ಗೋವು, ಸೆಗಣಿ, ಗೋಮೂತ್ರ ಆರ್ಥಿಕತೆಯನ್ನು ಬಲಪಡಿಸುತ್ತದೆ: ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ - Mahanayaka
7:25 AM Thursday 12 - December 2024

ಗೋವು, ಸೆಗಣಿ, ಗೋಮೂತ್ರ ಆರ್ಥಿಕತೆಯನ್ನು ಬಲಪಡಿಸುತ್ತದೆ: ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ

shivaraj singh
14/11/2021

ಭೋಪಾಲ್: ಗೋವು, ಸೆಗಣಿ ಹಾಗೂ ಅದರ ಮೂತ್ರವು ವ್ಯಕ್ತಿಯ ಆರ್ಥಿಕ ಸ್ಥಿತಿಯನ್ನು ಬಲಪಡಿಸುತ್ತದೆ ಹಾಗೂ ದೇಶವನ್ನು ಆರ್ಥಿಕವಾಗಿ ಸಮರ್ಥವಾಗಿಸುತ್ತದೆ ಎಂದು ಮಧ್ಯ ಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಶನಿವಾರ ಹೇಳಿದ್ದಾರೆ.

ಮಹಿಳಾ ಪಶುವೈದ್ಯರ ಸಮಾವೇಶದಲ್ಲಿ ಮಾತನಾಡಿದ ಮುಖ್ಯಮಂತ್ರಿ, ಸರ್ಕಾರವು  ಗೋವುಗಳ ರಕ್ಷಣೆಗಾಗಿ ಗೋಶಾಲೆಗಳನ್ನು ಸ್ಥಾಪಿಸಿದೆ. ಆದರೆ, ಅವುಗಳು ಸರಿಯಾಗಿ ಕಾರ್ಯನಿರ್ವಹಿಸಲು ಸಮಾಜದ ಪಾಲ್ಗೊಳ್ಳುವಿಕೆ ಅಗತ್ಯ, ನಾವು ನಮ್ಮ ದೇಶದ ಆರ್ಥಿಕತೆಯನ್ನು  ಗೋವುಗಳು, ಅವುಗಳ ಸೆಗಣಿ ಮತ್ತು ಮೂತ್ರದ ಮೂಲಕ ಸದೃಢಗೊಳಿಸಬಹುದು. ಮರದ ಬಳಕೆಯನ್ನು ಕಡಿಮೆ ಮಾಡಲು ಮಧ್ಯಪ್ರದೇಶದ ಚಿತಾಗಾರದಲ್ಲಿ ಗೋಕಾಷ್ಟವನ್ನು ಬಳಸಲಾಗುತ್ತಿದೆ ಎಂದು ಅವರು ಇದೇ ಸಂದರ್ಭದಲ್ಲಿ ತಿಳಿಸಿದರು.

ಸಣ್ಣ ರೈತರು ಮತ್ತು ಜಾನುವಾರ ಮಾಲಿಕರಿಗೆ ದನ ಸಾಕಾಣೆ ಹೇಗೆ ಲಾಭದಾಯಕ ವ್ಯವಹಾರವಾಗಬಲ್ಲದು ಎಂಬ ಬಗ್ಗೆ  ಪಶುವೈದ್ಯರು ಮತ್ತು ತಜ್ಞರು ಫಲಿತಾಂಶ ಆಧಾರಿತ ಕೆಲಸದಲ್ಲಿ ತೊಡಗಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಇನ್ನಷ್ಟು ಸುದ್ದಿಗಳು

ನಿರಂತರ ಮಳೆಗೆ ಕುಸಿದು ಬಿದ್ದ ಗೋಡೆ: ಯುವ ದಂಪತಿಯ ದಾರುಣ ಸಾವು

ದತ್ತ ಮಾಲಾಧಾರಿಗಳಿದ್ದ ಬಸ್ ಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ!

ಇನ್ನೂ 10 ಮಂದಿಗೆ ದೃಷ್ಟಿ ನೀಡಲಿದೆ ಪುನೀತ್ ರಾಜ್ ಕುಮಾರ್ ಕಣ್ಣುಗಳು!

ನನ್ನ ಸಾವಿಗೆ ಪಕ್ಷದ ಮುಖಂಡರೇ ಕಾರಣ ಎಂದು ಸ್ಟೇಟಸ್ ಹಾಕಿ ಕಾಂಗ್ರೆಸ್ ಸದಸ್ಯೆ ಆತ್ಮಹತ್ಯೆಗೆ ಯತ್ನ!

ಆಟೋ ಚಾಲಕನನ್ನು ಶೌಚಾಲಯಕ್ಕೆ ಎಳೆದೊಯ್ದು ವಿವಸ್ತ್ರಗೊಳಿಸಿ ವೈದ್ಯರ ತಂಡದಿಂದ ಹೇಯ ಕೃತ್ಯ!

ಕಂಗನಾ ವಿರುದ್ಧ ದೇಶದ್ರೋಹ ಪ್ರಕರಣ ದಾಖಲಿಸುವುದು ಯಾವಾಗ? | ಹುತಾತ್ಮ ವೀರರ ತ್ಯಾಗಕ್ಕೆ ಘೋರ ಅವಮಾನ

ಆಟೋ ಚಾಲಕನನ್ನು ಶೌಚಾಲಯಕ್ಕೆ ಎಳೆದೊಯ್ದು ವಿವಸ್ತ್ರಗೊಳಿಸಿ ವೈದ್ಯರ ತಂಡದಿಂದ ಹೇಯ ಕೃತ್ಯ!

ಲಖಿಂಪುರ ಖೇರಿ ಹಿಂಸಾಚಾರ ಬಿಜೆಪಿಗೆ ಹಾನಿಯುಂಟು ಮಾಡಬಹುದು | ಸಮೀಕ್ಷೆ

ಇತ್ತೀಚಿನ ಸುದ್ದಿ