿ ಬೆತ್ತಲೆ ಪೂಜೆ: ಮೌಢ್ಯ ಆಚರಣೆಯಲ್ಲಿ ತೊಡಗಿದ್ದ 6 ಮಂದಿ ಅರೆಸ್ಟ್
ರಾಮನಗರ: ನಿಧಿ ಆಸೆಗಾಗಿ ಬೆತ್ತಲೆ ಪೂಜೆ ಸೇರಿದಂತೆ ಹಲವು ಮೌಢ್ಯ ಆಚರಣೆಯಲ್ಲಿ ತೊಡಗಿದ್ದ ಆರು ಮಂದಿಯನ್ನು ಜಿಲ್ಲೆಯ ಸಾತನೂರು ಠಾಣೆ ಪೊಲೀಸರು ಬುಧವಾರ ಬಂಧಿಸಿದ್ದಾರೆ ಎಂದು ವರದಿಯಾಗಿದೆ.
ಪಾರ್ಥಸಾರಥಿ, ನಾಗರಾಜು, ಶಶಿಕುಮಾರ್, ಲೋಕೇಶ್, ಮೋಹನ್, ಲಕ್ಷ್ಮೀನರಸಪ್ಪ ಬಂಧಿತ ಆರೋಪಿಗಳಾಗಿದ್ದು, ಬೆತ್ತಲೆ ಪೂಜೆಗೆ ಬಳಸಿಕೊಳ್ಳಲಾಗಿದ್ದ ಕಾರ್ಮಿಕ ಮಹಿಳೆಯನ್ನು ಪೊಲೀಸರು ರಕ್ಷಿಸಿದ್ದಾರೆ. ಬಂಧಿತ ಆರೋಪಿಗಳೆಲ್ಲರೂ ತಮಿಳುನಾಡು ಮೂಲದವರು ಎಂದು ತಿಳಿದು ಬಂದಿದೆ.
ಕನಕಪುರ ತಾಲೂಕಿನ ಸಾತನೂರು ಸಮೀಪದ ಭೂಹಳ್ಳಿ ಗ್ರಾಮದ ಶ್ರೀನಿವಾಸ ಎಂಬವರ ಮನೆಯಲ್ಲಿ ಆಗಾಗ ಗುಟ್ಟಾಗಿ ನಿಧಿಗಾಗಿ ಪೂಜೆ ನಡೆಯುತ್ತಿತ್ತು ಎನ್ನಲಾಗಿದೆ. ಈ ಸಂಬಂಧ ಖಚಿತ ಮಾಹಿತಿಯೊಂದಿಗೆ ಪೊಲೀಸರು ದಾಳಿ ನಡೆಸಿದ್ದು, ಈ ವೇಳೆ ಪ್ರಕರಣ ಬೆಳಕಿಗೆ ಬಂದಿದೆ.
ಮನೆ ಮಾಲಿಕ ಶ್ರೀನಿವಾಸ್ ಆರ್ಥಿಕ ಸಂಕಷ್ಟದಲ್ಲಿದ್ದು, ಈ ಸಂದರ್ಭದಲ್ಲಿ ಆರೋಪಿಗಳ ಪರಿಚಯವಾಗಿದೆ ಎನ್ನಲಾಗಿದೆ. ನಿಮ್ಮ ಮನೆಯೊಳಗೆ ನಿಧಿ ಇದೆ. ಹಾಗಾಗಿ ನಿಮಗೆ ಆರ್ಥಿಕ ಸಂಕಷ್ಟ ಬಂದಿದೆ ಎಂದು ನಂಬಿಸಿದ ಆರೋಪಿಗಳು ಶಶಿಕುಮಾರ್ ಎಂಬ ಅರ್ಚಕನನ ಮೂಲಕ ಶ್ರೀನಿವಾಸ್ ಅವರ ಮನೆಯಲ್ಲಿ ಪೂಜೆ ನಡೆಸಿದ್ದ ಎನ್ನಲಾಗಿದೆ.
ಮಹಿಳೆಯನ್ನು ಬೆತ್ತಲಾಗಿಸಿ ಪೂಜೆ ಮಾಡಿದರೆ, ನಿಧಿ ಸಿಗುತ್ತದೆ ಎಂದು ಆರೋಪಿಗಳು ಕೊನೆಯದಾಗಿ ಬೇಡಿಕೆ ಇಟ್ಟಿದ್ದಾರೆ. ಅಂತೆಯೇ 50 ಸಾವಿರ ರೂಪಾಯಿ ಹಣದ ಆಮಿಷ ನೀಡಿ ಕಾರ್ಮಿಕ ಮಹಿಳೆಯನ್ನು ಕರೆತಂದು ಆರೋಪಿಗಳು ಬೆತ್ತಲೆ ಪೂಜೆ ಮಾಡಿದ್ದಾರೆನ್ನಲಾಗಿದೆ. ಈ ಸಂದರ್ಭದಲ್ಲಿ ಖಚಿತ ಮಾಹಿತಿಯೊಂದಿಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ ಎನ್ನಲಾಗಿದೆ. ಸದ್ಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು ವಿವಿಧ ಆರೋಪಗಳಡಿಯಲ್ಲಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG
ಇನ್ನಷ್ಟು ಸುದ್ದಿಗಳು
ಬಿಟ್ ಕಾಯಿನ್ ಹಗರಣ ಆರೋಪ ನಿರ್ಲಕ್ಷಿಸಲು ಸಿಎಂ ಬೊಮ್ಮಾಯಿಗೆ ಪ್ರಧಾನಿ ಮೋದಿ ಸಲಹೆ!
ಶೀಘ್ರದಲ್ಲೇ ಮದುವೆಯಾಗ್ತಾರಂತೆ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ನಟಿ ಕಂಗನಾ!
80 ಕೋಟಿ ಬಡವರ ಖಾತೆಗೆ ಕನ್ನ | ಶ್ರೀಕೃಷ್ಣನ ಮೇಲೆ ಮತ್ತೊಂದು ಗಂಭೀರ ಆರೋಪ
ಬಾಲಕಿಯನ್ನು ಕಾರು ಚಾಲಕ ಹಿಂಬಾಲಿಸಿದ ಪ್ರಕರಣಕ್ಕೆ ತಿರುವು!
ನದಿಗೆ ಇಳಿದು ವಿಡಿಯೋ ಮಾಡುತ್ತಿದ್ದ ವೇಳೆ ಯುವಕ ನೀರುಪಾಲು! | ವಿಡಿಯೋ ವೈರಲ್