ಕಂಗನಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವುದು ಯಾವಾಗ? | ಹುತಾತ್ಮ ವೀರರ ತ್ಯಾಗಕ್ಕೆ ಘೋರ ಅವಮಾನ
ಮುಂಬೈ: ಪದ್ಮಶ್ರೀ ಪ್ರಶಸ್ತಿ ಪಡೆದ ತಕ್ಷಣವೇ ನಟಿ ಕಂಗನಾಗೆ ದೇಶಕ್ಕೆ ಸಿಕ್ಕಿರುವ 47ರ ಸ್ವಾತಂತ್ರ್ಯ ಭಿಕ್ಷೆ ಎಂದೆನಿಸಿ ಬಿಟ್ಟಿತು. ಮೋದಿ ಸರ್ಕಾರವನ್ನು ಮತ್ತಷ್ಟು ಓಲೈಸಲು ಮುಂದಾಗಿ 2014ರಲ್ಲಿ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕಿತು ಎನ್ನುವ ಯಡವಟ್ಟು ಹೇಳಿಕೆ ಇದೀಗ ಬಿಜೆಪಿಗೆ ಮುಜುಗರವನ್ನುಂಟು ಮಾಡಿದೆ.
ಬಿಜೆಪಿ ಪರವಾಗಿ ಪೋಸ್ಟ್ ಮಾಡಿರುವುದಕ್ಕೆ ನಟ ಕಂಗನಾಗೆ ಪದ್ಮಶ್ರೀ ನೀಡಲಾಯಿತು ಎಂದು ವ್ಯಾಪಕ ಟ್ರೋಲ್ ಗಳು ಸಾಮಾಜಿಕ ಜಾಲತಾಣಗಳಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಕಂಗನಾ ಅವರು, ದೇಶಕ್ಕೆ ಸಿಕ್ಕಿದ ಸ್ವಾತಂತ್ರ್ಯವನ್ನು ಭಿಕ್ಷೆ ಎಂದು ಹೇಳಿದರು. ಈ ಮೂಲಕ ಸ್ವಾತಂತ್ರ್ಯಕ್ಕಾಗಿ ತಮ್ಮ ಪ್ರಾಣವನ್ನೇ ನೀಡಿರುವ ವೀರ ಭಾರತೀಯರಿಗೆ ಅವರು ಅಪಮಾನ ಮಾಡಿದ್ದಾರೆ ಎಂದು ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.
ಇದೀಗ ಬಿಜೆಪಿ ನಾಯಕರು ಕೂಡ ಕಂಗನಾ ರನಾವತ್ ಹೇಳಿಕೆಯಿಂದ ಮುಜುಗರಕ್ಕೊಳಗಾಗಿದ್ದು, ಮಹಾರಾಷ್ಟ್ರ ಬಿಜೆಪಿ ಘಟಕದ ಅಧ್ಯಕ್ಷ ಚಂದ್ರಕಾಂತ್ ಪಾಟೀಲ್ ಕಂಗನಾ ಹೇಳಿಕೆ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಸ್ವಾತಂತ್ರ್ಯ ಹೋರಾಟದ ಬಗ್ಗೆ ಕಂಗನಾ ಹೇಳಿಕೆ ಸಂಪೂರ್ಣವಾಗಿ ತಪ್ಪು. ಸ್ವಾತಂತ್ರ್ಯ ಚಳುವಳಿಯನ್ನು ನಕಾರಾತ್ಮಕವಾಗಿ ಟೀಕೆ ಮಾಡಲು ಯಾರಿಗೂ ಹಕ್ಕಿಲ್ಲ ಎಂದು ಹೇಳಿದ್ದಾರೆ. ಮೋದಿ ಅವರ ಕಾರ್ಯವನ್ನು ಅವರು ಶ್ಲಾಘಿಸಬಹುದು ಆದರೆ, ಸ್ವಾತಂತ್ರ್ಯ ಹೋರಾಟವನ್ನು ಟೀಕಿಸುವ ಹಕ್ಕಿಲ್ಲ ಎಂದು ಚಂದ್ರಕಾಂತ್ ಕಿಡಿಕಾರಿದ್ದಾರೆ.
ಇನ್ನೂ ದೆಹಲಿ ಬಿಜೆಪಿ ನಾಯಕ ಪ್ರವೀಣ್ ಶಂಕರ್ ಕಪೂರ್ ಕಂಗನಾ ವಿರುದ್ಧ ನ್ಯಾಯಾಂಗ ತನಿಖೆಗೆ ಒತ್ತಾಯಿಸಿದ್ದಾರೆ. ಕಂಗನಾ ಹೇಳಿಕೆಯು, ಸ್ವಾತಂತ್ರ್ಯದ ಅತಿ ದೊಡ್ಡ ದುರುಪಯೋಗ ಮತ್ತು ಸ್ವಾತಂತ್ರ್ಯ ಹೋರಾಟಗಾರರ ತ್ಯಾಗಕ್ಕೆ ಮಾಡಿದ ಅವಮಾನ. ಇದನ್ನು ಭಾರತದ ನ್ಯಾಯಾಂಗ ವ್ಯವಸ್ಥೆಯು ಗಮನಿಸಬೇಕು ಎಂದು ಟ್ವೀಟ್ ಮಾಡಿದ್ದಾರೆ.
ಇನ್ನೂ ಮತ್ತೋರ್ವ ಬಿಜೆಪಿ ನಾಯಕ ವರುಣ್ ಗಾಂಧಿ ಕಂಗನಾ ವಿರುದ್ಧ ಹರಿಹಾಯ್ದಿದ್ದಾರೆ. ಇದು ದೇಶ ವಿರೋಧಿ ಕೃತ್ಯ ಮತ್ತು ಕಂಗನಾ ಅವರನ್ನು ದೇಶ ವಿರೋಧಿ ಎನ್ನಬಹುದು ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸಣ್ಣ ಸಣ್ಣ ಘಟನೆಗಳಿಗೂ ದೇಶದ್ರೋಹದ ಆರೋಪದಲ್ಲಿ ಪ್ರಕರಣ ದಾಖಲಾಗುತ್ತಿದೆ. ಆದರೆ, ದೇಶದ ಸ್ವತಂತ್ರ ಹೋರಾಟಗಾರರಿಗೆ, ಹುತಾತ್ಮ ವೀರರಿಗೆ ಅವಮಾನ ಮಾಡುವಂತಹ ಹೇಳಿಕೆಯನ್ನು ನೀಡಿರುವ ಕಂಗನಾ ವಿರುದ್ಧ ಇನ್ನೂ ದೇಶದ್ರೋಹದ ಪ್ರಕರಣ ಯಾಕೆ ದಾಖಲಾಗಿಲ್ಲ ಎನ್ನುವ ಪ್ರಶ್ನೆಗಳು ಕೂಡ ಸಾರ್ವಜನಿಕವಾಗಿ ಕೇಳಿ ಬಂದಿದೆ. ಬಿಜೆಪಿ ಸರ್ಕಾರವು ಕಂಗನಾ ಅವರಿಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ವಾಪಸ್ ಪಡೆಯಬೇಕು. ಅವರ ವಿರುದ್ಧ ದೇಶದ್ರೋಹದ ಪ್ರಕರಣ ದಾಖಲಿಸಬೇಕು ಎಂಬ ಒತ್ತಾಯ ವ್ಯಾಪಕವಾಗಿ ಕೇಳಿ ಬಂದಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG
ಇನ್ನಷ್ಟು ಸುದ್ದಿಗಳು
ದೇಶ ವಿಭಜನೆಯಾಗಲು ಅಂದಿನ ಕಾಂಗ್ರೆಸ್ ನಾಯಕರೇ ಕಾರಣ | ಅಸಾದುದ್ದಿನ್ ಓವೈಸಿ ಗುಡುಗು
KSRTC ಬಸ್ ನಲ್ಲಿ ಜೋರಾಗಿ ಹಾಡು ಹಾಕಿದರೆ ಶಿಸ್ತು ಕ್ರಮ: ಶಿಕ್ಷೆ ಏನು ಗೊತ್ತಾ?
ಯುವಕನನ್ನು ಹೆಗಲ ಮೇಲೆ ಹೊತ್ತು ರಕ್ಷಿಸಿದ ಮಹಿಳಾ ಇನ್ಸ್ ಪೆಕ್ಟರ್ ರಾಜೇಶ್ವರಿಗೆ ಸಿಎಂ ಸ್ಟಾಲಿನ್ ಅಭಿನಂದನೆ
ತಾಯಿ ಮೃತಪಟ್ಟರೂ ಗರ್ಭದಲ್ಲಿದ್ದ ಮಗುವನ್ನು ರಕ್ಷಿಸಿದ ವೈದ್ಯರು! | ಅಪರೂಪದ ಘಟನೆ
ಕಾಲೇಜುಗಳಲ್ಲಿ ಕನ್ನಡ ಕಲಿಕೆ ಕಡ್ಡಾಯ: ಶಿಕ್ಷಣದಲ್ಲಿ ರಾಜಕೀಯ ಏಕೆ ಬೆರೆಸುತ್ತಿದ್ದೀರಿ | ಹೈಕೋರ್ಟ್ ಪ್ರಶ್ನೆ