ದತ್ತ ಮಾಲಾಧಾರಿಗಳಿದ್ದ ಬಸ್ ಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ!
ಕೋಲಾರ: ದತ್ತ ಮಾಲಾಧಾರಿಗಳು ಪ್ರಯಾಣಿಸುತ್ತಿದ್ದ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿರುವ ಘಟನೆ ಕೋಲಾರ ಜಿಲ್ಲೆಯಲ್ಲಿ ನಡೆದಿದ್ದು, ಚಿಕ್ಕಮಗಳೂರಿನ ಬಾಬಾಬುಡ್ಡನಗಿರಿಯ ದತ್ತಪೀಠಕ್ಕೆ ಹೊರಟಿದ್ದ ಮಿನಿ ಬಸ್ ಗೆ ರಾತ್ರಿ 11 ಗಂಟೆಯ ಸುಮಾರಿಗೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ಹೇಳಲಾಗಿದೆ.
ಕೋಲಾರದ ಕ್ಲಾಕ್ ಟವರ್ ಬಳಿಯ ವಿಶಾಲ್ ಮಾರ್ಟ್ ಎದುರು ಬಸ್ ಗೆ ಕಲ್ಲು ತೂರಾಟ ನಡೆಸಲಾಗಿದೆ ಎಂದು ತಿಳಿದು ಬಂದಿದೆ. ವರದಿಗಳ ಪ್ರಕಾರ, ವಿಶಾಲ್ ಮಾರ್ಟ್ ಎದುರು ಎರಡು ಗುಂಪುಗಳ ನಡುವೆ ಕ್ಷುಲ್ಲಕ ಕಾರಣಕ್ಕಾಗಿ ಗಲಾಟೆ ನಡೆದು, ವಸೀಂಬೇಗ್ ಎಂಬುವವರಿಗೆ ರೌಡಿ ಶೀಟರ್ ಗಳಾದ ಅಕ್ಬರ್, ಎಜಾಜ್ ಮತ್ತು ಜುಮ್ಮು ಎಂಬುವವರಿಂದ ಚಾಕು ಇರಿತವಾಗಿತ್ತು. ಈ ಸಂಬಂಧ ಮೂರು ಜನಕ್ಕೆ ಗಾಯಗಳಾಗಿ ಎಲ್ಲರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಸ್ಥಳದಲ್ಲಿ ಮಾತ್ರ ಜನರು ಗುಂಪು ಗುಂಪಾಗಿ ಹಾಗೆಯೇ ನಿಂತಿದ್ದರು. ಈ ವೇಳೆ ಘೋಷಣೆಗಳನ್ನು ಕೂಗುತ್ತಾ ದತ್ತಮಾಲಾಧಾರಿಗಳಿದ್ದ ಬಸ್ ಅದೇ ಮಾರ್ಗವಾಗಿ ತೆರಳುತ್ತಿತ್ತು. ಆಗ ಅಲ್ಲಿದ್ದ ಕೆಲವು ಕಿಡಿಗೇಡಿಗಳು ಇದ್ದಕ್ಕಿದಂತೆ ಬಸ್ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ. ಅಲ್ಲದೆ ಬಸ್ ಅಡ್ಡಗಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ.
ವಿಷಯ ತಿಳಿದ ಕೋಲಾರ ನಗರ ಠಾಣಾ ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಯಂತ್ರಿಸಿದ್ದಾರೆ. ಇದಾದ ಬಳಿಕ ಶ್ರೀರಾಮ ಸೇನೆ ಕಾರ್ಯಕರ್ತರು ಹಾಗೂ ದತ್ತ ಮಾಲಾಧಾರಿಗಳು ಕೋಲಾರ ನಗರ ಠಾಣೆ ಎದುರು ಪ್ರತಿಭಟನೆ ನಡೆಸಿ, ಕಿಡಿಗೇಡಿಗಳನ್ನು ಬಂಧಿಸುವಂತೆ ಪ್ರತಿಭಟನೆ ಮಾಡಿದ್ದಾರೆ. ಘಟನೆ ಹಿನ್ನೆಲೆಯಲ್ಲಿ ನಗರದಾದ್ಯಂತ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG
ಇನ್ನಷ್ಟು ಸುದ್ದಿಗಳು
4 ಕೋಟಿಯ ಚಿನ್ನಾಭರಣ ಕಳವು: ಮಗಳ ವಿರುದ್ಧವೇ ದೂರು ನೀಡಿದ ತಾಯಿ!
ಇನ್ನೂ 10 ಮಂದಿಗೆ ದೃಷ್ಟಿ ನೀಡಲಿದೆ ಪುನೀತ್ ರಾಜ್ ಕುಮಾರ್ ಕಣ್ಣುಗಳು!
ಕಡಬ: ರಾತ್ರಿ ವೇಳೆ ತೋಟಕ್ಕೆ ನುಗ್ಗಿ ಬೆಳೆ ಧ್ವಂಸಗೊಳಿಸಿದ ಕಾಡಾನೆ
ನನ್ನ ಸಾವಿಗೆ ಪಕ್ಷದ ಮುಖಂಡರೇ ಕಾರಣ ಎಂದು ಸ್ಟೇಟಸ್ ಹಾಕಿ ಕಾಂಗ್ರೆಸ್ ಸದಸ್ಯೆ ಆತ್ಮಹತ್ಯೆಗೆ ಯತ್ನ!
ಲೈಂಗಿಕ ಕಿರುಕುಳ ಆರೋಪದಿಂದ ನೊಂದು ಖಿನ್ನತೆಗೆ ಜಾರಿದ್ದ ವ್ಯಕ್ತಿ ಸಾವು!
ಬೀದಿ ಬದಿ ಮಲಗಿದ್ದ ಭಿಕ್ಷುಕಿಯ ಮೇಲೆ ಅತ್ಯಾಚಾರ, ಭೀಕರ ಕೊಲೆ
ಆಟೋ ಚಾಲಕನನ್ನು ಶೌಚಾಲಯಕ್ಕೆ ಎಳೆದೊಯ್ದು ವಿವಸ್ತ್ರಗೊಳಿಸಿ ವೈದ್ಯರ ತಂಡದಿಂದ ಹೇಯ ಕೃತ್ಯ!
ಕಂಗನಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವುದು ಯಾವಾಗ? | ಹುತಾತ್ಮ ವೀರರ ತ್ಯಾಗಕ್ಕೆ ಘೋರ ಅವಮಾನ