ರಚಿತಾ ರಾಮ್ “ಫಸ್ಟ್ ನೈಟ್” ಹೇಳಿಕೆಗೆ ಆಕ್ಷೇಪ: ಕ್ಷಮೆಯಾಚನೆಗೆ ಒತ್ತಾಯ
ಚಾಮರಾಜನಗರ: ‘ಲವ್ ಯೂ ರಚ್ಚು’ ಚಿತ್ರದ ವಿಚಾರವಾಗಿ ‘ಫಸ್ಟ್ ನೈಟ್’ ಹೇಳಿಕೆಗೆ ಸಂಬಂಧಿಸಿದಂತೆ ನಟಿ ರಚಿತಾ ರಾಮ್ ಕ್ಷಮೆಯಾಚಿಸಬೇಕು ಎಂದು ಕನ್ನಡ ಕ್ರಾಂತಿ ದಳ ಆಗ್ರಹಿಸಿದ್ದು, ನಿನ್ನೆ ಮೊನ್ನೆ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟ ಸ್ಯಾಂಡಲ್ ವುಡ್ ನಟಿ ರಚಿತಾ ರಾಮ್ ಅಸಭ್ಯವಾಗಿ ಮಾತನಾಡಿಮ ಕನ್ನಡ ಚಿತ್ರರಂಗದ ಇತಿಹಾಸಕ್ಕೆ ಧಕ್ಕೆ ಉಂಟು ಮಾಡಿದ್ದಾರೆ ಎಂದು ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಹಾಡಿನಲ್ಲಿರುವ ರೊಮಾನ್ಸ್ ದೃಶ್ಯಗಳಿಗೆ ಸಂಬಂಧಿಸಿದಂತೆ ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ರಚಿತಾ ರಾಮ್ ದೃಶ್ಯಕ್ಕೆ ಅನುಗುಣವಾಗಿ ಉತ್ತರಿಸುತ್ತಾ, “ಫಸ್ಟ್ ನೈಟ್ ನಲ್ಲಿ ಎಲ್ಲರೂ ಏನ್ ಮಾಡ್ತಾರೆ? ಎಂದು ಅವರೇ ಪ್ರಶ್ನೆ ಕೇಳಿ, ರೊಮಾನ್ಸ್ ಮಾಡ್ತಾರೆ ಎಂದು ಅವರೇ ಉತ್ತರಿಸಿದ್ದರು. ಚಿತ್ರಕ್ಕೆ ಸಂಬಂಧಿಸಿದಂತೆ ಅವರು ನೀಡಿದ್ದ ಹೇಳಿಕೆ ವೈರಲ್ ಆಗಿತ್ತು.
ರಚಿತಾ ರಾಮ್ ಹೇಳಿಕೆಯ ಬಗ್ಗೆ ಕನ್ನಡ ಕ್ರಾಂತಿ ದಳ ಕರೆದ ಪತ್ರಿಕಾಗೋಷ್ಠಿಯಲ್ಲಿ ಸಂಘಟನೆಯ ಮುಖಂಡರು ಆಕ್ರೋಶ ವ್ಯಕ್ತಪಡಿಸಿದ್ದು, ಫಸ್ಟ್ ನೈಟ್ ಹೇಳಿಕೆಗೆ ರಚಿತಾ ರಾಮ್ ಅವರು ಬಹಿರಂಗವಾಗಿ ಕ್ಷಮೆಯಾಚಿಸಬೇಕು ಎಂದು ಆಗ್ರಹಿಸಿದೆ ಎಂದು ವರದಿಯಾಗಿದೆ.
ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG
ಇನ್ನಷ್ಟು ಸುದ್ದಿಗಳು
ಬಿಎಸ್ ಪಿ ಮುಖ್ಯಸ್ಥೆ ಮಾಯಾವತಿ ಅವರಿಗೆ ಮಾತೃ ವಿಯೋಗ
ಪುನೀತ್ ಗೆ ಅವಮಾನ ಆರೋಪ: “ಅದು ಶಾಂಪೇನ್ ಬಾಟಲಿ ಆಗಿರಲಿಲ್ಲ” | ರಕ್ಷಿತಾ ಪ್ರೇಮ್ ಸ್ಪಷ್ಟನೆ
ಪುನೀತ್ ಎಲ್ಲ ಚಿತ್ರಗಳಲ್ಲಿಯೂ ಸಮಾಜಕ್ಕೆ ಒಳ್ಳೆಯ ಸಂದೇಶ ನೀಡಿದ್ದಾರೆ | ರಮೇಶ್ ಜಾರಕಿಹೊಳಿ ಭಾವುಕ
ಗೋವು, ಸೆಗಣಿ, ಗೋಮೂತ್ರ ಆರ್ಥಿಕತೆಯನ್ನು ಬಲಪಡಿಸುತ್ತದೆ: ಶಿವರಾಜ್ ಸಿಂಗ್ ಚೌಹಾಣ್ ಹೇಳಿಕೆ
ನಿರಂತರ ಮಳೆಗೆ ಕುಸಿದು ಬಿದ್ದ ಗೋಡೆ: ಯುವ ದಂಪತಿಯ ದಾರುಣ ಸಾವು