ಲೈಂಗಿಕ ಕಿರುಕುಳ ಆರೋಪದಿಂದ ನೊಂದು ಖಿನ್ನತೆಗೆ ಜಾರಿದ್ದ ವ್ಯಕ್ತಿ ಸಾವು!
ಪುತ್ತೂರು: ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿಯಲ್ಲಿ ಬಂಧಿತರಾಗಿ ಜಾಮೀನಿನ ಮೇಲೆ ಬಿಡುಗಡೆಗೊಂಡಿದ್ದ ವ್ಯಕ್ತಿಯೊಬ್ಬರು ಖಿನ್ನತೆಗೆ ಜಾರಿ ಊಟ, ನಿದ್ದೆ ಬಿಟ್ಟು ಅಸ್ವಸ್ಥಗೊಂಡು ಮೃತಪಟ್ಟ ಘಟನೆ ಪುತ್ತೂರು ತಾಲೂಕಿನ ಬಡಗನ್ನೂರು ಗ್ರಾಮದ ಪಟ್ಟೆ ಎಂಬಲ್ಲಿ ನಡೆದಿದೆ.
52 ವರ್ಷ ವಯಸ್ಸಿನ ಆದಂ ಕುಂಞಿ ಮೃತಪಟ್ಟವರು ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ ಎರಡು ದಿನಗಳ ಹಿಂದೆ ಅವರು ತೀವ್ರವಾಗಿ ಅಸ್ವಸ್ಥರಾದ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೇ ಅವರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ
ಬೀಡಿ ಬ್ರಾಂಚ್ ಕೆಲಸ ಮಾಡುತ್ತಿದ್ದ ಆದಂ ಕುಂಞಿ ಮೇಲೆ ಬಾಲಕಿಯೋರ್ವಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ಪೋಕ್ಸೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಸಂಬಂಧ ಬಂಧಿತರಾಗಿದ್ದ ಆದಂ, 12 ದಿನಗಳ ನ್ಯಾಯಾಂಗ ಬಂಧನದಲ್ಲಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು.
ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆಯಲ್ಲಿ ತೀವ್ರವಾಗಿ ಖಿನ್ನತೆಗೆ ಜಾರಿದ್ದ ಅವರು, ಊಟ ಹಾಗೂ ನಿದ್ದೆ ಮಾಡದೇ ಕೊರಗುತ್ತಿದ್ದರು ಎಂದು ಕುಟುಂಬಸ್ಥರು ತಿಳಿಸಿದ್ದಾರೆ ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG
ಇನ್ನಷ್ಟು ಸುದ್ದಿಗಳು
ಪ್ಲೈಓವರ್ ನಲ್ಲಿ ಸೆಲ್ಫಿ ತೆಗೆಯುತ್ತಿದ್ದ ವೇಳೆ ಹಾಲಿನ ವಾಹನ ಡಿಕ್ಕಿ: ಇಬ್ಬರು ಯುವಕರ ದಾರುಣ ಸಾವು
ಬೀದಿ ಬದಿ ಮಲಗಿದ್ದ ಭಿಕ್ಷುಕಿಯ ಮೇಲೆ ಅತ್ಯಾಚಾರ, ಭೀಕರ ಕೊಲೆ
ಆಟೋ ಚಾಲಕನನ್ನು ಶೌಚಾಲಯಕ್ಕೆ ಎಳೆದೊಯ್ದು ವಿವಸ್ತ್ರಗೊಳಿಸಿ ವೈದ್ಯರ ತಂಡದಿಂದ ಹೇಯ ಕೃತ್ಯ!
ಲಖಿಂಪುರ ಖೇರಿ ಹಿಂಸಾಚಾರ ಬಿಜೆಪಿಗೆ ಹಾನಿಯುಂಟು ಮಾಡಬಹುದು | ಸಮೀಕ್ಷೆ
ಕಂಗನಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವುದು ಯಾವಾಗ? | ಹುತಾತ್ಮ ವೀರರ ತ್ಯಾಗಕ್ಕೆ ಘೋರ ಅವಮಾನ
ದೇಶ ವಿಭಜನೆಯಾಗಲು ಅಂದಿನ ಕಾಂಗ್ರೆಸ್ ನಾಯಕರೇ ಕಾರಣ | ಅಸಾದುದ್ದಿನ್ ಓವೈಸಿ ಗುಡುಗು
KSRTC ಬಸ್ ನಲ್ಲಿ ಜೋರಾಗಿ ಹಾಡು ಹಾಕಿದರೆ ಶಿಸ್ತು ಕ್ರಮ: ಶಿಕ್ಷೆ ಏನು ಗೊತ್ತಾ?