ಬಿಗ್ ನ್ಯೂಸ್: ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ಮೋದಿ ಸರ್ಕಾರ! - Mahanayaka
12:23 AM Tuesday 4 - February 2025

ಬಿಗ್ ನ್ಯೂಸ್: ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದ ಮೋದಿ ಸರ್ಕಾರ!

modi
19/11/2021

ನವದೆಹಲಿ: ಭಾರೀ ಚರ್ಚೆ ಹಾಗೂ ರೈತರ ರಕ್ತ ಹರಿಯಲು ಕಾರಣವಾಗಿದ್ದ ಕೇಂದ್ರ ಸರ್ಕಾರದ ಮೂರು ವಿವಾದಿತ ಕೃಷಿ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಾಗಿ ಕೊನೆಗೂ ಪ್ರಧಾನಿ ಮೋದಿ ಘೋಷಿಸಿದ್ದು, ರೈತರ ತೀವ್ರ ಹೋರಾಟ, ಬಲಿದಾನಕ್ಕೆ ಕೊನೆಗೂ ನ್ಯಾಯದೊರಕಿದಂತಾಗಿದೆ.

ಕೃಷಿ ತಿದ್ದುಪಡಿ ಕಾಯ್ದೆ ಹಿಂಪಡೆಯಲು ರೈತರ ನಿರಂತರ ಹೋರಾಟದ ಹಿನ್ನೆಲೆಯಲ್ಲಿ ಕಾಯ್ದೆಗಳನ್ನು ವಾಪಸ್ ತೆಗೆದುಕೊಳ್ಳುತ್ತಿದ್ದೇವೆ.  ಇದೇ ತಿಂಗಳು ಸಂಸತ್ತಿನಲ್ಲಿ ಈ ಕಾಯ್ದೆಗಳನ್ನು ವಾಪಸ್ ಪಡೆದುಕೊಳ್ಳುವುದಾಗಿ ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ.

ಇನ್ನೂ ಕೃಷಿ ಕಾಯ್ದೆಗಳ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯಲು  ಕೇಂದ್ರ ಹಾಗೂ ರಾಜ್ಯ ಸರ್ಕಾರ, ರೈತರು ಮತ್ತು ಕೃಷಿ ತಜ್ಞರ ಸಮಿತಿಯನ್ನು ರಚಿಸುತ್ತೇವೆ ಎಂದು ಪ್ರಧಾನಿ ಇದೇ ಸಂದರ್ಭದಲ್ಲಿ ತಿಳಿಸಿದರು.

ಇನ್ನೂ ವಿವಾದಿತ ಕೃಷಿ ತಿದ್ದುಪಡಿ ಕಾಯ್ದೆಗಳನ್ನು ವಾಪಸ್ ಪಡೆದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರದ ನಿರ್ಧಾರವನ್ನು ಅಕಾಲಿ ದಳ ಸ್ವಾಗತಿಸಿದೆ. ಈ ಹೋರಾಟದಲ್ಲಿ ನೂರಾರು ರೈತರು ಪ್ರಾಣ ಕಳೆದುಕೊಂಡಿದ್ದಾರೆ. ಇದು ಎಲ್ಲ ರೈತರಿಗೆ ದೊರೆತ ಗೆಲುವು ಎಂದು ಆಲ್ ಇಂಡಿಯಾ ಕಿಸಾನ್ ಸಭಾ ಸ್ವಾಗತಿಸಿದೆ.

ಮಹಾನಾಯಕ ಮಾಧ್ಯಮದ ಸುದ್ದಿಗಳನ್ನು ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 8088059494 ನಂಬರ್ ಸೇರಿಸಿ. ನಿರಂತರ ಸುದ್ದಿಗಳನ್ನು ಪಡೆಯಿರಿ…

ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/BRIYGgDbk8oI4UQjEMqwIG

ಡೈಲಿ ಹಂಟ್ ನಲ್ಲಿ ಫಾಲೋ ಮಾಡಿ: https://profile.dailyhunt.in/mahanayaka

ಇನ್ನಷ್ಟು ಸುದ್ದಿಗಳು

ರಾಜ್ಯಾದ್ಯಂತ ಭಾರೀ ಮಳೆ ಸಾಧ್ಯತೆ | 6 ಜಿಲ್ಲೆಗಳಲ್ಲಿ ರೆಡ್ ಅಲಾರ್ಟ್ ಘೋಷಣೆ: ಶಾಲೆಗಳಿಗೆ ರಜೆ ಘೋಷಣೆ

ಬೆಂಗಳೂರು: ನದಿಯಂತಾದ ರಸ್ತೆ, ವ್ಯಾಪಾರ ಕಳೆದುಕೊಂಡ ವ್ಯಾಪಾರಿಗಳು | ಭಾರೀ ಮಳೆಗೆ ಜನ ಜೀವನ ಅಸ್ತವ್ಯಸ್ತ

ಹಂಸಲೇಖ ವಿರುದ್ಧ ದೂರು ನೀಡಿದ ವ್ಯಕ್ತಿಯ ವಿರುದ್ಧವೂ ದೂರು ದಾಖಲು

ಹೌದು ನಾನು ಕಿರುಚುವ ಬೊಬ್ಬೆ ಹೊಡೆಯುವ ‘ಕಲ್ಕಿಂಗ್ ಸ್ಟಾರ್’ | ಟೀಕಾಕಾರರಿಗೆ ದೀಪು ಶೆಟ್ಟಿಗಾರ್ ತಿರುಗೇಟು

ಅತಿಥಿಯಾಗಲು ಸದಾ ಸಿದ್ಧ ಆತಿಥೇಯರಾಗುವಿರಾ ?

ಶ್ರೀರಾಮ ಸೇನೆಯ ಮುಖಂಡ ಪ್ರಮೋದ್ ಮುತಾಲಿಕ್ ಗೆ ಕೋಲಾರ ಪ್ರವೇಶಕ್ಕೆ ನಿರ್ಬಂಧ!

ಇತ್ತೀಚಿನ ಸುದ್ದಿ