ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರಿಗೆ ಮಾತೃ ವಿಯೋಗ
ಲಕ್ನೋ: ಬಹುಜನ ಸಮಾಜ ಪಾರ್ಟಿ(BSP) ಮುಖ್ಯಸ್ಥೆ ಮಾಯಾವತಿ ಅವರು ತಾಯಿ 92 ವರ್ಷ ವಯಸ್ಸಿನ ರಾಮರತಿ ಅವರು ನಿನ್ನೆ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದು, ದೆಹಲಿಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ನಿಧನರಾಗಿದ್ದಾರೆ ಎಂದು ಬಿಎಸ್ ಪಿ ಮುಖಂಡರು ತಿಳಿಸಿದ್ದಾರೆ.
ಇಂದು ದೆಹಲಿಯಲ್ಲಿ ರಾಮರತಿ ಅವರ ಅಂತ್ಯಕ್ರಿಯೆ ನಡೆಯಲಿದೆ. ತಾಯಿಯ ನಿಧನದ ಸುದ್ದಿ ತಿಳಿದು ಮಾಯಾವತಿ ಅವರು ಲಕ್ನೋನಿಂದ ದೆಹಲಿಗೆ ತೆರಳಿದ್ದಾರೆ. ಕಳೆದ ವರ್ಷ ಮಾಯಾವತಿ ಅವರು ತಮ್ಮ ತಂದೆ ಪ್ರಭು ದಯಾಳ್ ಅವರನ್ನು ಕಳೆದುಕೊಂಡಿದ್ದರು. ಈ ವರ್ಷ ತಾಯಿ ರಾಮರತಿ ಅವರನ್ನೂ ಕಳೆದುಕೊಂಡಿದ್ದಾರೆ.
ಮಾಯಾವತಿ ಅವರ ತಾಯಿ ನಿಧನ ಹೊಂದಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್, ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್, ಬಿಜೆಪಿ ರಾಜ್ಯಾಧ್ಯಕ್ಷ ಸ್ವತಂತ್ರ ದೇವ್ ಸಿಂಗ್ ಸೇರಿದಂತೆ ಹಲವು ರಾಜಕೀಯ ಮುಖಂಡರು ಪಕ್ಷದ ಮುಖಂಡರು ಸಂತಾಪ ಸೂಚಿಸಿದ್ದಾರೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG
ಇನ್ನಷ್ಟು ಸುದ್ದಿಗಳು
ಪುನೀತ್ ಗೆ ಅವಮಾನ ಆರೋಪ: “ಅದು ಶಾಂಪೇನ್ ಬಾಟಲಿ ಆಗಿರಲಿಲ್ಲ” | ರಕ್ಷಿತಾ ಪ್ರೇಮ್ ಸ್ಪಷ್ಟನೆ
ಪುನೀತ್ ಎಲ್ಲ ಚಿತ್ರಗಳಲ್ಲಿಯೂ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದ್ದಾರೆ | ರಮೇಶ್ ಜಾರಕಿಹೊಳಿ ಭಾವುಕ
ಗೋವು, ಸೆಗಣಿ, ಗೋಮೂತ್ರ ಆರ್ಥಿಕತೆಯನ್ನು ಬಲಪಡಿಸುತ್ತದೆ: ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ
ನಿರಂತರ ಮಳೆಗೆ ಕುಸಿದು ಬಿದ್ದ ಗೋಡೆ: ಯುವ ದಂಪತಿಯ ದಾರುಣ ಸಾವು
ದತ್ತ ಮಾಲಾಧಾರಿಗಳಿದ್ದ ಬಸ್ ಗೆ ಕಿಡಿಗೇಡಿಗಳಿಂದ ಕಲ್ಲು ತೂರಾಟ!
4 ಕೋಟಿಯ ಚಿನ್ನಾಭರಣ ಕಳವು: ಮಗಳ ವಿರುದ್ಧವೇ ದೂರು ನೀಡಿದ ತಾಯಿ!
ಇನ್ನೂ 10 ಮಂದಿಗೆ ದೃಷ್ಟಿ ನೀಡಲಿದೆ ಪುನೀತ್ ರಾಜ್ ಕುಮಾರ್ ಕಣ್ಣುಗಳು!
ನನ್ನ ಸಾವಿಗೆ ಪಕ್ಷದ ಮುಖಂಡರೇ ಕಾರಣ ಎಂದು ಸ್ಟೇಟಸ್ ಹಾಕಿ ಕಾಂಗ್ರೆಸ್ ಸದಸ್ಯೆ ಆತ್ಮಹತ್ಯೆಗೆ ಯತ್ನ!